ಗಡಿನಾಡ ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಸ್ಪರ್ಶ

ನಿಪ್ಪಾಣಿ ಕ್ಷೇತ್ರದಲ್ಲಿ ಮೂರು ಶಾಲೆ ದತ್ತು ಪಡೆದ ಶಶಿಕಲಾ ಜೊಲ್ಲೆ,2.40 ಕೋಟಿ ಮೊತ್ತದ ಯೋಜನೆ ಸಿದ್ಧ

Team Udayavani, Dec 25, 2020, 4:39 PM IST

ಗಡಿನಾಡ ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಸ್ಪರ್ಶ

ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರ ಗಡಿಗೆಹೊಂದಿಕೊಂಡಿರುವ ನೂತನ ನಿಪ್ಪಾಣಿತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆನಿಪ್ಪಾಣಿ ಕ್ಷೇತ್ರ ಶಾಸಕಿ ಮತ್ತು ಸಚಿವೆ ಶಶಿಕಲಾಜೊಲ್ಲೆ ವಿಶೇಷ ಆಸಕ್ತಿ ವಹಿಸಿದ್ದಾರೆ. ಮೂರುಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಹೈಟೆಕ್‌ ಮಾಡಲು ಮುಂದಾಗಿದ್ದಾರೆ.

ನಿಪ್ಪಾಣಿ ಕ್ಷೇತ್ರ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಅಕ್ಕೋಳದ ಸರ್ಕಾರಿಹಿರಿಯ ಪ್ರಾಥಮಿಕ ಕನ್ನಡ ಶಾಲೆ,ಸೌಂದಲಗಾ ಸರ್ಕಾರಿ ಹಿರಿಯ ಪ್ರಾಥಮಿಕಕನ್ನಡ ಶಾಲೆ ಹೀಗೆ ಮೂರು ಶಾಲೆಗಳನ್ನುದತ್ತು ಪಡೆದಿದ್ದಾರೆ. ಈ ಶಾಲೆಗಳಲ್ಲಿ ಆಗಬೇಕಾದ ಮೂಲಸೌಲಭ್ಯಗಳ ಕುರಿತುಅಂದಾಜು 2.40 ಕೋಟಿ ರೂ. ವೆಚ್ಚದಯೋಜನೆ ಸಿದ್ಧಪಡಿಸಿದ್ದಾರೆ.

ದತ್ತು ಪಡೆದ ಶಾಲೆಗಳಲ್ಲಿ ಕೊಠಡಿ ಸಮಸ್ಯೆ,ಗಣಕಯಂತ್ರ, ಆಟದ ಮೈದಾನ, ಪ್ರೊಜೆಕ್ಟರ,ಗ್ರಂಥಾಲಯ ಮತ್ತು ಶೌಚಾಲಯ ಸಮಸ್ಯೆ ಪ್ರಮುಖವಾಗಿದೆ. ಹೀಗಾಗಿ ಈ ಶಾಲೆಗಳಅಭಿವೃದ್ಧಿಗೆ ಮುತುವರ್ಜಿ ವಹಿಸಿದ್ದಾರೆ.ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಿ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಲು ಅಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ.

ನಿಪ್ಪಾಣಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ತಾಲೂಕಾದ್ದರಿಂದಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿಲ್ಲ ಎಂಬ ಆರೋಪ ಎಲ್ಲೆಡೆ ಕೇಳಿ ಬರುತ್ತವೆ.ಆದರೆ ಸಚಿವೆ ಶಶಿಕಲಾ ಜೊಲ್ಲೆ ಗಡಿಭಾಗದಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆನೀಡಿದ್ದಾರೆ. ಹೊಸ ಕಟ್ಟಡ, ಶಿಕ್ಷಕರ ಕೊರತೆನಿವಾರಣೆಗೆ ಕ್ರಮ ಕೈಗೊಂಡಿದ್ದಾರೆ. ದತ್ತುಯೋಜನೆ ಯಶಸ್ವಿ ಅನುಷ್ಠಾನಕ್ಕೆ ತಯಾರಿ ನಡೆಸಿದ್ದಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಕ್ಕೋಳ :

ನಿಪ್ಪಾಣಿ ತಾಲೂಕಿನಲ್ಲಿ ದೊಡ್ಡ ಗ್ರಾಮವಾದ ಅಕ್ಕೋಳ ಗ್ರಾಮದಸರ್ಕಾರಿ ಹಿರಿಯ ಪ್ರಾಥಮಿಕಕನ್ನಡ ಶಾಲೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಈ ಶಾಲೆಯಲ್ಲಿ 1ರಿಂದ 8ತರಗತಿಯವರೆಗೆ ಸುಮಾರು 300 ಮಕ್ಕಳು ಅಧ್ಯಯನ ಮಾಡುತ್ತಾರೆ.ಶಾಲೆಗೆ ಪ್ರಮುಖವಾಗಿ ಮಕ್ಕಳಿಗೆಆಟದ ಮೈದಾನ, ನಾಲ್ಕು ಶೌಚಾಲಯ,ಎರಡು ಹೊಸ ಕಟ್ಟಡ, ಕಾಂಪೌಂಡ್‌ಬೇಡಿಕೆ ಸೇರಿ ಒಟ್ಟು 81.40 ಲಕ್ಷ ರೂ. ಯೋಜನೆ ಸಿದ್ಧಪಡಿಸಿದ್ದಾರೆ.

ಅಕ್ಕೋಳ ಶಾಲೆ ಅಭಿವೃದ್ಧಿ ಪಡಿಸಲು ಸಚಿವರು ಮನಸ್ಸು ಮಾಡಿದ್ದು ಸಂತಸ ತಂದಿದೆ. ಶಾಲೆಗೆ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಹಾಗೂಸಚಿವರಿಗೆ ಮನವರಿಕೆ ಮಾಡಲಾಗಿದೆ. ಶೀಘ್ರವಾಗಿ ಅಭಿವೃದ್ಧಿ ಕೆಲಸಗಳು ಆರಂಭವಾಗಬೇಕು. – ಬಿ.ಜಿ. ಲಠ್ಠೆ, ಮುಖ್ಯಾಧ್ಯಾಪಕ

ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ನಿಪ್ಪಾಣಿ : ನೂತನ ತಾಲೂಕಾ ಕೇಂದ್ರವಾದ ನಿಪ್ಪಾಣಿ ನಗರದಲ್ಲಿ ಆರಂಭವಾಗಿರುವ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ಮೂಲಭೂತ ಸೌಲಭ್ಯ ಮರೀಚಿಕೆಯಾಗಿರುವುದು ಕಂಡು ಬಂದಿದೆ. ಇತ್ತೀಚೆಗೆ ಆರಂಭವಾಗಿರುವ ಶಾಲೆಯಲ್ಲಿ ಸುತ್ತಮುತ್ತ ಕಾಂಪೌಂಡ್‌ ನಿರ್ಮಾಣವಾಗಬೇಕಿದೆ. 1ರಿಂದ 10ನೇ ತರಗತಿವರೆಗೆ 456 ಮಕ್ಕಳ ಹಾಜರಾತಿ ಇದ್ದು, ಹೆಚ್ಚುವರಿ ಕೊಠಡಿ, ಪ್ರಯೋಗಾಲಯ, ಕಂಪ್ಯೂಟರ್‌, ಕಾಂಪೌಂಡ್‌, ಗ್ರಂಥಾಲಯ ಹೀಗೆ ಸೌಲಭ್ಯಗಳ ಕಲ್ಪಿಸಲು ಸುಮಾರು 81.40 ಲಕ್ಷ ರೂ. ಖರ್ಚು ಮಾಡಲು ನಿರ್ಧರಿಸಿದ್ದಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ, ಸೌಂದಲಗಾ : 1ರಿಂದ 8ನೇ ತರಗತಿಯವರೆಗೆ 278 ಮಕ್ಕಳು ದಾಖಲಾಗಿದ್ದು,ಸೌಂದಲಗಾ ಗಡಿ ಗ್ರಾಮವಾಗಿದ್ದರಿಂದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಈ ಶಾಲೆಗೆ ಹೆಚ್ಚುವರಿಯಾಗಿ ಎರಡು ಕೊಠಡಿ, ಗ್ರಂಥಾಲಯ, ಲ್ಯಾಬ್‌, ಬಾಲಕ-ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಒದಗಿಸಲು 81.40 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಶಾಲೆ ದತ್ತು ಯೋಜನೆ ಯಶಸ್ವಿಯಾಗಲು ತಕ್ಷಣಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಪಡಿಸಬೇಕು. ಸಚಿವೆ ಶಶಿಕಲಾ ಜೊಲ್ಲೆ ವಿಶೇಷ ಪ್ರಯತ್ನದಿಂದ ನಮ್ಮ ಶಾಲೆ ಅಭಿವೃದ್ಧಿಯಾಗುವುದು ಗಡಿ ಭಾಗದ ಸರ್ಕಾರಿ ಶಾಲೆ ಬೆಳವಣಿಗೆಗೆ ಸಹಕಾರಿಯಾಗಲಿದೆ.  –ಎ.ಕೆ. ಪನ್ನೂರೆ, ಮುಖ್ಯಾಧ್ಯಾಪಕ

ನಾಲ್ಕೈದು ವರ್ಷದಲ್ಲಿ ನಿಪ್ಪಾಣಿ ಕ್ಷೇತ್ರದ ಸರ್ಕಾರಿ ಶಾಲೆಗಳ ಪ್ರಗತಿಗೆ ವಿಶೇಷ ಕಾಳಜಿವಹಿಸಿದ್ದು, ಶಾಲೆಗೆ ಬೇಕಾದ ಮೂಲಸೌಲಭ್ಯ ಒದಗಿಸಲು ಪ್ರಯತ್ನ ಮಾಡಲಾಗಿದೆ. ಈಗ ರಾಜ್ಯ ಸರ್ಕಾರದ ಆದೇಶನ್ವಯ ಮೂರು ಶಾಲೆ ದತ್ತು ಪಡೆದುಕೊಂಡು ಅಲ್ಲಿಆಗಬೇಕಾದ ಕೆಲಸ ಕಾರ್ಯಗಳನ್ನು ಪಟ್ಟಿ ಮಾಡಲಾಗಿದೆ. ಗಡಿ ಭಾಗದಲ್ಲಿಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. – ಶಶಿಕಲಾ ಜೊಲ್ಲೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ

 

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.