ಶಾಲೆ- ಕಾಲೇಜು ಆರಂಭದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಕೆ. ಸುಧಾಕರ್‌

Team Udayavani, Dec 18, 2020, 3:22 PM IST

ಶಾಲೆ- ಕಾಲೇಜು ಆರಂಭದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಕೆ. ಸುಧಾಕರ್‌

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿಯ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ನಗರದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಈ ಹಿಂದಿನಂತೆ ಶಿಕ್ಷಣ ಇಲಾಖೆ ಮತ್ತು ತಮ್ಮ ಇಲಾಖೆಗಳ ಜತೆ ಮುಖ್ಯಮಂತ್ರಿಯವರು ಸಭೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಇನ್ನೂ ಯಾವುದೇ ತೀರ್ಮಾನ ಆಗಿಲ್ಲವೆಂದು ಸ್ಪಷ್ಟಪಡಿಸಿದರು.

ಸರ್ಕಾರ ರಚಿಸಿರುವ ತಾಂತ್ರಿಕ ಸಲಹಾ ಸಮಿತಿ ಗುರುವಾರ ಶಿಕ್ಷಣ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದು ಮಾಹಿತಿ ಗೊತ್ತಾಗಿದೆ ಅವರು ನೀಡುವ ವರದಿ ಇನ್ನೂ ತಮಗೆ ಬಂದಿಲ್ಲ. ವರದಿ ಬಂದ ಬಳಿಕ ಪರಿಶೀಲಿಸಲಾಗುವುದು. ತಾಂತ್ರಿಕ ಸಮಿತಿ ಕೊಟ್ಟ ವರದಿಯೇ ಅಂತಿಮ ಎಂದೇನು ಅಲ್ಲ. ಸರ್ಕಾರಕ್ಕೆ ಸಮಿತಿ ಸಲಹೆ ನೀಡಿದೆ ಅಷ್ಟೇ, ಸಾಧಕ- ಬಾಧಕಗಳನ್ನು ಸರ್ಕಾರ ಪರಿಶೀಲಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಇದನ್ನೂ ಓದಿ:MSP ಹೆಚ್ಚಳ ಮಾಡಿರುವುದು ಎನ್ ಡಿಎ ಸಾಧನೆ: ನೂತನ ಕೃಷಿ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ವಿವರ

ಸರ್ಕಾರ ಜತೆಗಿದೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ವೈದ್ಯಾಧಿಕಾರಿ ಅವರು ಹಾಸನದಲ್ಲಿ ಪತ್ತೆಯಾಗಿದ್ದಾರೆ. ನಕಲಿ ವೈದ್ಯರನ್ನು ಪತ್ತೆ ಹಚ್ಚಿದ ಸಂಬಂಧ ಕೆಲವರು ಅವರನ್ನು ನಿಂದಿಸಿದ್ದರಿಂದ ಮನನೊಂದು ಅವರು ಎರಡು ದಿನ ಮೊಬೈಲ್‌ ಸ್ವಿಚ್ಛ್‌ ಆಫ್‌ ಮಾಡಿ ಹೊರಗೆ ಹೋಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯಾಧಿಕಾರಿ ಅವರನ್ನು ಸಂಪರ್ಕಿಸಿ ಅವರನ್ನು ಭೇಟಿ ಮಾಡಿ ನೈತಿಕವಾಗಿ ಧೈರ್ಯ ತುಂಬುವಂತೆ ಸೂಚನೆ ನೀಡಿದ್ದೇನೆ. ಪ್ರಾಮಾಣಿಕತೆಯಿಂದ, ಬದ್ಧತೆಯಿಂದ ಕೆಲಸ ಮಾಡುವವರ ಜತೆ ಸರ್ಕಾರ ಇದೆ. ವೈದ್ಯರು ಯಾರಿಗೂ ಹೆದರುವ ಅಗತ್ಯವಿಲ್ಲ. ಸರ್ಕಾರ ಅವರ ಜತೆಗಿದೆ ಎಂದು ಸ್ಪಷ್ಟಪಡಿಸಿದರು.

ವಿಧಾನಪರಿಷತ್ತಿನಲ್ಲಿ ಇತ್ತೀಚೆಗೆ ನಡೆದ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ರಾಜ್ಯದ ರಾಜಕಾರಣ ಮತ್ತು ಸಂಸದೀಯ ನಡುವಳಿಕೆಗಳು ದೇಶಕ್ಕೆ ಮಾದರಿಯಾಗಿದ್ದವು. ಹೀಗಿರುವಾಗ ಎಲ್ಲರೂ ತಲೆತಗ್ಗಿಸುವಂತಹ ಘಟನೆ ನಡೆದಿರುವುದು ಖಂಡನಾರ್ಹ, ಅದು ಯಾವುದೇ ಪಕ್ಷವಾಗಲೀ ಈ ರೀತಿ ನಡೆದುಕೊಳ್ಳಬಾರದು. ಆದರೆ ಆ ಘಟನೆಗ ತುಪ್ಪ ಹಾಕಿದ್ದು ಮಾತ್ರ ಕಾಂಗ್ರೆಸ್‌ ಎನ್ನುವುದನ್ನು ಇಡೀ ದೇಶದ ಜನತೆ ಗಮನಿಸಿದೆ. ಇಂತಹ ನಡುವಳಿಕೆಗಳಿಂದಲೇ ಕಾಂಗ್ರೆಸ್‌ ಸರ್ವನಾಶ ಆಗುವ ದಿನಗಳು ದೂರವಿಲ್ಲ ಎಂದು ಸಚಿವ ಸುಧಾಕರ್‌ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ (ಬಾಬು) ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.