ನಾನು ದನದ ಮಾಂಸ ತಿನ್ನುತ್ತೇನೆ, ಆಹಾರ ಪದ್ಧತಿ ನನ್ನ ಹಕ್ಕು, ಕೇಳುವವರು ಯಾರು? ಸಿದ್ದರಾಮಯ್ಯ
Team Udayavani, Dec 28, 2020, 3:59 PM IST
ಬೆಂಗಳೂರು: ನಾನು ದನದ ಮಾಂಸ ತಿನ್ನುತ್ತೇನೆ. ನನ್ನ ಆಹಾರ ಪದ್ಧತಿ ನನ್ನ ಹಕ್ಕು. ಅದನ್ನ ಕೇಳೋಕೆ ನೀನು ಯಾರು ಎಂದು ಕೇಳಿದ್ದೇನೆ, ಅಧಿವೇಶನದಲ್ಲೂ ನಾನು ಕೇಳಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲವು ವಿಚಾರಗಳ ಬಗ್ಗೆ ನಮಗೆ ಮೊದಲು ಸ್ಪಷ್ಟತೆ ಇರಬೇಕು. ಗೋ ಮಾತೆಯನ್ನು ನಾವು ಪೂಜಿಸುತ್ತೇವೆ ಸರಿ. ಆದರೆ ವಯಸ್ಸಾದ ಹಸು, ಗಂಡು ಕರು ಏನ್ ಮಾಡೋದು ಹೇಳಿ? ಅವುಗಳನ್ನ ಏನ್ ಮಾಡೋದು ಹೇಳಿ? ಕಾಂಗ್ರೆಸ್ ನವರು ಇದನ್ನ ಸ್ಪಷ್ಟವಾಗಿ ಹೇಳಬೇಕು. ಬೇರೆ ಜಾತಿಯವರು ಏನೆಂದುಕೊಳ್ಳುತ್ತಾರೆ ಎಂದು ನಮ್ಮವರು ಮೌನಕ್ಕೆ ಶರಣಾಗುತ್ತಾರೆ. ಇದನ್ನು ಮೊದಲು ನಾವು ಬಿಡಬೇಕು. ನಮ್ಮ ಸಿದ್ಧಾಂತವನ್ನು ನಾವು ಹೇಳಬೇಕು ಎಂದು ಸ್ವಪಕ್ಷೀಯರಿಗೆ ಹೇಳಿದರು.
1964ರಲ್ಲಿ ಗೋ ಹತ್ಯೆ ಕಾನೂನು ತಂದಿದ್ದೆವು, ಆಗ ಬಿಜೆಪಿಯವರು ಇದ್ದರಾ? ಬಿಜೆಪಿಗಿಂತ ಹೆಚ್ಚು ಕಾರ್ಯಕರ್ತರ ಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾದರೆ, ಬಡವರಿಗೆ ರೈತರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ, ದಲಿತರಿಗೆ ಹಿನ್ನಡೆಯಾದಂತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.