ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ: HDK
Team Udayavani, Dec 20, 2020, 8:16 PM IST
ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆಡಿಎಸ್ ಬಿಜಿಪಿಯೊಂದಿಗೆ ವಿಲೀನವಾಗುತ್ತಿದೆ ಎಂಬ ಸುದ್ದಿಗೆ ಟ್ವೀಟ್ ಮೂಲಕ ಉತ್ತರಿಸಿದ ಅವರು, ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ ಎಂದರು.
‘ರೈತರ ಸಾಲಮನ್ನಾ’, ‘ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ.
ಇದನ್ನೂ ಓದಿ: ಕಾಡುಕುರಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಗ್ರಾ.ಪಂ ಚುನಾವಣಾ ಅಭ್ಯರ್ಥಿಗಳು
“ಲೋಕದ ಡೊಂಕ ನೀವೇಕೆ ತಿದ್ದುವಿರಿ? ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮದೇವ”ಎಂಬ ಬಸವಣ್ಣನವರ ವಚನವನ್ನು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.