ಬ್ರಿಟನ್‌ನಿಂದ ಬಂದ 151 ಜನರ ಲಿಂಕ್ ಮಿಸ್ಸಿಂಗ್: ಪಾಲಿಕೆಗೆ ರೂಪಾಂತರದ ತಲೆನೋವು !
Team Udayavani, Dec 25, 2020, 10:33 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರಕ್ಕೆ ಬ್ರಿಟನ್‌ನಿಂದ ಬಂದಿರುವ 1,512 ಜನರಲ್ಲಿ 151ಜನ ಎಲ್ಲಿದ್ದಾಾರೆ ಎಂದು ನಾಲ್ಕು ದಿನವಾದರೂ ಪತ್ತೆಯಾಗದೆ ಇರುವುದು ಪಾಲಿಕೆ ವ್ಯಾಪ್ತಿಯಲ್ಲಿ ರೂಪಾಂತರ ಕೊರೊನಾ ಸೋಂಕು ಭೀತಿ ಸೃಷ್ಟಿಯಾಗಿದೆ.
ಈ ಮಧ್ಯೆ ಬ್ರಿಟನ್‌ನಿಂದ ಬಂದ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾದಂತಾಗಿದೆ.
ಬ್ರಿಟನ್‌ನಿಂದ ಬಂದಿರುವವರನ್ನು ಪತ್ತೆ ಮಾಡಿ ಕೊಡಲೇ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸುವಂತೆ ಸರ್ಕಾರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಒಟ್ಟು 1,512 ಜನರಲ್ಲಿ ಇಲ್ಲಿಯವರೆಗೆ 542 ಜನರನ್ನು ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ 11 ಜನರಿಗೆ ಕೊರೊನಾ ಸೋಂಕು ಇರುವುದು ದೃಪಟ್ಟಿದೆ.
ಉಳಿದ 319 ಜನರ ಕೊರೊನಾ ಸೋಂಕು ವರದಿ ನೆಗೆಟಿವ್ ಬಂದಿದ್ದು, 212 ಜನರ ಪರೀಕ್ಷಾಾ ವರದಿಯನ್ನು ಪಾಲಿಕೆ ನಿರೀಕ್ಷೆೆ ಮಾಡುತ್ತಿಿದೆ. 706 ಜನರನ್ನು ಇನ್ನಷ್ಟೇ ಸೋಂಕು ಪರೀಕ್ಷೆಗೆ ಒಳಪಡಿಸಬೇಕಾಗಿದೆ. 1,512 ಜನರಲ್ಲಿ 1,248 ಜನರ ಮಾಹಿತಿ ಲಭ್ಯವಾಗಿದೆ ಎಂದು ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾಾರೆ.
47 ಜನ ಹೊರಜಿಲ್ಲೆ ಮತ್ತು ಹೊರ ರಾಜ್ಯದವರು: ನಗರಕ್ಕೆ ಬ್ರಿಿಟನ್‌ನಿಂದ ಆಗಮಿಸಿದವರಲ್ಲಿ 47 ಜನ ಹೊರ ಜಿಲ್ಲೆ ಮತ್ತು ಹೊರ ರಾಜ್ಯಕ್ಕೆ ಸೇರಿದವರಾಗಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹಾಗೂ ಆಯಾ ರಾಜ್ಯದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.