ಎಷ್ಟೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರುವೆ ಕೊಹ್ಲಿ!
Team Udayavani, Dec 17, 2020, 6:25 PM IST
ಅಡಿಲೇಡ್: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಆ ಅಮೂಲ್ಯ ಕ್ಷಣದಲ್ಲಿ ತನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಪ್ರಸ್ತುತ ಆಸ್ಟ್ರೇಲಿಯ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ಬಳಿಕ ಕೊಹ್ಲಿ ತವರಿಗೆ ಮರಳಲಿದ್ದಾರೆ.
ಆಸೀಸ್ ಆಟಗಾರ ಸ್ಟೀವನ್ ಸ್ಮಿತ್ ಜತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕೊಹ್ಲಿ, ನನ್ನ ಮನಸ್ಸಿನಲ್ಲಿ ಸ್ಪಷ್ಟ ನಿರ್ಧಾರವಿದೆ. ದೇಶಕ್ಕಾಗಿ ಆಡಲು ನಾವು ಬದ್ಧವಾಗಿರುವಂತೆಯೇ ಇದು ಜೀವನದ ಬಹಳ ವಿಶೇಷವಾದ ಕ್ಷಣವಾಗಿದೆ. ಆದ್ದರಿಂದ ಜೀವನದ ಅಮೂಲ್ಯ ಸಂದರ್ಭದಲ್ಲಿ ನನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ. ಇದಕ್ಕಿಂತ ದೊಡ್ಡ ಕ್ಷಣ ಮತ್ತೂಂದಿಲ್ಲ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಪತ್ನಿ ಜತೆ ಇರಲು ಬಯಸುತ್ತೇನೆ ಕೊಹ್ಲಿ ಎಂದು ಹೇಳಿದರು.
ಬಾಲ್ ಟ್ಯಾಂಪರಿಂಗ್ ವಿಚಾರವಾಗಿ ಪಂದ್ಯದ ವೇಳೆ ಸ್ಮಿತ್ ವಿರುದ್ಧದ ಘೋಷಣೆಯ ಸಂದರ್ಭವನ್ನು ನೆನಪಿಸಿಕೊಂಡ ಕೊಹ್ಲಿ, ಆಟಗಾರರನ್ನು ವೈಯಕ್ತಿಕವಾಗಿ ಗುರಿಯಾಗಿಸುವುದು ಸರಿಯಲ್ಲ. ಜನರು ತಪ್ಪುಗಳನ್ನು ಮಾಡುತ್ತಾರೆ ಮತ್ತು ಅದರಿಂದ ಕಲಿತುಕೊಳ್ಳುತ್ತಾರೆ. ಜೀವನದಲ್ಲಿ ಯಾವುದೂ ಶಾಶ್ವತವಲ್ಲ ಎಂದು ನಾನು ಭಾವಿಸುವುದಾಗಿ ಕೊಹ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.