![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 28, 2020, 6:10 AM IST
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕಾಗಿ ಕೇಶ ಬಿಟ್ಟಿರಬಹುದು ಎಂದು ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್ ಸದಸ್ಯರೂ ಆಗಿರುವ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಪ್ರಧಾನಿಯವರು ಅಧ್ಯಾತ್ಮಿಕ ವಿಚಾರದತ್ತ ಹೆಚ್ಚು ಒಲವು ಹೊಂದಿದ್ದಾರೆ. ನಮ್ಮಲ್ಲಿ ದೀಕ್ಷಾ ಬದ್ಧರಾಗುವುದು ಅಂತಿದೆ. ನಮಗನ್ನಿಸಿದಂತೆ ಮೋದಿಯವರು ರಾಮ ಮಂದಿರಕ್ಕೆ ಶಿಲಾನ್ಯಾಸ ಮಾಡಿದ್ದಾರೆ. ಇದರಿಂದ ಅವರು ನೈತಿಕವಾಗಿ ಸಂಪೂರ್ಣ ಜವಾಬ್ದಾರಿ ಹೊಂದಿದಂತಾಗುತ್ತದೆ ಎಂದರು.
ರಾಮ ಮಂದಿರ ನಿರ್ಮಾಣಕ್ಕೆ ಮೂರೂವರೆ ವರ್ಷ ಅವಧಿಯಿದ್ದು, ಅಂದಾಜು 1,500 ಕೋ. ರೂ. ವೆಚ್ಚವಾಗಲಿದೆ. 500 ಕೋ. ರೂ. ಮಂದಿರ ನಿರ್ಮಾಣಕ್ಕೆ ಹಾಗೂ 1 ಸಾವಿರ ಕೋ. ರೂ. ಅನ್ನು ಪರಿಸರದ ಅಭಿವೃದ್ಧಿ, ಯಾತ್ರಾ ನಿವಾಸ, ಮಾರ್ಗಗಳ ನಿರ್ಮಾಣಕ್ಕಾಗಿ ಬಳಸಲಾಗುತ್ತಿದೆ ಎಂದು ಶ್ರೀಗಳು ತಿಳಿಸಿದರು.
ರೈತರ ಚಳವಳಿ ಅಸಲಿಯಲ್ಲ
ದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಚಳವಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಗ ನಡೆಯುತ್ತಿರುವುದು ರೈತ ಚಳವಳಿ ಅಲ್ಲ. ರೈತ ಚಳವಳಿ ಮುಖವಾಡದಲ್ಲಿ ಇನ್ನೇನೋ ನಡೀತಿದೆ. ಪ್ರಧಾನಿ ಮೋದಿಯವರು ಪ್ರತಿದಿನ ಮಾತುಕತೆಗೆ ಕರೆಯುತ್ತಿದ್ದಾರೆ. ಯಾವ ಅಂಶದಲ್ಲಿ ವಿರೋಧ ಇದೆ. ಆ ಬಗ್ಗೆ ಚರ್ಚೆ ಮಾಡಿ; ಪರಿಹರಿಸೋಣ ಎನ್ನುತ್ತಿದ್ದಾರೆ. ಆದರೆ ರೈತ ಹೋರಾಟ ಹಳಿ ತಪ್ಪಿ ಹೋಗುತ್ತಿದೆ. ಹೀಗಾಗಿ ಇದಕ್ಕೆ ನಮ್ಮ ಸಂಪೂರ್ಣ ಸಹಮತ ಇಲ್ಲ ಎಂದು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.