ಇಟಂಗಿಹಾಳ ಬಳಿ ಫುಡ್‌ಪಾರ್ಕ್ ನಿರ್ಮಾಣಕೆ r ಮನವಿ
Team Udayavani, Dec 27, 2020, 5:22 PM IST
ವಿಜಯಪುರ: ವಿಜಯಪುರ ಹೊರ ವಲದಯದ ಇಟ್ಟಂಗಿಹಾಳ ಹತ್ತಿರ ಫುಡ್‌ಪಾರ್ಕ್ ನಿರ್ಮಿಸಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ರೈತರು-ಉದ್ಯಮಿಗಳ ನಿಯೋಗ ಶನಿವಾರ ಬೆಂಗಳೂರಿನಲ್ಲಿ ಕೃಷಿ ಸಚಿವಬಿ.ಸಿ. ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ವಿಜಯಪುರ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಅದರಲ್ಲೂ ಲಿಂಬೆ, ದ್ರಾಕ್ಷಿ, ದಾಳಿಂಬೆ, ಮಾವು, ಬಾರೆ, ಪೇರಲ ಸೇರಿದಂತೆ ಉತ್ಕೃಷ್ಠ ಗುಣಮಟ್ಟದ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ಈ ರೈತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ, ಸಂಸ್ಕರಣೆ, ತಯಾರಿಕೆಗೆ ಸೌಲಭ್ಯಕಲ್ಪಿಸಿದರೆ ಜಿಲ್ಲೆಯ ರೈತರು ಆರ್ಥಿಕ ಅಭಿವೃದ್ಧಿಗೆಸಹಕಾರಿ ಆಗಲಿದ್ದು, ಸಣ್ಣ ಉದ್ಯಮಿಗಳು ಆರಂಭಕ್ಕೆ ಅವಕಾಶ ದೊರೆಯಲಿವೆ. ಈ ಕುರಿತು ಜಿಲ್ಲೆಯ ಶಾಸಕರಾದ ಮಾಜಿ ಸಚಿವ ಎಂ.ಬಿ. ಪಾಟೀಲ ಅವರುನವೆಂಬರ್ 30ರಂದೇ ಕೃಷಿ ಸಚಿವ ಬಿ.ಸಿ. ಪಾಟೀಲಅವರಿಗೆ ಪತ್ರ ಬರೆದುದನ್ನು ರೈತರ ನಿಯೋಗ ನೆನಪಿಸಿತು.
ವಿಜಯಪುರ ನಗರಕ್ಕೆ ಹೊಂದಿಕೊಂಡಿರುವ ಇಟ್ಟಂಗಿಹಾಳ ಗ್ರಾಮದ ಬಳಿ ಫುಡ್‌ಪಾರ್ಕ್ ನಿರ್ಮಿಸಲು 72 ಎಕರೆ ಜಮೀನು ಮೀಸಲಿರಿಸಲಾಗಿದೆ.ಇದೇ ಸ್ಥಳದಲ್ಲಿ ಫುಡ್‌ಪಾರ್ಕ್ ಆರಂಭಿಸಿದರೆ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಅಲ್ಲದೇ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಸಾಕಷ್ಟುಅವಕಾಶಗಳು ದೊರೆಯುತ್ತದೆ ಎಂದು ಕೃಷಿ ಸಚಿವ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಟ್ಟಿತು.
ಜಿಲ್ಲೆಯಲ್ಲಿ ಬಹುತೇಕ ಪ್ರದೇಶ ನೀರಾವರಿಗೆ ಒಳಪಟ್ಟಿರುವುದರಿಂದ ಮುಂದಿನ ವರ್ಷಗಳಲ್ಲಿಇನ್ನೂ ಹೆಚ್ಚಿನ ತೋಟಗಾರಿಕಾ ಪ್ರದೇಶಬೆಳವಣಿಗೆ ಆಗಲಿದೆ. ಈ ನಿಟ್ಟಿನಲ್ಲಿ ವಿಜಯಪುರಫುಡ್‌ಪಾರ್ಕ್‌ಗೆ ಕೃಷಿ ಸಚಿವರು ಹೆಚ್ಚು ಒತ್ತುನೀಡಬೇಕು ಎಂದು ಸವಿವರವಾಗಿ ತಿಳಿಸಲಾಯಿತು. ರೈತರ ನಿಯೋಗದ ಮನವಿಗೆ ಸ್ಪಂ ದಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ, ಶೀಘ್ರದಲ್ಲೇ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಮಾಡಿ, ಫುಡ್‌ಪಾರ್ಕ್ ಸ್ಥಾಪನೆಗೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ| ಕೆ.ಎಸ್. ಮುಂಬಾರೆಡ್ಡಿ, ವಿಜಯಪುರ ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ, ಬಿಎಲ್‌ಡಿಇ ನಿರ್ದೇಶಕ ಬಸನಗೌಡ ಪಾಟೀಲ, ಪ್ರಗತಿಪರ ರೈತರಾದ ದುಂಡಪ್ಪ ಬಡ್ರಿ, ಅಜೇಯ ಪಾಟೀಲ ಹನುಮಾಪುರ ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.