ಕ್ರಿಸ್ಮಸ್, ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ : ಹಸ್ತಲಾಘವ, ಆಲಿಂಗನ ಬೇಡ
ಡಿ. 30ರಿಂದ ಜ.2ರ ವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಟಿ ನಿಷೇಧ
Team Udayavani, Dec 17, 2020, 11:03 PM IST
ಬೆಂಗಳೂರು: ಯಾವುದೇ ಕಾರಣಕ್ಕೂ ಹಸ್ತಲಾಘವ ಮಾಡಬೇಡಿ, ಪರಸ್ಪರ ಆಲಿಂಗನವನ್ನೂ ಮಾಡಿಕೊಳ್ಳಬೇಡಿ -ಇದು ಈ ವರ್ಷಾಂತ್ಯಕ್ಕೆ ಬರಲಿರುವ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂಬಂಧ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿರುವ ಪ್ರಮುಖ ಅಂಶಗಳು.
ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಹೊಸ ಮಾರ್ಗಸೂಚಿಗಳ ಸುತ್ತೋಲೆ ಹೊರಡಿಸಿದ್ದು, ಕ್ರಿಸ್ಮಸ್ ಸಂದರ್ಭದಲ್ಲಿ ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.
ನೋ ಪಾರ್ಟಿ
ಡಿ.30ರಿಂದ ಜ.2ರ ವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ, ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚು ಜನರು ಸೇರುವುದು, ಡಿಜೆ, ಡ್ಯಾನ್ಸ್ ಹಾಗೂ ವಿಶೇಷ ಯೋಜಿತ ಪಾರ್ಟಿಗಳನ್ನು ನಿಷೇಧಿಸಿದೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ, ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಜನರು ಸೇರುವುದು ಹಾಗೂ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯದಂತೆ ಸಾಮಾನ್ಯ ಚಟುವಟಿಕೆ ಕೈಗೊಳ್ಳಲು ನಿರ್ಬಂಧವಿಲ್ಲ. ಆಯ್ದ ರಸ್ತೆ, ಸ್ಥಳಗಳಿಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧ ವಿಧಿಸಬಹುದು.
ವೃದ್ಧರು, ಮಕ್ಕಳಿಗೆ ಹೆಚ್ಚು ನಿರ್ಬಂಧ
ಕೋವಿಡ್ ನಿಯಮದ ಪ್ರಕಾರ 65 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಿಂದ ಹೊರಗೆ ಬರುವಂತಿಲ್ಲ. ಪಬ್, ಮಾಲ್, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಕಡ್ಡಾಯ. ಹೊಟೇಲ್, ಮಾಲ್ ಪಬ್‌ಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಇರಿಸಬೇಕು.
ಹೊಟೇಲ್, ಮಾಲ್, ಪಬ್, ರೆಸ್ಟೋರೆಂಟ್‌ಗಳಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆನ್‌ಲೈನ್ ಮೂಲಕ ಬುಕ್ಕಿಂಗ್ ವ್ಯವಸ್ಥೆ ಹಾಗೂ ಸರತಿ ಸಾಲಿನಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಸರಕಾರದ ಮಾರ್ಗಸೂಚಿಯಂತೆ ಹಸುರು ಪಟಾಕಿ ಮಾತ್ರ ಬಳಕೆ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.