ಅನ್ನದಾತನ ಮನೆ ಬಾಗಿಲಿಗೇ ತೆರಳಿದ ಡಿಸಿಎಂ
Team Udayavani, Dec 24, 2020, 1:14 PM IST
ಮಾಗಡಿ: ಅನ್ನದಾತನ ಮನೆ ಬಾಗಿಲಿಗೇ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ರೈತ ದಿನದ ಶುಭಾಶಯ ಕೋರಿ ಅಭಿವಂದನೆ ಸಲ್ಲಿಸಿದರು. ಅಲ್ಲದೆ, ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ರೈತರಲ್ಲಿದ್ದ ಅನುಮಾನಗಳನ್ನು ನಿವಾರಿಸಿದರು.
ಮಾಗಡಿ ತಾಲೂಕಿನ ಉಕ್ಕಡ-ಗುಡ್ಡಹಳ್ಳಿಗ್ರಾಮಕ್ಕೆ ಬಂದ ಡಿಸಿಎಂ, ಅಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರ ಬಳಿ ತೆರಳಿ ಶುಭಾಶಯ ಕೋರಿ ಶಿರಬಾಗಿ ನಮಿಸಿ ಅಭಿವಂದನೆ ಸಲ್ಲಿಸಿದರು. ರೈತರಾದ ನಾರಾಯಣಪ್ಪ, ನಾಗರಾಜ ಮತ್ತುನರಸಿಂಹಯ್ಯ ಅವರಿಗೆ ಹೂವಿನ ಹಾರ ಹಾಕಿ ಗೌರವಿಸಿದರು.
ಡಿಸಿಎಂ ಸರಳತೆಗೆ ಮೆಚ್ಚುಗೆ: ಯಾವ ಮುನ್ಸೂಚನೆಯೂ ಇಲ್ಲದೆ ಸ್ವತಃ ಉಪ ಮುಖ್ಯಮಂತ್ರಿಗಳೇ ರಸ್ತೆಯಲ್ಲಿ ಕಾರು ನಿಲ್ಲಿಸಿ, ತಾವಿದ್ದ ಜಾಗಕ್ಕೇ ಬಂದು ಹೂ ಮಾಲೆ ಹಾಕಿ ಶುಭಕೋರಿದ್ದನ್ನು ಕಂಡು ರೈತರು, ಆ ಊರಿನ ಜನರೆಲ್ಲರೂ ಆಶ್ಚರ್ಯದಿಂದ ನೋಡಿದರು. ಕ್ಷಣ ಮಾತ್ರದಲ್ಲಿ ಇಡೀ ಊರಿನ ಜನರು, ಹಿರಿಯರು, ಮಹಿಳೆಯರು, ಯುವಕರು ಅಲ್ಲಿ ಸೇರಿಕೊಂಡರಲ್ಲದೆ, ಡಿಸಿಎಂ ಸರಳತೆ ಬಗ್ಗೆ ಮೆಚ್ಚುಗೆವ್ಯಕ್ತಪಡಿಸಿದರು.
ರೈತರೊಂದಿಗೆ ಸಂವಾದ: ರೈತರ ಜತೆ ಸಂವಾದನಡೆಸಿದ ಡಿಸಿಎಂ, ಮುಖ್ಯವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವಕೃಷಿ ಕಾಯ್ದೆಗಳಬಗ್ಗೆ ಜನರಲ್ಲಿದ್ದ ಅನುಮಾನ -ಗೊಂದಲಗಳನ್ನುತಿಳಿಗೊಳಿಸಿದರು. ಅನೇಕ ವರ್ಷದಿಂದ ರೈತರ ಪಾಲಿಗೆ ಮರಣ ಶಾಸನವಾಗಿದ್ದ ಕೃಷಿ ಉತ್ಪನ್ನಮಾರುಕಟ್ಟೆ (ಎಪಿಎಂಸಿ) ಕಾಯ್ದೆಗೆ ಕ್ರಾಂತಿಕಾರಕತಿದ್ದುಪಡಿ ತರಲಾಗಿದೆ. ಇಷ್ಟು ನೀವು ಬೆಳೆದ ಬೆಳೆಯನ್ನು ನೀವೇ ಕಟಾವು ಮಾಡಿಕೊಂಡುಮಾರುಕಟ್ಟೆಯಲ್ಲಿ ಮಾರಬೇಕಾಗಿತ್ತು. ಮಧ್ಯವರ್ತಿಗಳ ಹಾವಳಿಯಿಂದ ಸರಿ ಬೆಲೆಗೆ ಮಾರಾಟವಾಗುತ್ತಿರಲಿಲ್ಲ. ಅನೇಕ ವೇಳೆ ರಾತ್ರಿಹೊತ್ತು ಮಾರುಕಟ್ಟೆಯಲ್ಲಿ ಮಲಗಬೇಕಾದ ಸ್ಥಿತಿ ಇತ್ತು. ಕಾಯ್ದೆ ಬದಲಾವಣೆ ಪರಿಣಾಮ ನೀವೆಲ್ಲರೂ ಮಾರುಕಟ್ಟೆಗೆ ಹೋಗ ಬೇಕಾದ ಅಗತ್ಯವಿಲ್ಲ. ಖರೀದಿದಾರನೇ ನಿಮ್ಮಲ್ಲಿಗೇ ಬಂದು ಬೆಳೆ ಖರೀದಿ ಮಾಡುತ್ತಾನೆ ಎಂದು ವಿವರಿಸಿದರು.
ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್, ಮಾಗಡಿತಾಲೂಕಿನ ಬಿಜೆಪಿ ಅಧ್ಯಕ್ಷ ಧನಂಜಯ, ಬಿಜೆಪಿಮುಖಂಡ ಎಚ್.ಎಂ.ಕೃಷ್ಣಮೂರ್ತಿ, ರಾಜೇಶ್‌ಎಂ.ಆರ್.ರಾಘವೇಂದ್ರ, ಶ್ರೀನಿವಾಸಯ್ಯ,ಶಶಿಧರ್, ಆನಂದ, ಗೌಡರಪಾಳ್ಯದ ಗಂಗಾಧರ್, ದೊಡ್ಡಿಗೋಪಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.