ಜಾತ್ರೆಯಿಂದ ಬರುತ್ತಿದ್ದವರಿಗೆ ಅಡ್ಡಿಯಾದ ಜವರಾಯ: ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು
Team Udayavani, Dec 26, 2020, 9:19 AM IST
ಉಳ್ಳಾಲ: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಶನಿವಾರ ನಸುಕಿನ ಜಾವ ನಡೆದಿದೆ.
ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಸುಮಾರು 3 ಗಂಟೆಯ ವೇಳೆ ಈ ಅಪಘಾತ ನಡೆದಿದ್ದು, ಸಂದೇಶ್ ಅವರು ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುತ್ತಿದ್ದರು.
ಅಪಘಾತದ ಪರಿಣಾಮ ಸಂದೇಶ್ ರಸ್ತೆಗುರುಳಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಅವಿವಾಹಿತರಾಗಿದ್ದು ಸಹೋದರಿ ಹಾಗೂ ತಾಯಿಯನ್ನು ಅಗಲಿದ್ದಾರೆ.
ಇದನ್ನೂ ಓದಿ:ತಿರುಪತಿಯಿಂದ ಬರುತ್ತಿದ್ದ ಕಾರಿಗೆ ಲಾರಿ ಢಿಕ್ಕಿ: ಕರ್ನಾಟಕದ ಇಬ್ಬರು ಸೇರಿ ಮೂವರ ಸಾವು
ಪೈಂಟರ್ ಆಗಿ ದುಡಿಯುತ್ತಿದ್ದ ಸಂದೇಶ್, ಕೋವಿಡ್ ಲಾಕ್ ಡೌನ್ ನಂತರ ಕೊಲ್ಯ ಸಮೀಪ ಮೀನು ಮಾರಾಟ ನಡೆಸುತ್ತಿದ್ದರು. ಮಂಗಳೂರಿನ ನಾಗುರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.