ಬಂಗಾರವಾಯ್ತು ಬ್ಯಾಡಗಿ ಮೆಣಸಿನಕಾಯಿ

Team Udayavani, Dec 23, 2020, 6:49 PM IST

ಬಂಗಾರವಾಯ್ತು ಬ್ಯಾಡಗಿ ಮೆಣಸಿನಕಾಯಿ

ಬ್ಯಾಡಗಿ: ಪ್ರಸಕ್ತ ವರ್ಷ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ವ್ಯಾಪಾರ ವಹಿವಾಟಿನಲ್ಲಿ ದಾಖಲೆ ಬರೆಯುತ್ತಿದ್ದು, ಈ ಬಾರಿ ಮಾರುಕಟ್ಟೆಯ ಇತಿಹಾಸದಲ್ಲಿಯೇ ಕ್ವಿಂಟಲ್‌ಗೆ 45,111 ರೂ. ಸಾರ್ವಕಾಲಿಕ ದಾಖಲೆಯ ದರದೊರೆತಿದ್ದರಿಂದ ಮೆಣಸಿನಕಾಯಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಂಗಳವಾರ ಗದಗ ಜಿಲ್ಲೆ ರೋಣ ತಾಲೂಕಿನಸವಡಿ ಗ್ರಾಮದ ರೈತ ಬಸವರೆಡ್ಡೆಪ್ಪ ಭೂಸರೆಡ್ಡಿಬೆಳೆದ ಡಬ್ಬಿ ಮೆಣಸಿನ ಕಾಯಿ “ಬಂಗಾರ’ದಬೆಲೆಗೆ ಮಾರಾಟವಾಗಿದ್ದು, ಮಾರುಕಟ್ಟೆಇತಿಹಾಸದಲ್ಲಿಯೇ ಕ್ವಿಂಟಲ್‌ಗೆ ದಾಖಲೆಯ 45,111 ರೂ. ದರ ಪಡೆದುಕೊಂಡಿದೆ. ಅಂತಾರಾಷ್ಟ್ರೀಯ ಖ್ಯಾತಿಗೆ ತಕ್ಕಂತೆವ್ಯಾಪಾರ ವಹಿವಾಟು ನಡೆಸುತ್ತಿರುವ ಬ್ಯಾಡಗಿಮಾರುಕಟ್ಟೆಯಲ್ಲಿ ಕಳೆದ ಎರಡು ವಾರಗಳಿಂದ  ಮೆಣಸಿನಕಾಯಿ ದರದಲ್ಲಿ ಸಮರವೇ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಒಂದೇ ವಾರದಲ್ಲಿ ಎರಡು ದಾಖಲೆ ದರಗ ಳನ್ನು ವ್ಯಾಪಾರಸ್ಥರುಗುಣಮಟ್ಟದ ಡಬ್ಬಿ ಮೆಣಸಿನಕಾಯಿಗೆ ನೀಡಿಖರೀದಿಸಿರುವುದು ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿಸಿದಂತಾಗಿದೆ.

ಕಳೆದ ಡಿ.14 ರಂದು ಇದೇ ರೈತ ಬೆಳೆದ ಮೆಣಸಿನಕಾಯಿ ಪ್ರಸಕ್ತ ವರ್ಷ 35,555 ರೂ.ದರ ಪಡೆಯುವ ಮೂಲಕ ದಾಖಲೆ ಮಾಡಿತ್ತು.ಎಂ.ಸಿ.ಮೇಲ್ಮುರಿ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದಮೆಣಸಿನಕಾಯಿಯನ್ನು ಅಮರಜ್ಯೋತಿಟ್ರೇಡಿಂಗ್‌ ಕಂಪನಿ ದಾಖಲೆ ದರ ನೀಡಿಖರೀದಿಸಿದ್ದನ್ನು ಇಲ್ಲಿ ಸ್ಮರಿಸಬಹುದು.ಇದೀಗ ಡಿ.22 ರಂದು ಮಂಗಳವಾರ ಅದೇ ರೈತ ಬೆಳೆದ ಮೆಣಸಿನಕಾಯಿ ಬೆಳೆಯನ್ನು ಸಿ.ಕೆ.ಮೇಲ್ಮುರಿ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದು, ದಾಖಲೆಯ 45,111 ರೂ. ದರ ನೀಡಿ ಗಣೇಶ ಎಂಟರಪ್ರ„ಸೆಸ್‌(ಅಜಗಣ್ಣನವರ)ಖರೀದಿ ಮಾಡಿದ್ದಾರೆ. ಇದುಮಾರುಕಟ್ಟೆ ಇತಿಹಾಸದಲ್ಲಿಯೇ ಸಾರ್ವಕಾಲಿಕ ಧಾರಣೆಯಾಗಿದೆ. ಮಾರುಕಟ್ಟೆಯಲ್ಲಿ ಏರ್ಪಟ್ಟಿರುವ ದರ ಸಮರವನ್ನು ಅವಲೋಕನಮಾಡಿದರೆ ಇದೀಗ ದಾಖಲಾಗಿರುವ ದರ ಸೇಫ್‌ ಅಲ್ಲ ಅನ್ನುವ ಅನುಮಾನ ಮೂಡುತ್ತಿದೆ. ಕಾರಣ ಈ ಹಿಂದೆ ದಾಖಲಾದ (ಡಿ.14 ರಂದು35,555ರೂ., ಡಿ.17 ರಂದು 36,999ರೂ.) ದರಗಳು ಕೇವಲ ಒಂದೇ ವಾರದಲ್ಲಿಧೂಳಿಪಟವಾಗಿವೆ. ಈ ಹಿನ್ನೆಲೆಯಲ್ಲಿ ಈದರ ಮುಂದಿನ ದಿನಗಳಲ್ಲಿ ಧೂಳಿಪವಾದರೆ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

ಅಂತಾರಾಷ್ಟ್ರೀಯ ಖ್ಯಾತಿಯ ಮಾರುಕಟ್ಟೆಗೆ ಮಂಗಳವಾರದ ಮೆಣಸಿನಕಾಯಿ ದರ ಮತ್ತೂಂದುಮೈಲಿಗಲ್ಲಾಗಲಿದ್ದು, ಸಾರ್ವಕಾಲಿಕ ದಾಖಲೆ ದರದಲ್ಲಿ ಮೆಣಸಿನಕಾಯಿ ಖರೀದಿ ನಡೆದಿದೆ. – ವೀರಭದ್ರಪ್ಪ ಗೊಡಚಿ, ಎಪಿಎಂಸಿ ಅಧ್ಯಕ್ಷ

ಈ ಹಿಂದೆಯೂ ಉತ್ತಮ ದರಕ್ಕೆ ಮೆಣಸಿನಕಾಯಿ ಮಾರಾಟ ಮಾಡಿದ್ದೆ. ಆದರೆ, ಈ ಬಾರಿ ಬಂಗಾರದ ಬೆಲೆ ದೊರೆಯುತ್ತೆ ಎಂಬ ನಿರೀಕ್ಷೆ ಇರಲಿಲ್ಲ. ದಾಖಲೆಯ ದರ ಸಿಕ್ಕಿರುವುದು ಖುಷಿ ನೀಡಿದೆ. – ಬಸವರೆಡ್ಡೆಪ್ಪ ಭೂಸರೆಡ್ಡಿ, ರೈತ

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.