ಗ್ರಾಮ ಪಂಚಾಯಿತಿ ಚುನಾವಣೆ ಮತಗಟ್ಟೆಯ ಅಧಿಕಾರಿಗೆ ಕೋವಿಡ್ ಸೋಂಕು ಧೃಡ
Team Udayavani, Dec 25, 2020, 9:40 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಮೂರು ತಾಲೂಕುಗಳ ಮೊದಲ ಹಂತದ ಗ್ರಾ.ಪಂ. ಚುನಾವಣೆ ಶಾಂತಿಯುತವಾಗಿ ನಡೆಸಿ ದ್ವಿತೀಯ ಹಂತದ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆಗಳು ಮಾಡಿಕೊಳ್ಳುತ್ತಿದ್ದ ಬೆನ್ನಲ್ಲೇ, ಮೊದಲ ಹಂತದ ಗ್ರಾ.ಪಂ.ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಮತಗಟ್ಟೆ ಅಧಿಕಾರಿ ಒಬ್ಬರಿಗೆ ಕೋವಿಡ್ ಸೋಂಕು ಧೃಢಪಟ್ಟಿರುವುದು ಆತಂಕಕ್ಕೆ ಎಡೆಮಾಡಿದೆ.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ 24 ಗ್ರಾ.ಪಂ.ಗಳ ಚುನಾವಣೆ ಹಿನ್ನೆಲೆಯೆಲ್ಲಿ ಡಿಸೆಂಬರ್ 21 ರಂದು ನಡೆದ ಮಸ್ಟರಿಂಗ್ ವೇಳೆಯಲ್ಲಿ ಮತಗಟ್ಟೆಯ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣೆಯನ್ನು ನಡೆಸಲಾಗಿತ್ತು. ಈ ಪೈಕಿ ಮತಗಟ್ಟೆ ಅಧಿಕಾರಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಹಾಗಾಗಿ ಈ ಅಧಿಕಾರಿಯ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನೂ ಪತ್ತೆ ಹಚ್ಚಿ ಕೋವಿಡ್-19 ಪರೀಕ್ಷೆ ಗೆ ಒಳಪಡಿಸುವ ಮೂಲಕ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಶಿಡ್ಲಘಟ್ಟ ತಾಲೂಕು ಆರೋಗ್ಯ ಅಧಿಕಾರಿ ತಾಲೂಕು ದಂಡಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಬಂಟ್ವಾಳ : ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಲಿಫ್ಟ್ : ನಾಲ್ವರು ಮಕ್ಕಳು ಅಪಾಯದಿಂದ ಪಾರು
ಈ ಕುರಿತು ಶಿಡ್ಲಘಟ್ಟ ತಹಶೀಲ್ದಾರ್ ಅನಂತರಾಮು ಅವರನ್ನು ಉದಯವಾಣಿ ಸಂಪರ್ಕಿಸಿದಾಗ ಮತಗಟ್ಟೆಯ ಅಧಿಕಾರಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರೊಂದಿಗೆ ಪ್ರಾಥಮಿಕ ಸಂಪರ್ಕವನ್ನು ಹೊಂದಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪತ್ತೆಹಚ್ಚಿ ಆರೋಗ್ಯ ತಪಾಸಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ, ಜೊತೆಗೆ ಮತಗಳ ಎಣಿಕೆ ಕಾರ್ಯ ಸುಸೂತ್ರವಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.