ದಿವ್ಯಾಂಗರ ಕಲ್ಯಾಣಕ್ಕಾಗಿ ಶೇ.5 ಅನುದಾನ ಮೀಸಲು


Team Udayavani, Dec 27, 2020, 6:01 PM IST

ದಿವ್ಯಾಂಗರ ಕಲ್ಯಾಣಕ್ಕಾಗಿ ಶೇ.5 ಅನುದಾನ ಮೀಸಲು

ಚಿಕ್ಕಮಗಳೂರು: ಸರ್ಕಾರ ದಿವ್ಯಾಂಗರ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಶೇ.5ರಷ್ಟು ಅನುದಾನವನ್ನು ಶಾಸನಬದ್ಧಗೊಳಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಹೇಳಿದರು.

ಶನಿವಾರ ನಗರದ ತಾಲೂಕು ಕಚೇರಿ ಆವರಣದಲ್ಲಿ ಜಿ.ಪಂ., ತಾ.ಪಂ., ನಗರಸಭೆ, ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಾಲೂಕಿನ 53 ದಿವ್ಯಾಂಗರಿಗೆ ಉಚಿತವಾಗಿ ಮೋಟರ್‌ ಸೈಕಲ್‌ ವಿತರಿಸಿ ಮಾತನಾಡಿದರು. ಅಂಗವೈಕಲ್ಯತೆ ಎನ್ನುವುದು ಬದುಕಿಗೆ ಅಡ್ಡಿಯಾಗಬಾರದು. ಬಹುತೇಕ ಅಂಗವಿಕಲರು ತಮ್ಮ ಆತ್ಮವಿಶ್ವಾಸ ಬಲದಿಂದ ಬಹುದೊಡ್ಡ ಸಾಧನೆತೋರಿದ್ದರೆ. ಅವರ ಜೀವನ ಕ್ರಮಗಳು ಆದರ್ಶ ಪ್ರೇರಣೆಯಾಗಬೇಕು ಎಂದರು.

ಜಿಲ್ಲೆಯಲ್ಲಿ ಈ ವರ್ಷ ಜಿ.ಪಂ., ತಾ.ಪಂ., ನಗರಸಭೆಯ ಅನುದಾನದಲ್ಲಿ ದಿವ್ಯಾಂಗರಕಲ್ಯಾಣ ಕಾರ್ಯಗಳಿಗೆ ಶೇ.20ರಷ್ಟು ಅನುದಾನ ಮೀಸಲಿರಿಸಲಾಗಿದ್ದು, 53 ಮಂದಿದಿವ್ಯಾಂಗರಿಗೆ ಮೋಟರ್‌ ಸೈಕಲ್‌ ವಿತರಿಸಲಾಗಿದೆ. ವಾಹನಗಳು ದುರುಪಯೋಗವಾಗದಂತೆ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ರಾಜ್ಯ ಸರ್ಕಾರ ದಿವ್ಯಾಂಗರ ಕಲ್ಯಾಣಕಾರ್ಯಗಳಿಗೆ ಆಯವ್ಯಯದಲ್ಲಿ ಶೇ.5ರಷ್ಟುಅನುದಾನವನ್ನು ಶಾಸನಬದ್ಧಗೊಳಿಸಿದೆ. ಜಿಲ್ಲೆಯಲ್ಲಿಬಾಕಿ ಉಳಿದಿರುವ ಎಲ್ಲಾ ದಿವ್ಯಾಂಗರಿಗೂ ಮುಂದಿನಬಜೆಟ್‌ನ ಅನುದಾನದಲ್ಲಿ ಹಿರಿತನದ ಆಧಾರದಲ್ಲಿಪ್ರತಿಯೊಬ್ಬರಿಗೂ ಆದ್ಯತೆಯ ಮೇಲೆ ಮೋಟಾರ್‌ ಸೈಕಲ್‌ ವಿತರಿಸಲಾಗುವುದು ಎಂದರು.

ತಾ.ಪಂ. ಅಧ್ಯಕ್ಷೆ ದ್ರಾಕ್ಷಾಯಿಣಿ ಪೂರ್ಣೇಶ್‌ ಮಾತನಾಡಿ, ಅಂಗವಿಕಲ ಚೇತನರಿಗೆ ವಿವಿಧ ಇಲಾಖೆಗಳ ಅನುದಾನದಲ್ಲಿ ಮೂರು ಚಕ್ರದಮೋಟರ್‌ ವಾಹನಗಳನ್ನು ವಿತರಿಸಲಾಗಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಜಿ.ಪಂ.ಉಪಾಧ್ಯಕ್ಷ ಸೋಮಶೇಖರಪ್ಪ ಮಾತನಾಡಿ, ಜಿ.ಪಂ.ನಲ್ಲಿ ಪ್ರತಿ ಸದಸ್ಯರಿಗೂ ಫಲಾನುಭವಿಗಳನ್ನು ಗುರುತಿಸಿ ಒಂದು ಮೋಟಾರ್‌ವಾಹನ ವಿತರಿಸಲು ಅವಕಾಶವಿದೆ. ಮುಂದಿನದಿನಗಳಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮ ವಹಿಸಲಾಗುವುದು. ಈಗಾಗಲೇ ಜಿ.ಪಂ.ನಲ್ಲಿಮೊದಲ ಹಂತದಲ್ಲಿ 28 ಮೋಟರ್‌ ಸೈಕಲ್‌ ವಿತರಿಸಲಾಗಿದ್ದು, ಸ್ಥಳೀಯ ಶಾಸಕರು ಸುಮಾರು 180ಕ್ಕೂ ಹೆಚ್ಚು ಮೋಟರ್‌ ವಾಹನಗಳನ್ನು ವಿತರಿಸಿದ್ದಾರೆ ಎಂದರು.

ಜಿ.ಪಂ.ಸದಸ್ಯೆ ಜಸಿಂತಾ ಅನಿಲ್‌ಕುಮಾರ್‌ ಮಾತನಾಡಿ, ದಿವ್ಯಾಂಗರ ಅನುಕೂಲಕ್ಕೆ ನೀಡಿರುವ ವಾಹನವನ್ನು ಕುಟುಂಬದವರು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಲ್ಲಿಸಬೇಕು. ಅವರ ಸ್ವಾವಲಂಬಿ ಬದುಕಿಗಾಗಿ ವಾಹನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ದಿವ್ಯಾಂಗರಿಗೆ ನೀಡಲಾಗುವುದು ಎಂದರು. ಜಿ.ಪಂ. ಸದಸ್ಯ, ರವೀಂದ್ರಬೆಳವಾಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್‌, ಮುಖಂಡರಾದ ವರಸಿದ್ದಿ ವೇಣುಗೋಪಾಲ್‌, ತಾ.ಪಂ. ಮಾಜಿ ಅಧ್ಯಕ್ಷರಾದ ಈಶ್ವರಹಳ್ಳಿ ಮಹೇಶ್‌, ನೆಟ್ಟಿಕೆರೆಹಳ್ಳಿ ಜಯಣ್ಣ ಎಸ್‌.ಸಿ ಮೊರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‌, ಎ.ಪಿ.ಎಂ.ಸಿ. ಅಧ್ಯಕ್ಷ ಶಿವಕುಮಾರ್‌, ವಿಕಲಚೇತನಾ ಧಿಕಾರಿ ವೀರೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.