ಪಟ್ಟ ಭದ್ರರಿಂದ ರೈತರಿಗೆ ತಪ್ಪು ಮಾಹಿತಿ
ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ
Team Udayavani, Dec 26, 2020, 2:34 PM IST
ಗದಗ: ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಂಕಲ್ಪದೊಂದಿಗೆ ಕೇಂದ್ರ ಸರಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದಿವೆ. ಇದರಿಂದ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ರೈತರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ನಗರದ ಶ್ರೀನಿವಾಸ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ರೈತರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಉಭಯ ಕಾಯ್ದೆಗಳು ರೈತರ ಹಿತ ಕಾಪಾಡುತ್ತವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸರಕಾರ ಯಾವತ್ತೂ ರೈತ ಪರ ನಿರ್ಧಾರಗಳನ್ನೇ ಕೈಗೊಳ್ಳುತ್ತವೆ. ಈ ಬಗ್ಗೆ ಯಾವುದೇ ಸಂಶಯ ಬೇಡ.
ರೈತರು ಬೆಳೆದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸಬೇಕು ಎಂಬುದು ಈ ಕಾಯ್ದೆಗಳ ಆಶಯವಾಗಿದ್ದು, ರೈತರಿಗೆ ಕೊಟ್ಟ ವಚನಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ವಿಲೀನ ಚರ್ಚೆ ಬಾಲಿಶ, ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ: ದೇವೇಗೌಡ
ಬಿಜೆಪಿ ಜಿಲ್ಲಾ ಅಧ್ಯಕ್ಷ ಮೋಹನಮಾಳಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರದಲ್ಲಿನ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ರೈತರ ಪರವಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಇದರಿಂದ ಕಂಗಾಲಾದ ವಿರೋಧ ಪಕ್ಷಗಳು ರೈತ ವರ್ಗವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆಎಂದು ಆರೋಪಿಸಿದ ಅವರು, ರೈತರಲ್ಲಿ ಗೊಂದಲ ಮೂಡುಸುತ್ತಿರುವ ವಿರೋಧ ಪಕ್ಷಗಳ ಹುನ್ನಾರವನ್ನು ಬಿಜೆಪಿ ಕಾರ್ಯಕರ್ತರು ಬಯಲಿಗೆ ಎಳೆಯಲಿದ್ದಾರೆ ಎಂದರು.
ಇದಕ್ಕೂ ಮುನ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಪ್ರಯುಕ್ತ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ 9 ಕೋಟಿ ರೈತ ಕುಟುಂಬಗಳಿಗೆ ತಲಾ 2 ಸಾವಿರ ರೂ. ಗಳನ್ನು ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದರು.
ವೇದಿಕೆ ಮೇಲೆ ಜಿಲ್ಲಾ ಸಹ ಪ್ರಭಾರಿಗಳಾದ ನಾರಾಯಣ ಜರತಾರಘರ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ, ಹಿರಿಯರಾದ ಎಂ.ಎಸ್.ಕರೀಗೌಡ್ರ, ಶ್ರೀಪತಿ ಉಡುಪಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲತಾ ಮುತ್ತಿನಪೆಂಡಿಮಠ, ನಿರ್ಮಲಾ ಕೊಳ್ಳಿ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.