ದತ್ತು ಶಾಲೆ ಮಜಬೂತಿಗೆ ಪಣ

|ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ರವೀಂದ್ರನಾಥ್‌ರಿಂದ ಮೂರು ಶಾಲೆ ದತು

Team Udayavani, Dec 22, 2020, 5:02 PM IST

ದತ್ತು ಶಾಲೆ ಮಜಬೂತಿಗೆ ಪಣ

ದಾವಣಗೆರೆ: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಒಟ್ಟು ಮೂರು ಶಾಲೆಗಳನ್ನ ದತ್ತು ಪಡೆದಿದ್ದಾರೆ.

ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ನಿಟುವಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ದಾವಣಗೆರೆತಾಲೂಕಿನ ಕಕ್ಕರಗೊಳ್ಳದ ಸರ್ಕಾರಿಹಿರಿಯ ಪ್ರಾಥಮಿಕ ಶಾಲೆ ಹಾಗೂದೊಡ್ಡಬಾತಿ ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ದತ್ತು ಪಡೆಯುವ ಮೂಲಕ ಸಮಗ್ರ ಅಭಿವೃದ್ಧಿಗೆ ಕಾರ್ಯೋನ್ಮುಖರಾಗಿದ್ದಾರೆ.

ಸಹಿಪ್ರಾ ಶಾಲೆ ನಿಟುವಳ್ಳಿ  : 1 ರಿಂದ 10ನೇ ತರಗತಿಯವರೆಗೆ ಇರುವ ನಿಟುವಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಗರದ ಅತ್ಯುತ್ತಮ ಮಾದರಿ ಸರ್ಕಾರಿ ಶಾಲೆ ಎಂದೇ ಖ್ಯಾತಿ ಪಡೆದಿದೆ. 526ಕ್ಕೂ ಹೆಚ್ಚು ವಿದ್ಯಾರ್ಥಿಗಳ ಹೊಂದಿರುವ ಶಾಲೆಗೆ 8 ಹೊಸಕೊಠಡಿಗಳ ನಿರ್ಮಾಣ, 15 ಕೊಠಡಿಗಳ ದುರಸ್ತಿಗೆ 25 ಲಕ್ಷ ರೂ. ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದೆ.

ನಿಟುವಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8 ಹೊಸ ಕೊಠಡಿಗಳ ನಿರ್ಮಾಣ, 15 ಕೊಠಡಿಗಳ ದುರಸ್ತಿಗೆ 25 ಲಕ್ಷ ರೂ. ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಂಬಂಧಿತ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ನಮ್ಮಲ್ಲಿ ಆಂಗ್ಲ ಮಾಧ್ಯಮ ಶಾಲೆಯೂ ಪ್ರಾರಂಭವಾಗಿದೆ. ಹಂತ ಹಂತವಾಗಿ ಕೊಠಡಿಗಳ ನಿರ್ಮಾಣ ಮಾಡಿಕೊಡುವ ಜೊತೆಗೆ ಇಡೀ ಶಾಲೆಗೆ ಒಂದೆ ತೆರನಾದ ಬಣ್ಣದ ವ್ಯವಸ್ಥೆ ಮಾಡುವ ಭರವಸೆಯನ್ನು ಶಾಸಕರು ನೀಡಿದ್ದಾರೆ. ಸ್ಮಾರ್ಟ್‌ಸಿಟಿ ಯೋಜನೆಯಡಿ 66 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್‌ಕ್ಲಾಸ್‌ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಇನ್ನೂ ಹೆಚ್ಚಿನ ಕೊಠಡಿ, ಶೌಚಾಲಯ, ಪ್ರಯೋಗಾಲಯ ಅಗತ್ಯತೆ ಇದೆ ಎನ್ನುತ್ತಾರೆ ಮುಖ್ಯ ಶಿಕ್ಷಕ ಕೆ.ಟಿ. ಜಯಪ್ಪ.

ಸಹಿಪ್ರಾ ಶಾಲೆ ಕಕ್ಕರಗೊಳ್ಳ  :

ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 25 ಲಕ್ಷ ರೂ. ಅನುದಾನದಲ್ಲಿ 2 ಹೊಸ ಕೊಠಡಿ ನಿರ್ಮಾಣ, 25 ಡೆಸ್ಕ್, 5 ಗ್ರೀನ್‌ಬೋರ್ಡ್‌,ಶಾಲಾ ದುರಸ್ತಿ ಮತ್ತುಸುಣ್ಣ ಬಣ್ಣಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಲೆಯಲ್ಲಿ 1-8ನೇ ತರಗತಿಯವರೆಗೆ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಕೊಠಡಿಗಳ ಕೊರತೆ ಬಹಳವಾಗಿಯೇ ಇದೆ. ಕೆಲವಾರು ಸಂದರ್ಭದಲ್ಲಿ ಅನಿವಾರ್ಯ ಕಾರಣಕ್ಕೆ ಮಕ್ಕಳನ್ನು ಹೊರಗೆ ಕುಳಿಸಿ, ಪಾಠಮಾಡಬೇಕಾಗುತ್ತದೆ. ದತ್ತು ಪಡೆದಿರುವಶಾಲೆಗೆ ಇನ್ನೂ 4 ಹೊಸ ಕೊಠಡಿ ಅಗತ್ಯ ಇದೆ. ಇನ್ನೂ ಒಂದು  ಸ್ಮಾರ್ಟ್‌ ಕ್ಲಾಸ್‌, ಪ್ರಯೋಗಾಲಯ ಬೇಕು. ಗ್ರಂಥಾಲಯಗಳಲ್ಲಿನ ಪುಸ್ತಕ ಸಂಗ್ರಹಣೆಗೆ ಅಗತ್ಯ ವ್ಯವಸ್ಥೆ ಆಗಬೇಕು ಎನ್ನುತ್ತಾರೆ ಪ್ರಭಾರಿ ಮುಖ್ಯ ಶಿಕ್ಷಕ ಶಿವಶಂಕರ್‌.

ಕೆಪಿಎಸ್‌ ಶಾಲೆ ದೊಡ್ಡಬಾತಿ : ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದಲ್ಲಿನ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ2 ಹೊಸ ಕೊಠಡಿ, 50 ಡೆಸ್ಕ್, ಕುಡಿಯುವ ನೀರು ಫಿಲ್ಟರ್‌, ಶಾಲಾ ರಿಪೇರಿ, ಸುಣ್ಣ ಬಣ್ಣಕ್ಕಾಗಿ 25 ಲಕ್ಷ ರೂ. ಅನುದಾನದ ಪ್ರಸ್ತಾವನೆ ಸಲ್ಲಿಕೆಯಾಗಿದೆ.

ಇದು ಪಬ್ಲಿಕ್‌ ಶಾಲೆಯಾಗಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ. ಈ ಶಾಲೆಗೆ ಹೈಟೆಕ್‌ ಶೌಚಾಲಯದ ಅತಿ ಅಗತ್ಯ ಇದೆ. ಇನ್ನೂ ಎರಡು ಹೊರ ಕೊಠಡಿಗಳ ಅಗತ್ಯತೆ ಇದೆ. ಸುಂದರ ಸ್ವತ್ಛ ಪರಿಸರ ನಿರ್ಮಾಣ ಇತರೆ ಕೆಲಸ ಕಾರ್ಯ ಆದಲ್ಲಿ ಈ ಪಬ್ಲಿಕ್‌ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡುತ್ತೇವೆ ಎನ್ನುತ್ತಾರೆ ಮುಖ್ಯ ಶಿಕ್ಷಕ ಎಸ್‌. ಭೀಮಪ್ಪ

ನನ್ನ ಕ್ಷೇತ್ರ ನನ್ನಶಾಲೆಅಭಿವೃದ್ಧಿಗೆ ಒತ್ತು  :

ಕೇಂದ್ರ ಸರ್ಕಾರದ ಸೂಚನೆ, ಆಶಯದಂತೆ, ಮಹತ್ವಾಕಾಂಕ್ಷೆಯಂತೆ ಶಾಸಕರಪ್ರದೇಶಾಭಿವೃದ್ಧಿ ಯೋಜನೆಯಲ್ಲಿದಾವಣಗೆರೆ ಉತ್ತರ ವಿಧಾನ ಸಭಾಕ್ಷೇತ್ರದಲ್ಲಿ ಈಗ ದತ್ತು ತೆಗೆದುಕೊಂಡಿರುವ ಮೂರು ಶಾಲೆಗಳು ಬಹಳ ಚೆನ್ನಾಗಿ ನಡೆಯುತ್ತಿವೆ. ನಿಟುವಳ್ಳಿ ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ಬರುತ್ತಾರೆ. ಎಲ್ಲಾ ಶಾಲೆಗಳನ್ನು ಇನ್ನೂ ಹೆಚ್ಚು ಮಜಬೂತು ಮಾಡುವ ಆಶಯ ತಮಗಿದೆ.  ಎಸ್‌.ಎ. ರವೀಂದ್ರನಾಥ್‌, ಶಾಸಕರು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ

-ರಾ. ರವಿಬಾಬು

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.