ಕೃಷಿ ವಿಜ್ಞಾನಿಗಳಿಂದ ಕಬ್ಬಿನ ಬೆಳೆ ಪರಿಶೀಲನೆ

Team Udayavani, Dec 28, 2020, 3:48 PM IST

ಕೃಷಿ ವಿಜ್ಞಾನಿಗಳಿಂದ ಕಬ್ಬಿನ ಬೆಳೆ ಪರಿಶೀಲನೆ

ರಾಣಿಬೆನ್ನೂರ: ಹನುಮನಮಟ್ಟಿ ಕೃಷಿವಿಜ್ಞಾನ ಕೇಂದ್ರದ ವಿಜ್ಞಾನಿಗಳು ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಕಬ್ಬಿನ ಬೆಳೆಯ ತಾಕಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ ನಡೆಸಿದರು.

ಈ ವೇಳೆ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ| ಅಶೋಕ ಪಿ. ಮಾತನಾಡಿ, ಕಬ್ಬಿನ ಬೆಳೆಯು ಲಘು ಪೋಷಕಾಂಶವಾದಕಬ್ಬಿಣದ ಕೊರತೆಯಿಂದಾಗಿದ್ದು, ಇದಕ್ಕೆ ರೈತರು ಕೇದಿಗೆ ರೋಗ, ಹಳದಿ ರೋಗ ಎಂದುಕರೆಯುತ್ತಾರೆ. ಲಘು ಪೋಷಕಾಂಶಗಳ ಕೊರತೆ ಹೆಚ್ಚಾಗಿ ಕಬ್ಬು ಬಿಳುಚಿಕೊಳ್ಳುವುದು ಇತ್ತೀಚಿನದಿನಗಳಲ್ಲಿ ಪ್ರಮುಖವಾದ ಸಮಸ್ಯೆಯಾಗಿದೆ.ಪ್ರಥಮ ಹಂತದಲ್ಲಿ ಕೊರತೆಯೂ ಇದ್ದರುಸಹ ಬೆಳೆ ಅದನ್ನು ತೋರ್ಪಡಿಸುವುದಿಲ್ಲ. ಈಲಕ್ಷಣವನ್ನು ಹಿಡನ್‌ ಹಂಗರ್‌ ಎಂದು ಕರೆಯಲಾಗುತ್ತದೆ ಎಂದರು.

ಇದಕ್ಕೆ ಮುಖ್ಯಕಾರಣಗಳೆಂದರೆ ಕೊಟ್ಟಿಗೆ ಗೊಬ್ಬರಗಳ ಬಳಕೆಯ ಪ್ರಮಾಣ ಕಡಿಮೆ ಆಗಿರುವುದು, ಲಘು ಪೋಷಕಾಂಶಗಳ ಬಳಕೆ ಇಲ್ಲದಿರುವುದು, ಕಬ್ಬಿನ ನಂತರ ಕಬ್ಬು ಬೆಳೆ ಯೋಜನೆ, ಭೂಮಿಯಲ್ಲಿ ಲವಣಾಂಶ/ ಸವಳು ಹೆಚ್ಚಾಗಿರುವುದು, ಜವಳು ಮತ್ತು ಕ್ಷಾರ ಭೂಮಿಯಲ್ಲಿ ಕಬ್ಬಿಣದ ಅಂಶ ಬೆಳೆಗೆ ಲಭ್ಯವಾಗಲಾರದೆ ಕೊರತೆ ಹೆಚ್ಚು, ಕ್ಯಾಲ್ಸಿಯಂ ಹೆಚ್ಚಾಗಿರುವ ಎರೆ ಭೂಮಿಯಲ್ಲಿ ಕಬ್ಬಿಣದ ಅಂಶ ಬೆಳೆಗೆ ಲಭ್ಯವಾಗಲಾರದೆ ಕೊರತೆ ಉಂಟಾಗುವುದು ಮತ್ತು ಮರಳು/ಗರಸು/ಮಡ್ಡಿ ಜಮೀನಿನಲ್ಲಿ ಲಘು ಪೋಷಕಾಂಶಗಳ ಲಭ್ಯತೆ ಕಡಿಮೆಯಾಗಿ ಫಲವತ್ತತೆಕಡಿಮೆ ಇರುವುದರಿಂದ ಬಿಳಿಚಿನ ಲಕ್ಷಣ ಹೆಚ್ಚಾಗಿ ಕಂಡು ಬರುತ್ತಿದೆ ಎಂದರು.

ಕಬ್ಬಿಣದ ಕೊರತೆಯನ್ನು ನಿವಾರಿಸಲು ಕಬ್ಬನ್ನು ನಾಟಿ ಮಾಡುವಾಗ ಎಕರೆಗೆ 10 ಟನ್‌ ಕೊಟ್ಟಿಗೆ ಗೊಬ್ಬರ ಅಥವಾ ಕಾಂಪೋಸ್ಟ್‌ ಅನ್ನು ಭೂಮಿಗೆ ಹಾಕಬೇಕು. ಶಿಫಾರಸ್ಸು ಮಾಡಿದ ರಾಸಾಯನಿಕಗೊಬ್ಬರದೊಡನೆ ನಾಟಿ ಮಾಡುವಾಗ 10 ಕೆ.ಜಿಕಬ್ಬಿಣದ ಸಲ್ಪೇಟ ಅನ್ನು ಸುಮಾರು 50 ಕೆ.ಜಿ.ಎರೆಹುಳು ಗೊಬ್ಬರದೊಡನೆ ಬೆರೆಸಿ, ನೀರುಚಿಮುಕಿಸಿ ಒಂದು ರಾತ್ರಿ ಇಟ್ಟು ಮರುದಿನ ಕಬ್ಬು ಹಚ್ಚುವ ಸಾಲುಗಳಲ್ಲಿ ಭೂಮಿಗೆ ಸೇರಿಸಬೇಕು. ಇದರಿಂದ ಮಣ್ಣಿನ ಫಲವತ್ತತೆ ವೃದ್ಧಿಯಾಗುವುದು ಎಂದರು.

ವಿಜ್ಞಾನಿಗಳಾದ ಡಾ| ರಾಜಕುಮಾರ ಜಿ.ಆರ್‌. ಮತ್ತು ಡಾ|ಶಾಂತವೀರಯ್ಯ ಅವರು ರೈತರಿಗೆ ಸೂಕ್ತ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

Haveri-Riot

Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.