ಒಂದು ರಾಷ್ಟ್ರ- ಒಂದು ಚುನಾವಣೆಗೆ ನಾವು ರೆಡಿ
Team Udayavani, Dec 22, 2020, 12:19 AM IST
ಹೊಸದಿಲ್ಲಿ: “ಒಂದು ರಾಷ್ಟ್ರ-ಒಂದು ಚುನಾವಣೆ’ ಪರಿಕಲ್ಪನೆಯನ್ನು ಜಾರಿಗೆ ತರಲು ನಾವು ಸಿದ್ಧರಿದ್ದೇವೆ. ಹೀಗೆಂದು ಹೇಳಿರುವುದು ಮುಖ್ಯ ಚುನಾವಣ ಆಯುಕ್ತ ಸುನೀಲ್ ಅರೋರಾ. ಸುದ್ದಿವಾಹಿನಿ ಯೊಂದಕ್ಕೆ ನೀಡಿರುವ ಸಂದರ್ಶ ನ ದಲ್ಲಿ ಈ ಕುರಿತು ಸ್ಪಷ್ಟಪಡಿಸಿರುವ ಅವರು, “ಶಾಸಕಾಂಗವು ಅದಕ್ಕೆ ಸಂಬಂಧಿಸಿದ ಎಲ್ಲ ರೀತಿಯ ತಿದ್ದುಪಡಿಗಳನ್ನು ತಂದರೆ, ಚುನಾವಣ ಆಯೋಗವು ಒಂದು ರಾಷ್ಟ್ರ-ಒಂದು ಚುನಾವಣೆ ನಡೆಸಲು ಸಿದ್ಧವಾಗಿದೆ. ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ ಅಧಿಕಾರ ಆಯೋಗಕ್ಕಿಲ್ಲ’ ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರೂ ಒಂದೇ ಬಾರಿಗೆ ಎಲ್ಲ ರೀತಿಯ ಚುನಾವಣೆಗಳನ್ನು ನಡೆಸುವ ಬಗ್ಗೆ ಪುನರುಚ್ಚರಿಸಿದ್ದರು. ಜತೆಗೆ ಇದು ದೇಶಕ್ಕೆ ಅತ್ಯಗತ್ಯವಾಗಿದ್ದು, ಇದರ ಬಗ್ಗೆ ಚರ್ಚೆ ನಡೆಯಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದರು.
ಇದೇ ವೇಳೆ ಭಾರತೀಯರಿಗೆ ಯಾವಾಗ ಡಿಜಿಟಲ್ ವೋಟರ್ ಐಡಿ ಕಾರ್ಡ್ ಲಭ್ಯವಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅರೋರಾ, ಯುವ ಮತ್ತು ಶಿಕ್ಷಿತ ಮತದಾರರನ್ನು ಗುರಿಯಾಗಿಟ್ಟು ಕೊಂಡು ಈ ಯೋಜನೆ ಜಾರಿಗೆ ಮುಂದಾಗಿದ್ದೇವೆ. ಇದು ಮುಂದಿನ ವಿತ್ತೀಯ ವರ್ಷದಲ್ಲಿ ಅಥವಾ ಇದೇ ಹಣಕಾಸು ವರ್ಷದಲ್ಲೇ ಜಾರಿಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.