ಮೂಲಸೌಲಭ್ಯಕ್ಕೆ ಅನುದಾನ ಕಲ್ಪಿಸಲು ಕ್ರಮ
Team Udayavani, Dec 23, 2020, 3:41 PM IST
ಮಂಡ್ಯ: ನಗರದ ಹಾಲಹಳ್ಳಿ ಹಾಗೂ ಹೊರವಲಯದ ಚಿಕ್ಕಮಂಡ್ಯ ಬಳಿ ಕೊಳಗೇರಿ ನಿವಾಸಿಗಳ ವಾಸಕ್ಕೆ ನಿರ್ಮಿಸುತ್ತಿರುವ ವಸತಿ ಕಟ್ಟಡಗಳ ಕಾಮಗಾರಿಯನ್ನು ಸಂಸದೆ ಸುಮಲತಾ ಅಂಬರೀಷ್ ವೀಕ್ಷಿಸಿದರು.
ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಕೊಳಗೇರಿನಿವಾಸಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ವತಿಯಿಂದ ಮಂಡ್ಯ ನಗರದ ಚಿಕ್ಕ ಮಂಡ್ಯ ಹಾಗೂ ಹಾಲಹಳ್ಳಿ ಸಮೀಪ ನಿರ್ಮಿಸುತ್ತಿರುವ ಮೂಲಭೂತ ಸೌಕರ್ಯವಿರುವ ವಾಸಕ್ಕೆಯೋಗ್ಯವಾದ ವಸತಿಕಟ್ಟಡಗಳ ಕಾಮಗಾರಿಯ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿದರು.
ಅನುದಾನ ಬಿಡುಗಡೆಗೆ ಪ್ರಯತ್ನ: ನಂತರ ಮಾತನಾಡಿದ ಅವರು, ಕೊಳಚೆ ಪ್ರದೇಶದ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೊರತೆಯಿರುವ ಅನುದಾನ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅವರ ಗಮನಕ್ಕೆ ತಂದಿರುವುದು ನನ್ನ ಗಮನದಲ್ಲಿದೆ.ಈ ಕುರಿತು ಸಚಿವ ವಿ.ಸೋಮಣ್ಣ ಅವರೊಂದಿಗೆ ಚರ್ಚಿಸಿ, ವಸತಿ ಇಲಾಖೆ ವತಿಯಿಂದ ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಕಾಮಗಾರಿ ಪೂರ್ಣಕ್ಕೆ ಸೂಚನೆ: ನಂತರ ಕಾಮಗಾರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಂಸದರು, ಈ ಹಿಂದೆ ಕರ್ನಾಟಕ ರಾಜ್ಯದ ವಸತಿ ಸಚಿವರಾಗಿದ್ದ ಡಾ.ಅಂಬರೀಷ್ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಅಂದಿನಿಂದ ಈವರೆಗೂ ಕೊಳಗೇರಿ ನಿವಾಸಿಗಳಿಗೆ ಮೂಲಭೂತ ಸೌಕರ್ಯವಿರುವ ಕಟ್ಟಡ ನಿರ್ಮಾಣ ಕಾಮಗಾರಿಯು ವಿಳಂಬವಾಗಿ ನಡೆಯುತ್ತಿದೆ. ಇದರಿಂದ ಕೊಳಚೆ ಪ್ರದೇಶದ ನಿರಾಶ್ರಿತರು ಕಷ್ಟಕರವಾದ ವಾತಾವರಣದಲ್ಲಿ ಬದುಕು ನಡೆಸುತ್ತಿದ್ದಾರೆ. ಹವಾಮಾನ ವೈಪರಿತ್ಯದಿಂದ ಅಹಿತಕರ ಘಟನೆ ಉಂಟಾಗಿ ಅನಾಹುತಗಳು ಸಂಭವಿಸುವ ಸಂದರ್ಭಗಳು ಹೆಚ್ಚಾಗಿರುವುದರಿಂದ ಆದ್ಯತೆ ಮೇಲೆ ಅತಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ, ಫಲಾನುಭವಿಗಳಿಗೆ ಹಸ್ತಾಂತರಿಸಬೇಕುಎಂದುಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ ಆಯುಕ್ತ ಎಂ.ಲೋಕೇಶ್, ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯಪಾಲಕ ಇಂಜಿನಿಯರ್‌ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.