ಹನುಮನ ದೇವಾಲಯಗಳಿಗೆ ಭಕ್ತ ಸಾಗರ
Team Udayavani, Dec 28, 2020, 6:08 PM IST
ಚಿಂತಾಮಣಿ: ಹನುಮ ಜಯಂತಿ ಪ್ರಯುಕ್ತ ತಾಲೂಕಿನ ಹಲವು ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತರು ದೇಗುಲಗಳಿಗೆ ಆಗಮಿಸಿದರ್ಶನ ಪಡೆದರು. ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ರವರು ಕಂಗಾನಹಳ್ಳಿ ಸೀತಾರಾಮಾಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಅಂಬಾಜಿ ದುರ್ಗಾ ಹೋಬಳಿಯ ಕಂಗಾನಹಳ್ಳಿಯಲ್ಲಿ ನೆಲೆಸಿರುವ ಸೀತಾರಾಮಾಂಜನೇಯ ಸ್ವಾಮಿ, ಐಮರೆಡ್ಡಿಹಳ್ಳಿ ಗೇಟ್ ಚೀಮನಹಳ್ಳಿಯ ಅಭಯಾಂಜನೇಯಸ್ವಾಮಿ, ಬೂರಗಮಾಕಲ ಹಳ್ಳಿಯ ಸೀತಾರಾಮಾಂಜನೇಯಸ್ವಾಮಿ, ಅಂಬಾಜಿ ದುರ್ಗಾ ಬೆಟ್ಟದ ತಪ್ಪಲಿನ ಆಂಜನೇಯ ಸ್ವಾಮಿ, ವರದಾದ್ರಿ ಬೆಟ್ಟದ ವರದಾಂಜನೇಯ ಸ್ವಾಮಿ ದೇವಾಲಯಗಳಿಗೆ ಬೆಳಗ್ಗೆಯಿಂದಲೇ ಸಹಸ್ರಾರು ಭಕ್ತರು ಆಗಮಿಸಿ ದರ್ಶನ ಪಡೆದರು.
ಬೆಳಗ್ಗೆಯಿಂದಲೇ ಪಂಚಾಮೃತ ಅಭಿಷೇಕ, ಹೋಮ,ಪ್ರಧಾನ ಹೋಮ, ಪರಿವಾರ ದೇವತಾ ಹೋಮ, ಪೂರ್ಣಾಹುತಿ,ಅಷ್ಟಾವದನ ಸೇವೆ, ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಹನುಮ ಜಯಂತಿ ಪ್ರಯುಕ್ತಸ್ವಾಮಿಗೆ ಹಾಗೂ ದೇವಾಲಯಗಳಿಗೆ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರು ತಾಲೂಕಿನ ಕಂಗಾನಹಳ್ಳಿಯ ಸೀತಾರಾಮಾಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೇವಾಲಯದ ಆವರಣದಲ್ಲಿ ಭಜನೆ ಹಾಗೂ ಆಂಧ್ರದ ಜಾನಪದ ಕಲಾವಿದರು ನಡೆಸಿಕೊಟ್ಟ ಚಕ್ಕಲ ಭಜನೆಗಮನ ಸೆಳೆಯುತು. ಕಂಗಾನಹಳ್ಳಿ ಆಂಜನೇಯಸ್ವಾಮಿ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ದೇವಾಲಯದ ಕಮಿಟಿಯಿಂದ ಮುದ್ದೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಆದಿಚುಂಚನಗಿರಿ ಶಾಖಾ ಮಠದಲ್ಲಿ ಪೂಜೆ :
ಚಿಕ್ಕಬಳ್ಳಾಪುರ: ನಗರ ಸೇರಿದಂತೆ ಜಿಲ್ಲಾದ್ಯಂತ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಂಜಿನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.
ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠದಲ್ಲಿರುವ ಆಂಜನೇಯಸ್ವಾಮಿ ದೇವಾಲಯದಲ್ಲಿ ಅಭಿಷೇಕ, ಹೋಮ ಮತ್ತು ಪೂಜಾ ಕಾರ್ಯಕ್ರಮವನ್ನು ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ್ ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನೆರವೇರಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಶಿಡ್ಲಘಟ್ಟ ತಾಲೂಕಿನ ಚೌಡಸಂದ್ರದಲ್ಲಿ ಅಭಯ ಆಂಜನೇಯಸ್ವಾಮಿದೇವಾಲಯ, ಭಕ್ತರಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಗಳು ನೆರವೇರಿತು. ಶಿಡ್ಲಘಟ್ಟ ನಗರದ ಮಯೂರ ಸರ್ಕಲ್ ಬಳಿಯ ಮಹಾಮುಖ್ಯ ಪ್ರಾಣ ದೇವಾಲಯದ ಅಶ್ವತ್ಥಕಟ್ಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಅರ್ಚಕ ರಾಘವೇಂದ್ರರಾವ್ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.