ಬೆಳಗಾವಿ ಪಾಲಿಕೆಯ ಎದುರು ಕನ್ನಡ ಧ್ವಜ ಹಾರಿಸಿದ ಹೋರಾಟಗಾರರು
Team Udayavani, Dec 28, 2020, 12:55 PM IST
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಸಂಘಟನೆಗಳ ಹೋರಾಟಗಾರರು ಕನ್ನಡ ಧ್ವಜ ಹಾರಿಸಿದ್ದು, ಇದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ ನೇತೃತ್ವದಲ್ಲಿ ಬಂದ ಕನ್ನಡ ಅಭಿಮಾನಿಗಳು ಬೆಳಗಾವಿ ಮಹಾನಗರ ಪಾಲಿಕೆಯ ಎದುರು ಧ್ವಜ ಸ್ತಂಭ ಹತ್ತಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಈ ಹಿಂದೆ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಬೇಕೆಂಬ ಬೇಡಿಕೆ ಇತ್ತು. ಈಗ ಧ್ವಜ ಹಾರಿಸುವ ಮೂಲಕ ಕನ್ನಡಿಗರ ಬಹುದಿನಗಳ ಕನಸು ನನಸು ಮಾಡಿದ್ದಾರೆ.
ಇದನ್ನೂ ಓದಿ : ಐಪಿಎಲ್: 10 ತಂಡಗಳ ಲೆಕ್ಕಾಚಾರ ಹೇಗಿದ್ದೀತು? ತಂಡಗಳು ಯಾರ ಪಾಲಿಗೆ?
ಕನ್ನಡದ ಜಯಘೋಷಗಳೊಂದಿಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಆಗಮಿಸಿ ಧ್ವಜ ಕಂಬದ ಸಮೇತ ಪಾಲಿಕೆ ಮುಖ್ಯದ್ವಾರದ ಬಳಿ ಕನ್ನಡ ಧ್ವಜವನ್ನು ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಇದನ್ನು ತಡೆಯಲು ಯತ್ನಿಸಿದರು.ಆದರೆ ಇದಕ್ಕೆ ಒಪ್ಪದ ಹೋರಾಟಗಾರರು ಧ್ವಜ ಹಾರಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.