ಬಂಡೀಪುರ, ಬಿ.ರಂ.ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ
Team Udayavani, Dec 24, 2020, 1:51 PM IST
ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ರಕ್ಷಿತ ಅರಣ್ಯ ಪ್ರದೇಶದ ಸುಂದರ ನೋಟ. (ಚಿತ್ರ ಕೃಪೆ: ಮಧುಕರಶಾಸ್ತ್ರಿ)
ಚಾಮರಾಜನಗರ: ಹೊಸವರ್ಷಾಚರಣೆಗೆ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ವನ್ಯಜೀವಿ ತಾಣಗಳಾದ ಬಂಡೀಪುರ ಹಾಗೂ ಬಿಳಿಗಿರಿರಂಗನಬೆಟ್ಟದಲ್ಲಿ ವಾಸ್ತವ್ಯ ಹೂಡಬೇಕೆಂದಿದ್ದರೆ ನಿಲ್ಲಿ..! ಕೋವಿಡ್ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಾಸ್ತವ್ಯಕ್ಕೆ ನಿರ್ಬಂಧ ಹೇರಿದೆ.
ಪ್ರಸಿದ್ಧ ಪ್ರವಾಸಿ ತಾಣಗಳಾದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಹಾಗೂ ಬಿಳಿಗಿರಿರಂಗನಾಥ ಹುಲಿ ರಕ್ಷಿತಾರಣ್ಯಗಳಲ್ಲಿ ಹೊಸ ವರ್ಷದ ಮುನ್ನಾದಿನ ಪ್ರತಿ ವರ್ಷ ವಸತಿ ಗೃಹಗಳು ಭರ್ತಿಯಾಗಿರುತ್ತಿದ್ದವು. 2 ತಿಂಗಳ ಮುಂಚೆಯೇ ಅರಣ್ಯ ಇಲಾಖೆಯ ಕಾಟೇಜ್‌ಗಳು ಬೆಂಗಳೂರು, ಮೈಸೂರಿನ ಅರನದ ಮೂಲಕ ಬುಕ್ ಆಗಿರುತ್ತಿದ್ದವು.
ಆದರೆ ಕೋವಿಡ್ ಹಿನ್ನೆಲೆ ಈ ಬಾರಿ ಅರಣ್ಯ ಇಲಾಖೆ, ತನ್ನ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ತಡೆಯೊಡ್ಡಿದೆ. ಡಿ.31 ಹಾಗೂ ಜ.1ರಂದು ಈ ಎರಡೂ ಅರಣ್ಯಗಳ, ಅರಣ್ಯ ಇಲಾಖೆಯ ವಸತಿ ಗೃಹಗಳಲ್ಲಿ ಉಳಿದುಕೊಳ್ಳಲು ಪ್ರವಾಸಿಗರಿಗೆ ಅವಕಾಶವಿಲ್ಲ ಎಂದು ಪ್ರಕಟಣೆ ಹೊರಡಿಸಿದೆ. ಆದರೆ, ಸಫಾರಿ ವ್ಯವಸ್ಥೆ ಎಂದಿನಂತೆ ಇರುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಡಳಿತ ಸೂಚನೆ: ಹೆಚ್ಚಿನ ಜನರು ಸೇರುವ ಕೂಟಗಳನ್ನು, ಸಾರ್ವಜನಿಕ ಸ್ಥಳಗಳಲ್ಲಿ, ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವಂತಹ ಸ್ಥಳಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಲಾಗಿದೆ. ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.
ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಭೌತಿಕ ಅಂತರ ಕಾಯ್ದುಕೊಳ್ಳಲು ಶೇ.50 ರಷ್ಟು ಜನರಿಗೆ ಮಾತ್ರ ಚರ್ಚ್ಗಳಿಗೆ ಪ್ರವೇಶ ಕಲ್ಪಿಸಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮವಹಿಸಬೇಕು. ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.
ಡಿ.30ರಿಂದಜನವರಿ2ರವರೆಗೆಕ್ಲಬ್,ಪಬ್,ರೆಸ್ಟೋರೆಂಟ್, ರೆಸಾರ್ಟ್, ಡಾಬಾ, ಹೋಟೆಲ್, ಲಾಡ್ಜ್ ಹಾಗೂ ಪಾರ್ಟಿಹಾಲ್‌ಗಳು ಇತರೆ ಸ್ಥಳ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿ.ಜೆ ಡ್ಯಾನ್ಸ್ , ವಿಶೇಷ ಪಾರ್ಟಿ ಇತ್ಯಾದಿ ಸಮಾರಂಭಗಳನ್ನು ನಿಷೇಧಿಸಲಾಗಿದೆ.
ಈ ಅವಧಿಯಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್, ರೆಸಾರ್ಟ್, ಡಾಬಾ, ಹೋಟೆಲ್, ಲಾಡ್ಜ್ಗಳನ್ನು ತೆರೆಯಬಹುದಾಗಿದ್ದು ಗ್ರಾಹಕರನ್ನು ಶೇ. 50ಕ್ಕೆ ಮಿತಿಗೊಳಿಸಲಾಗಿದೆ. ಹೊಸ ವರ್ಷಾಚರಣೆ ಸಂಬಂಧ ಜಿಲ್ಲಾ ವ್ಯಾಪ್ತಿಯಲ್ಲಿರುವ ಪ್ರೇಕ್ಷಣೀಯ ಸ್ಥಳ, ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದೆ.
65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷ ದೊಳಗಿನ ಮಕ್ಕಳು ಮನೆಯಲ್ಲೇ ಇರಬೇಕು. ಸಾರ್ವಜನಿಕ ಸ್ಥಳಗಲ್ಲಿ ಮಾಸ್ಕ್ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು, ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನುಕಡ್ಡಾಯವಾಗಿ ಇರಿಸಬೇಕೆಂದು ಸೂಚಿಸಲಾಗಿದೆ.
-ಕೆ.ಎಸ್.ಬನಶಂಕರ ಆರಾಧ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.