ಶ್ರೀನಗರ: ಪೂಂಛ್ ನಲ್ಲಿ ದೇಗುಲ ಸ್ಫೋಟ ಸಂಚು ಬಯಲು; ಮೂವರ ಬಂಧನ
Team Udayavani, Dec 27, 2020, 9:43 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ನಲ್ಲಿ ಉಗ್ರರ ಜತೆಗೆ ನಿಕಟ ಸಂಪರ್ಕ ಇರುವ ಮೂವರನ್ನು ಬಂಧಿಸಲಾಗಿದೆ. ಅವರ ಬಳಿಯಿಂದ ಆರು ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಕುಮಾರ್ ಅಂಗ್ರಾಲ್ ಪಾಕಿಸ್ತಾನದಲ್ಲಿರುವ ಉಗ್ರರ ಹ್ಯಾಂಡ್ಲರ್ ಸೂಚನೆ ಮೇರೆಗೆ ಜಿಲ್ಲೆಯ ದೇವಸ್ಥಾನವೊಂದರ ಮೇಲೆ ದಾಳಿ ನಡೆಸಿ, ಆತಂಕದ ವಾತಾವರಣ ಸೃಷ್ಟಿಸಲು ಅವರು ಮುಂದಾಗಿದ್ದರು ಎಂದಿದ್ದಾರೆ.
ಗಲೌಟಾ ಗ್ರಾಮದಲ್ಲಿ ಇಬ್ಬರು ಸಹೋದರರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸಂಚು ಬಯಲಾಯಿತು ಎಂದು ಹೇಳಿದ್ದಾರೆ. ಮತ್ತೂಬ್ಬ ಪೊಲೀಸ್ ಅಧಿಕಾರಿ ಮತ್ತೂಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಬಂಧಿತರಲ್ಲಿ ಒಬ್ಬನಾಗಿರುವ ಮುಸ್ತಫಾ ಎಂಬಾತನ ಮನೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್‌ನ ತಂಡ ಶೋಧ ನಡೆಸಿದಾಗ ಆರು ಗ್ರೆನೇಡ್‌ಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸೋಮೇಶ್ವರ ಬೀಚ್ ಸ್ವತ್ಛಗೊಳಿಸಿ ಪ್ರಧಾನಿಯ ಮನಸೆಳೆದ ದಂಪತಿಗೆ ಬಿಜೆಪಿ ಸಮ್ಮಾನ
ಡಿ.13ರಂದು ಪೂಂಛ್ ನಲ್ಲಿ ನಡೆದಿದ್ದ ಎನ್‌ಕೌಂಟರ್ ಮತ್ತು ಭಾನುವಾರ ಬಂಧಿತರಾಗಿರುವವರಿಗೂ ಸಂಬಂಧವಿದೆಯೇ ಎಂದು ಪ್ರಶ್ನಿಸಿದಾಗ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಂಗ್ರಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.