ಮತಗಟ್ಟೆಯ PRO- APROಗಳು ಜವಾಬ್ದಾರಿಯಿಂದ ಕೆಲಸ ಮಾಡಿ: ಜಿಲ್ಲಾಧಿಕಾರಿ ಆರ್.ಲತಾ ಸೂಚನೆ
Team Udayavani, Dec 17, 2020, 5:36 PM IST
ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಲಘುವಾಗಿ ಪರಿಗಣಿಸದೆ ಚುನಾವಣಾ ಆಯೋಗ ನೀಡಿರುವ ನಿದೇಶನ ಮತ್ತು ಮಾರ್ಗಸೂಚಿಗಳನ್ವಯ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.
ಜಿಲ್ಲೆಯ ಶಿಡ್ಲಘಟ್ಟ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮತಗಟ್ಟೆಯ ಪಿಆರ್ ಓ-ಎಪಿಆರ್ ಓಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅನೇಕ ಚುನಾವಣೆಗಳನ್ನು ನಡೆಸಿದ್ದೇವೆ ಎಂದು ಮೈಮರೆಯುವುದು ಬೇಡ ಎಷ್ಟು ಅನುಭವ ಹೊಂದಿದ್ದರು ಪ್ರತಿಯೊಂದು ಚುನಾವಣೆಯಲ್ಲಿ ಹೊಸದಾಗಿ ಕಲಿಯುವ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಚುನಾವಣೆಯನ್ನು ಸುಲಭವಾಗಿ ನಡೆಸಲು ಸಾಧ್ಯವೆಂದರು.
ಗ್ರಾಮ ಪಂಚಾಯಿತಿ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಚುನಾವಣಾ ಆಯೋಗದಿಂದ ಮಾರ್ಗಸೂಚಿ ಮತ್ತು ಆದೇಶಗಳ ಕೈಪಿಡಿಯನ್ನು ಅದನ್ನು ಓದಿ ಚುನಾವಣೆಯನ್ನು ಯಾವುದೇ ರೀತಿಯ ಲೋಪದೋಷವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ಚುನಾವಣೆಯನ್ನು ಉತ್ತಮವಾಗಿ ನಿರ್ವಹಿಸುತ್ತೇನೆ ಎಂಬ ವಿಶ್ವಾಸವಿರಲಿ ಆದರೇ ಅತಿ ವಿಶ್ವಾಸಬೇಡ ತರಬೇತಿಯ ವೇಳೆಯಲ್ಲಿ ಅನುಮಾನಗಳು ಮತ್ತು ಗೊಂದಲಗಳನ್ನು ನಿವಾರಿಸಿಕೊಳ್ಳಬೇಕೆಂದು ಸಲಹೆ ನೀಡಿ ಜಾಗೃತರಾಗಿ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದರು.
ಇದನ್ನೂ ಓದಿ:ವಿಕಲಚೇತನ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ ಕೃತ್ಯ ಖಂಡಿಸಿ ವಿಕಲಚೇತನರ ಪ್ರತಿಭಟನೆ
ರಾಜ್ಯ ಚುನಾವಣಾ ಆಯೋಗದಿಂದ ಜಾರಿಗೊಳಿಸುವ ಆದೇಶದಂತೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಾರದರ್ಶಕವಾಗಿ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವ ಜೊತೆಗೆ ಮತಗಟ್ಟೆ ಕೇಂದ್ರಗಳಿಗೆ ಯಾವ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಪರಿಶೀಲನೆ ನಡೆಸಲಾಗುತ್ತಿದೆ ಜೊತೆಗೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅವರಿಗೆ ಸಕಲ ಸೌಲಭ್ಯಗಳನ್ನು ಒದಗಿಸಲು ಸೂಚನೆ ನೀಡಲಾಗಿದ್ದು ಒಂದು ವೇಳೆಯಲ್ಲಿ ಚುನಾವಣೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಪಿಆರ್ ಓ-ಎಪಿಆರ್ ಓಗಳು ಗಂಭೀರ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವುದನ್ನು ಕಂಡು ಬಂದರೇ ಪರ್ಯಾಯ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಅರುಂಧತಿ,ಉಪ ತಹಶೀಲ್ದಾರ್ ಮಂಜುನಾಥ್,ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಚುನಾವಣಾ ಶಾಖೆಯ ಸಾಧಿಕ್‍ಪಾಷ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಮುನಿರಾಜು, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ತಾಲೂಕು ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ನರಸಿಂಹಮೂರ್ತಿ, ರಾಜಸ್ವ ನಿರೀಕ್ಷಕ ಪ್ರಶಾಂತ್ ಮತಗಟ್ಟೆಯ ಪಿಆರ್ ಓ-ಎಪಿಆರ್ ಓಗಳು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.