ದತ್ತು ಶಾಲೆಗಳಿಗೆ ಕಾಯಕಲ್ಪ ಭಾಗ್ಯ

ಶಾಸಕ ಖಂಡ್ರೆಯಿಂದ 3 ಸರ್ಕಾರಿ ಶಾಲೆ ದತ್ತು,ಒಟ್ಟಾರೆ 74 ಲಕ್ಷ ರೂ. ಪ್ರಸ್ತಾವನೆ,ಮಾದರಿ ಶಾಲೆ ಅಭಿವೃದ್ಧಿಗೆ ಯೋಜನೆ

Team Udayavani, Dec 19, 2020, 5:14 PM IST

ದತ್ತು ಶಾಲೆಗಳಿಗೆ ಕಾಯಕಲ್ಪ ಭಾಗ್ಯ

ಬೀದರ: ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಒದಗಿಸಿ ಹೈಟೆಕ್‌ ಶಾಲೆಗಳಾಗಿ ರೂಪಿಸುವ ಉದ್ದೇಶದಿಂದ ಶಾಸಕ ಈಶ್ವರ ಖಂಡ್ರೆ ಅವರು ತಮ್ಮ ಭಾಲ್ಕಿ ಕ್ಷೇತ್ರದಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆ.

ಲಕ್ಷಾಂತರ ರೂ. ವೆಚ್ಚದಲ್ಲಿ ಮಾದರಿ ಶಾಲೆಗಳನ್ನಾಗಿಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ. ಭಾಲ್ಕಿ ಕ್ಷೇತ್ರದ ಬೀರಿ(ಬಿ) ಗ್ರಾಮದ ಸರ್ಕಾರಿ ಪ್ರೌಢ ಶಾಲೆ, ಹಲಬರ್ಗಾ ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಹಾಗೂ ಮೇಹಕರ್‌ ಗ್ರಾಮದಸರ್ಕಾರಿ ಹಿರಿಯ ಪ್ರಾಥಮಿಕಶಾಲೆಗಳು ಶಾಸಕರ ದತ್ತುಶಾಲೆಗಳ ಪಟ್ಟಿಯಲ್ಲಿ ಸೇರಿವೆ. 2020-21ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಸದರಿ ಶಾಲೆಗಳಿಗೆ ಒಟ್ಟಾರೆ 74 ಲಕ್ಷ ರೂ. ಒದಗಿಸಿದ್ದು, ಬರುವ ದಿನಗಳಲ್ಲಿ ಕಟ್ಟಡಗಳಿಗೆ ಹೊಸ ರೂಪ ಸಿಗಲಿದೆ.

ಖಾಸಗಿ ಶಾಲೆಗಳ ಅಬ್ಬರದ ನಡುವೆ ಮರೆಯಾಗುತ್ತಿದ್ದ ನಗರ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಸಹ ಈಗ ಖಾಸಗಿ ಶಾಲೆಗಳನ್ನು ಮೀರಿಸುವ ರೀತಿಯಲ್ಲಿ ಇತ್ತಿಚೆಗೆ ಅಭಿವೃದ್ಧಿ ಹೊಂದುತ್ತಿವೆ. ಜತೆಗೆ ಸರ್ಕಾರ ಅಗತ್ಯ ಸೌಲತ್ತುಗಳು ಮತ್ತು ಶೈಕ್ಷಣಿಕವಾಗಿಯೂ ಸಾಧನೆ ಮಾಡುತ್ತಿವೆ.ಹಾಗಾಗಿ ವಿದ್ಯಾರ್ಥಿ ಪಾಲಕರ ಆಸಕ್ತಿ ಈಗ ಸರ್ಕಾರಿ ಶಾಲೆಗಳತ್ತ ಹೆಚ್ಚುತ್ತಿದ್ದು, ದಾಖಲಾತಿ ಪ್ರಮಾಣವೂ ಏರಿಕೆ ಆಗಿದೆ. ಈ ಬೆಳವಣಿಗೆ ನಡುವೆ ಶಾಸಕರಿಂದ ಶಾಲೆಗಳನ್ನು ಅಭಿವೃದ್ಧಿಪಡಿಸಲು “ದತ್ತು ಯೋಜನೆ’ ಮತ್ತಷ್ಟು ಪರಿಣಾಮ ಬೀರಲಿದೆ.

ಶಾಸಕರು ದತ್ತು ಪಡೆದಿರುವ ಹಲಬರ್ಗಾ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾಥಮಿಕ, ಪ್ರೌಢ ಮತ್ತುಪಿಯು ಕಾಲೇಜು ಶಿಕ್ಷಣ ಒಳ ಗೊಂಡಿದ್ದು, 150ಕ್ಕೂಹೆಚ್ಚು ಮಕ್ಕಳ ದಾಖಲಾತಿ ಇದೆ. ಸದರಿ ಶಾಲೆಯಲ್ಲಿಕುಡಿಯುವ ನೀರಿನ ಸಮಸ್ಯೆ ಇಲ್ಲವಾದರೂ ಪ್ರತ್ಯೇಕ ವ್ಯವಸ್ಥೆಯ ಕೊರತೆ ಇದೆ. ಇರುವ ಮೂರುಶೌಚಾಲಯಗಳು ಹಾಳಾಗಿದ್ದು, ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗುತ್ತಿದೆ. ವಿಜ್ಞಾನ ಪ್ರಯೋಗಾಲಯ ಹೊರತುಪಡಿಸಿದರೆ ಇನ್ನಿತರ ವಿಷಯಗಳ ಪ್ರಯೋಗಾಲಯಗಳ ಮತ್ತು ಸುಸಜ್ಜಿತ ಲೈಬ್ರರಿ ಕೊರತೆ ಇಲ್ಲಿದೆ.

ಇನ್ನೂ ಬೀರಿ(ಬಿ) ಸರ್ಕಾರಿ ಪ್ರೌಢ ಶಾಲೆಯಲ್ಲಿ 62ಮಕ್ಕಳು ಓದುತ್ತಿದ್ದಾರೆ. ಆದರೆ, ಅಗತ್ಯ ಕೋಣೆಗಳವ್ಯವಸ್ಥೆ ಇಲ್ಲ. ಇಲ್ಲಿ ನೀರಿನ ವ್ಯವಸ್ಥೆ ಸರಿಯಾಗಿದ್ದರೂಶೌಚಾಲಯದ್ದೇ ಪ್ರಮುಖ ಸಮಸ್ಯೆ. ವಿದ್ಯಾರ್ಥಿಗಳಶಿಕ್ಷಣಕ್ಕೆ ಅನುಕೂಲವಾಗುವಂತೆ ಗ್ರಂಥಾಲಯ, ಕಂಪ್ಯೂಟರ್‌ಗಳ ಕಲಿಕೆಗೆ ಬೋಧಕರ ನಿಯೋಜನೆಆಗಬೇಕು. ಜತೆಗೆ ಶಾಲೆ ಮತ್ತು ಮಕ್ಕಳ ಸುರಕ್ಷತೆಗಾಗಿ ಸುತ್ತುಗೋಡೆಯನ್ನು ನಿರ್ಮಾಮಾಡಿಲ್ಲ. ಕಟ್ಟಡಕ್ಕೆ ಸುಣ್ಣ- ಬಣ್ಣ ಹೊಡೆದು ಬಹಳ ವರ್ಷಗಳೇ ಆಗಿವೆ.

ಮತ್ತೂಂದೆ ಮೇಹಕರ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಮೂಲಭೂತಸೌಕರ್ಯಗಳ ಕೊರತೆ ಪ್ರಮುಖ ಸಮಸ್ಯೆ. ಸದರಿ ಶಾಲೆಯ ಕಟ್ಟಡ ಶಿಥಲವಾಗಿರುವುದರಿಂದ ಕನ್ನಡಮತ್ತು ಮರಾಠಿ ಮಾಧ್ಯಮಗಳನ್ನು ಪ್ರೌಢ ಶಾಲೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಇಲ್ಲಿಯೂ ನೀರು,ಶೌಚಾಲಯದ ಸಮಸ್ಯೆ ಇದ್ದು, ವಾಚನಾಲಯದ ವ್ಯವಸ್ಥೆಯೇ ಇಲ್ಲ.

ಕೋವಿಡ್‌-19 ಹರಡುವಿಕೆ ಹಿನ್ನೆಲೆಯಲ್ಲಿ ಸದ್ಯ ತರಗತಿ ನಡೆಯುತ್ತಿಲ್ಲ. ಸರ್ಕಾರ ಶಾಸಕರ ದತ್ತುಯೋಜನೆಯಡಿ ಶೀಘ್ರ ಅನುದಾನ ಬಿಡುಗಡೆ ಮಾಡುವ ಮೂಲಕ ಶಾಲೆಗಳ ಅಭಿವೃದ್ಧಿಮುಂದಾದಲ್ಲಿ ಶಾಲೆಗಳು ಆರಂಭಗೊಳ್ಳುವುದರ ಒಳಗೆ ಕಟ್ಟಡಗಳನ್ನು ಸುಸ್ಥಿತಿಗೆ ತರಬಹುದು.

ಭಾಲ್ಕಿ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮೂರು ಶಾಲೆಗಳನ್ನುದತ್ತು ಪಡೆದಿದ್ದು, ಕಟ್ಟಡ ಸುಭದ್ರಗೊಳಿಸುವುದರ ಜತೆಗೆ ಕುಡಿಯುವ ನೀರು, ಶೌಚಾಲಯ ಸೇರಿ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಮಾದರಿ ಶಾಲೆಗಳನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ. ಜತೆಗೆ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಕಾಳಜಿ ವಹಿಸುವ ದಿಸೆಯಲ್ಲಿ ಕ್ರಮ ವಹಿಸಲಾಗುವುದು. ಈಶ್ವರ ಖಂಡ್ರೆ, ಶಾಸಕರು, ಭಾಲ್ಕಿ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.