ಮೀನುಗಾರರ ಸಾಲ ಮನ್ನಾ ವಿತರಣೆಗೆ ತಾಂತ್ರಿಕ ಅಡ್ಡಿ

ಅರ್ಧಕ್ಕೂ ಹೆಚ್ಚು ಅರ್ಹರಿಗೆ ಪಾವತಿ ವಿಳಂಬ

Team Udayavani, Dec 22, 2020, 6:03 AM IST

ಮೀನುಗಾರರ ಸಾಲ ಮನ್ನಾ ವಿತರಣೆಗೆ ತಾಂತ್ರಿಕ ಅಡ್ಡಿ

ಕುಂದಾಪುರ: ರಾಜ್ಯ ಸರಕಾರ ಘೋಷಿಸಿದ ಮೀನುಗಾರರ ಸಾಲ ಮನ್ನಾ ಯೋಜನೆಯಡಿ ತಾಂತ್ರಿಕ ತೊಂದರೆಗಳಿಂದ ಎರಡೂ ಜಿಲ್ಲೆಗಳ 23 ಸಾವಿರ ಅರ್ಹ ಫ‌ಲಾನುಭವಿಗಳ ಪೈಕಿ ಈ ವರೆಗೆ ಕೇವಲ 11 ಸಾವಿರ ಮಂದಿಗೆ ಮಾತ್ರ ಹಣ ಪಾವತಿಯಾಗಿದೆ.

ಮೀನುಗಾರರು 2017- 18 ಮತ್ತು 2018- 19ರಲ್ಲಿ ವಾಣಿಜ್ಯ ಮತ್ತು ಗ್ರಾಮ ಅಭಿ ವೃದ್ಧಿ ಬ್ಯಾಂಕ್‌ಗಳಿಂದ ತಲಾ 50 ಸಾವಿರ ರೂ.ಗಳಂತೆ ಸ್ವಸಹಾಯ ಸಂಘಗಳ ಮೂಲಕ ಪಡೆದ ಸಾಲವನ್ನು ಮನ್ನಾ ಮಾಡಲು ಸರಕಾರ ಆದೇಶ ಹೊರಡಿಸಿತ್ತು. ನವೆಂಬರ್‌ನಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆದಿದೆ.

ಏನು ಸಮಸ್ಯೆ?
ಹಣ ಸಕಾಲದಲ್ಲಿ ಪಾವತಿ ಆಗದಿರಲು ಹಲವು ಸಮಸ್ಯೆ ಗಳು ಕಾರಣ. ಕೆಲವರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಆಗಿಲ್ಲ.
ಮತ್ತೆ ಕೆಲವರ ಖಾತೆ ಖಾತೆ ಸ್ಥಗಿತಗೊಂಡಿದೆ. ಇನ್ನು ಕೆಲವರದು ಹೆಸರು ವ್ಯತ್ಯಾಸವಾಗಿದೆ. ಇಂತಹ ಇನ್ನೂ ಹಲವು ಕಾರಣಗಳಿವೆ. ಉಡುಪಿ ಯಲ್ಲಿ 4,050 ಮಂದಿಯ ಖಾತೆ ಸ್ಥಗಿತಗೊಂಡಿದ್ದರೆ, 7,300 ಮಂದಿಯ ಖಾತೆಗಳಲ್ಲಿ ಆಧಾರ್‌ ನೋಂದಣಿ, ಹೆಸರು ಬದಲಾವಣೆ ಗಳಾಗಿವೆ. ದಕ್ಷಿಣ ಕನ್ನಡದಲ್ಲಿ 329 ಮಂದಿಯ ಖಾತೆ ಸ್ಥಗಿತಗೊಂಡಿದ್ದರೆ, 891 ಮಂದಿಯ ಹೆಸರು ಬದಲಾವಣೆ, ಆಧಾರ್‌ ನೋಂದಣಿ ಆಗದಿರುವ ಸಮಸ್ಯೆಯಿದೆ.

ಈಗ ಬಾಕಿ ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗದಿರುವುದರಿಂದ ಗೊಂದಲ ಸೃಷ್ಟಿ ಯಾಗಿದೆ. ಕುಂದಾಪುರ ಭಾಗ ದಲ್ಲಿ ಅಧಿಕ ಮಂದಿಗೆ ಪಾವತಿ ಬಾಕಿಯಿದ್ದು, ಮೀನುಗಾರರು ಸಹಕಾರಿ ಸಂಘಗಳು ಮತ್ತು ಬ್ಯಾಂಕ್‌ಗಳಿಗೆ ತೆರಳಿ ವಿಚಾರಿಸಿ, ಅಲವತ್ತು ಕೊಳ್ಳುತ್ತಿರುವುದು ಕಂಡುಬರುತ್ತಿದೆ.

ಮರು ಸರ್ವೇ ನಡೆಸಿ ಪರಿಶೀಲನೆ
ಈ ಗೊಂದಲ ನಿವಾರಿಸಿ ಅರ್ಹರಿಗೆ ಹಣ ಪಾವತಿಯಾ ಗುವಂತೆ ಮಾಡಲು ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌, ಆ ಬ್ಯಾಂಕಿನ ಮುಖ್ಯಸ್ಥರನ್ನು ಒಳಗೊಂಡ ಸಮಿತಿಯನ್ನು  ಈಗಾಗಲೇ ರಚಿಸಲಾಗಿದೆ. ಈ ಸಮಿತಿಯು ಪ್ರತೀ ಸಹಕಾರಿ ಸಂಘ ಅಥವಾ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಮರು ಸರ್ವೇ ನಡೆಸಿ, ಮತ್ತೂಮ್ಮೆ ಪರಿಶೀಲಿಸಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಸರಕಾರ ಶೀಘ್ರವಾಗಿ ಮೀನುಗಾರರ ಸಾಲ ಮನ್ನಾ ಹಣವನ್ನು ಬಿಡುಗಡೆ ಮಾಡಿದೆ. ಈಗಾಗಲೇ 60 ಕೋ.ರೂ. ಬಿಡುಗಡೆ ಮಾಡಲಾಗಿದೆ. ಆದರೆ ಕೆಲವು ತಾಂತ್ರಿಕ ತೊಂದರೆಗಳಿಂದ ಎಲ್ಲರ ಖಾತೆಗಳಿಗೂ ಸಕಾಲದಲ್ಲಿ ಹಣ ಜಮೆಯಾಗಿಲ್ಲ. ಅದನ್ನು ನಿವಾರಿಸಲು ಸಮಿತಿ ರಚಿಸಲಾಗಿದ್ದು, ಒಂದು ತಿಂಗಳೊಳಗೆ ಎಲ್ಲ ಗೊಂದಲ ನಿವಾರಣೆ ಗೊಂಡು ಬಾಕಿ ಮೀನುಗಾರರ ಖಾತೆಗಳಿಗೆ ಹಣ ಜಮೆಯಾಗಲಿದೆ.
– ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಸಚಿವರು

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.