ಗ್ರಾ.ಪಂ.ಚುನಾವಣೆ: ಮತದಾನ ಮಾಡಲು ಬಂದ ಜಿ.ಪಂ. ಸದಸ್ಯನ ಮೇಲೆ ಹಲ್ಲೆ!
Team Udayavani, Dec 27, 2020, 10:38 AM IST
ಗದಗ: ಗ್ರಾ.ಪಂ.ಚುನಾವಣೆಗೆ ಮತದಾನ ಮಾಡಲು ಬಂದ ಜಿ.ಪಂ. ಸದಸ್ಯ ಶಿವಕುಮಾರ್ ನೀಲಗುಂದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಡೆದಿದೆ.
ರೋಣ ತಾಲೂಕಿನ ಮೆಣಸಗಿ ಗ್ರಾಮದ ಮತಗಟ್ಟೆ ಸಂಖ್ಯೆ 105 ರಲ್ಲಿ ಶಿವಕುಮಾರ ನೀಲಗುಂದ ಮತ ಹಾಕಲು ಆಗಮಿಸಿದ್ದರು. ಈ ವೇಳೆ ಕಾಂಗ್ರೆಸನ ಹಿರೇಗೌಡ ಸಹೋದರರು ಏಕಾಏಕಿ ಶಿವಕುಮಾರ ಅವರನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎಂದು ಅರೋಪಿಸಲಾಗಿದೆ.
ಈ ವೇಳೆ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು. ಪರಸ್ಪರ ಕೈಕೈ ಮಿಲಾಯಿಸಲು ಮುಂದಾಗುತ್ತಿದ್ದಂತೆ ಪರಿಸ್ಥಿತಿ ಕೈಮೀರುವುದನ್ನು ಅರಿತ ಪೊಲೀಸರು, ಲಾಠಿ ಬಿಸಿ ಮುಟ್ಟಿಸಿ, ಗುಂಪು ಚದುರಿಸಿದರು.
ಇದನ್ನೂ ಓದಿ:ಅಂಪಾರು: ವಾಹನದಲ್ಲಿ ಮತದಾರರನ್ನು ಕರೆತರುವ ವಿಚಾರದಲ್ಲಿ ವಾಗ್ವಾದ
ಗ್ರಾಮದಲ್ಲಿನ ರಾಜಕೀಯ ವೈಷಮ್ಯವೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಘಟನೆ ಸಂಬಂಧ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಬಿಗಿ ಬಂಧೋಬಸ್ತ ಕಲ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.