ಅಪಘಾತದಲ್ಲಿ ಗಾಯಗೊಂಡ ಯುವಕರನ್ನು ಆಸ್ಪತ್ರೆ ದಾಖಲಿಸಿ ಮಾನವೀಯತೆ ಮೆರೆದ ಮಾಜಿ ಶಾಸಕ
Team Udayavani, Dec 21, 2020, 8:39 PM IST
ರಾಮನಗರ: ದ್ವಿಚಕ್ರ ವಾಹನ ಅಪಘಾತವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ಸೋವಾರ ಸಂಜೆ ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಕಾರ್ಯಕರ್ತರನ್ನುಭೇಟಿಯಾಗಿ ಜಾಲಮಂಗಲ ರಸ್ತೆಯಲ್ಲಿ ರಾಮನಗರದ ಕಡೆ ಬರುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 275ರ ಬೈಪಾಸ್ ರಸ್ತೆ ಬಳಿ ಇಬ್ಬರು ಯುವಕರು ರಸ್ತೆಯಲ್ಲಿ ಬಿದ್ದಿದ್ದನ್ನು ಗಮನಿಸಿದ್ದಾರೆ. ಕೆಳಗಿಳಿದು ನೋಡಿದಾಗ ಅಕ್ಕೂರು ಗ್ರಾಮದವರೆನ್ನಲಾದ ಶಂಕರ ಮತ್ತು ಹನುಮಂತೇಗೌಡ ಅವರ ಮುಖ, ಕೈ, ಕಾಲಿಗೆ ರಕ್ತ ಗಾಯಗಳಾಗಿದ್ದನ್ನು ಗಮನಿಸಿದ್ದಾರೆ. ಅಲ್ಲೇ ಒಂದಷ್ಟು ಜನ ವಾಹನ ಸವಾರರು, ದಾರಿ ಹೋಕರು ಗಾಯಗೊಂಡವರನ್ನು ನೋಡಿದರೆ ಹೊರತು ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿರಲಿಲ್ಲ.
ಮಾಜಿ ಶಾಸಕರೇ ತಮ್ಮ ಕಾರಿನಲ್ಲಿ ಇಬ್ಬರೂ ಗಾಯಾಳುಗಳನ್ನು ರಾಮನಗರದ ರಾಮಕೃಷ್ಣ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.
ಮಾಜಿ ಶಾಸಕರ ಜೊತೆ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನರಸಿಂಹಯ್ಯ, ಕಾಂಗ್ರೆಸ್ ಮುಖಂಡ ಅಬ್ಬನಕುಪ್ಪೆ ರಮೇಶ್, ಮಾಗಡಿ ಕೆಂಪೇಗೌಡ ಕೋ ಆಪರೇಟಿವ್ ಸೊಸೈಟಿಯ ಸಿಇಒ ಲೋಕೇಶ್ ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.