2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದಿಂದ ರಕ್ತದಾಸೋಹ ಚಳವಳಿ: ಸಂಗಮೇಶ
Team Udayavani, Dec 20, 2020, 2:12 PM IST
ವಿಜಯಪುರ: ರಾಜ್ಯ ಸರ್ಕಾರದಿಂದ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಸೌಲಭ್ಯಕ್ಕೆ ಆಗ್ರಹಿ ಪಾದಯಾತ್ರೆಗೆ ಮುನ್ನ ಡಿ.23 ರಂದು ರಾಜ್ಯಾದ್ಯಂತ ರಕ್ತ ದಾಸೋಹ ಚಳವಳಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ರಕ್ತಕೊಟ್ಟು ಮೀಸಲು ಪಡೆಯವ ಘೋಷವಾಕ್ಯದೊಂದಿಗೆ ರಕ್ತದಾನ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದರು.
ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೀಸಲು ಸೌಲಭ್ಯಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ಉಪವಾಸ ಚಳವಳಿ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಖುದ್ದಾಗಿ ಶ್ರೀಗಳಿಗೆ ಕರೆ ಮಾಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಕೊಟ್ಟ ಮಾತು ಉಳಿಸಿಕೊಳ್ಳುವ ನಿರೀಕ್ಷೆ ಇದೆ ಎಂದರು.
ಇದರ ಹೊರತಾಗಿಯೂ ಮೀಸಲು ಸೌಲಭ್ಯಕ್ಕಾಗಿ ನಮ್ಮ ಹೋರಾಟ ಮುಂದುವರೆಯಲಿದೆ. ಡಿ.23 ರಂದು ವಿಶ್ವ ರೈತ ದಿನಾಚರಣೆ ಹಾಗೂ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳ ಜನ್ಮದಿನ ಅಂಗವಾಗಿ ರಾಜ್ಯಾದ್ಯಂತ ರಕ್ತದಾನ ಸುಮಾರು ಐದು ಸಾವಿಕ್ಕೂ ಹೆಚ್ಚು ಯುವಕರು ರಾಜ್ಯದ ವಿವಿಧ ನಗರಗಳಲ್ಲಿ ರಕ್ತದಾನ ಮಾಡಲಿದ್ದಾರೆ. ಇದಕ್ಕಾಗಿ ಈಗಾಲೇ ತಾಲೂಕ ಮಟ್ಟದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಅಭಿಯಾನ ಆರಂಭಿಸಲಾಗಿದೆ ಎಂದರು.
ಇದನ್ನೂ ಓದಿ:ಎರಡು ಲಕ್ಷಕ್ಕೂ ಹೆಚ್ಚು ಕವಿತೆಗಳ ಕರ್ತೃವಿನ ಬದುಕು ಕತ್ತಲೆಯಲ್ಲಿ
ಕೊಡುತ್ತೇವೆ ರಕ್ತವನ್ನು, ಪಡೆಯುತ್ತೇವೆ ಮೀಸಲಾತಿಯನ್ನು ಎಂಬ ಘೋಷವಾಕ್ಯ ದೊಂದಿಗೆ ರಕ್ತ ದಾಸೋಹ ಮಾಡೋಣ, ಸರ್ಕಾರವನ್ನು ಎಚ್ಚರಿಸೋಣ ಎಂಬ ಜಾಗೃತಿ ಅಭಿಯಾನ ಆರಂಭಿಸಲಿದ್ದೇವೆ ಎಂದರು.
ಸರ್ಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಂಚಮಸಾಲಿ ಸಮಾಜವನ್ನು 2ಎ ಮೀಸಲು ಕಲ್ಪಿಸದಿದ್ದಲ್ಲಿ 2021 ಜನವರಿ 14 ರಿಂದ ಪಂಚಲಕ್ಷ ಪಾದಯಾತ್ರೆ ಆರಂಭಿಸಲಿದ್ದೇವೆ. ಕೂಡಲಸಂಗಮ ಕ್ಷೇತ್ರದಿಂದ ಬೆಂಗಳೂರು ವರೆಗೆ ಪಾದಯಾತ್ರೆ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದೇವೆ. ಇಷ್ಟಾದರೂ ನ್ಯಾಯ ಸಮ್ಮತ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಸರ್ಕಾರ ಬರುವ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಲಿದೆ ಎಂದು ಎಚ್ಚರಿಸಿದರು.
ಬೆಂಗಳೂರಿನ ಸುಂಕದಕಟ್ಟೆಯ ಆಶ್ರಯ ಆಸ್ಪತ್ರೆ, ವಿಜಯಪುರದ ಶ್ರೀಸಾಯಿ ಆಸ್ಪತ್ರೆ, ಬಾಗಲಕೋಟೆಯ ಗುರುನಾಥ ಆಸ್ಪತ್ರೆ, ಬೆಳಗಾವಿಯ ವಿಜಯ ಆಸ್ಪತ್ರೆ, ಗದಗ ಜಿಲ್ಲೆಯ ಗಜೇಂದ್ರಗಡ, ಕಲಬುರಗಿ, ಕೊಪ್ಪಳ ಸೇರಿದಂತೆ ಇತರೆ ಜಿಲ್ಲೆಗಳ ರಕ್ತ ದಾಸೋಹ ಚಳವಳಿಗೆ ಸಿದ್ಧತೆ ನಡೆದಿದೆ ಎಂದು ವಿವರಿಸಿದರು.
ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ, ಡಾ.ಸಿ.ಎಸ್.ಸೋಲಾಪುರ, ಲತಾ ಬಿರಾದಾರ, ಜಿ.ಎಸ್.ಮಹಿಶಾಲೆ, ಈರಣ್ಣ ಶಿರಮಗೊಂಡ, ದಾನೇಶ ಅವಟಿ, ಶ್ರೀಶೈಲ ಬುಕ್ಕಣ್ಣಿ, ಶಂಕರಗೌಡ ಬಿರಾದಾರ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.