ರೈತ ವಿರೋಧಿ ಕಾಯ್ದೆ ವಿರುದ್ಧ ಆಕ್ರೋಶ
Team Udayavani, Dec 28, 2020, 5:31 PM IST
ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನುಹಿಂಪಡೆಯುವಂತೆ ಆಗ್ರಹಿಸಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆಶಿವಮೊಗ್ಗ ಜಿಲ್ಲಾ ಎನ್ಎಸ್ಯುಐ ತಟ್ಟೆ ಬಡಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿ ಬೆಂಬಲ ವ್ಯಕ್ತಪಡಿಸಿತು.
ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತ ಹೋರಾಟಗಾರರು ಕರೆ ನೀಡಿದಂತೆ,ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ಭಾಷಣ ಸಂದರ್ಭದಲ್ಲಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಜಿಲ್ಲಾ ಎನ್ಎಸ್ಯುಐಕಾರ್ಯಕರ್ತರು ತಟ್ಟೆ ಬಾರಿಸುವಮೂಲಕ ಬೆಂಬಲ ವ್ಯಕ್ತಪಡಿಸಿದರು.
ದೆಹಲಿ ರೈತರ ಹೋರಾಟಕ್ಕೆ ಬೆಂಬಲಿಸಿಮನ್ ಕಿ ಬಾತ್ ಸಂದರ್ಭದಲ್ಲಿ ತಟ್ಟೆಬಾರಿಸಿಪ್ರತಿಭಟಿಸುವಂತೆ ಭಾರತೀಯಕಿಸಾನ್ ಯೂನಿಯನ್ ಕರೆ ಕೊಟ್ಟಿತ್ತು.ಅದರಂತೆ ಪ್ರತಿಭಟನೆ ನಡೆಸಿದ ಜಿಲ್ಲಾ ಎನ್ಎಸ್ಯುಐ ಪದಾ ಧಿಕಾರಿಗಳು, ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆಆಗ್ರಹಿಸಿದರು. ದೆಹಲಿಯಲ್ಲಿ ಒಂದುತಿಂಗಳಿಂದ ರೈತರು ಮೂರು ಕೃಷಿ ಕಾಯ್ದೆಗಳವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇಡೀ ದೇಶಾದ್ಯಂತ ಕೃಷಿ ಕಾಯ್ದೆಗಳನ್ನು ಕೈಬಿಡುವಂತೆಲಕ್ಷಾಂತರ ರೈತರು ಒತ್ತಾಯಿಸಿದರೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದರು.ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ತಿದ್ದುಪಡಿಯಿಂದ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಾರೆ.ಕೇಂದ್ರ ಸರ್ಕಾರವು ಬಂಡವಾಳಶಾಹಿಗಳು ಹಾಗೂ ಉದ್ಯಮಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷ ಕೆ. ಚೇತನ್,ಜಿಲ್ಲಾಧ್ಯಕ್ಷ ಎಚ್.ಎಸ್. ಬಾಲಾಜಿ, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಧುಸೂದನ್,ಮಹಮದ್ ನಿಹಾಲ್, ಎನ್ಎಸ್ಯುಐಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ,ವಿನ್ಯಾಸ್, ಮಂಜು ಪುರಲೆ, ಮಹಮದ್ನಿಹಾಲ್, ಅಬ್ದುಲ್ ಸತ್ತರ, ಗಿರೀಶ್, ಶಿವು,ಭರತ್, ಸಂದೀಪ್, ಪ್ರಮೋದ್, ಆಕಾಶ್, ರವಿ, ಹೇಮಂತ್, ಸಂಜಯ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.