CM ಕಿತ್ತಾಟ ಬಿಟ್ಟು ಪಕ್ಷ ಅಧಿಕಾರಕ್ಕೆ ತರಲು ಕೆಲಸಮಾಡಿ: ನಾಯಕರಿಗೆ ಮುನಿಯಪ್ಪ ಬುದ್ಧಿಮಾತು


Team Udayavani, Dec 28, 2020, 6:45 PM IST

CM ಕಿತ್ತಾಟ ಬಿಟ್ಟು ಪಕ್ಷ ಅಧಿಕಾರಕ್ಕೆ ತರಲು ಕೆಲಸಮಾಡಿ: ನಾಯಕರಿಗೆ ಮುನಿಯಪ್ಪ ಬುದ್ಧಿಮಾತು

ಬೆಂಗಳೂರು: ಮುಖ್ಯಮಂತ್ರಿ ಯಾರಾಗಬೇಕು ಎಂಬ “ಸಿಎಂ ಕುರ್ಚಿ ಕಿತ್ತಾಟ’ ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಕಾಂಗ್ರೆಸ್‌ನ ಹಿರಿಯ ಮುಖಂಡ ಕೆ.ಎಚ್‌. ಮುನಿಯಪ್ಪ “ಬುದ್ಧಿಮಾತು’ ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, “ಯಾರೋ ಬುದ್ದಿ ಇಲ್ಲದವರು ಹೇಳುತ್ತಾರೆ ಮತ್ತೇ ಸಿದ್ದರಾಮಯ್ಯ ಸಿಎಂ ಆಗ್ತಾರೆ, ಇಲ್ಲ ಡಿ.ಕೆ. ಶಿವಕುಮಾರ್‌ ಸಿಎಂ ಆಗ್ತಾರೆ’ ಎಂದು. ಸಿದ್ದರಾಮಯ್ಯನವರೇ ನಿವಾದರೂ ಸಿಎಂ ಆಗಿ, ಪರಮೇಶ್ವರ್‌ ಆದ್ರೂ ಆಗಲಿ, ಇಲ್ಲ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆದ್ರೂ ಆಗಲಿ. ಈ ವಿಚಾರದಲ್ಲಿ ಗೊಂದಲ ಬೇಡ. ಇದರಿಂದ ಪಕ್ಷ ಹಾಳಾಗುತ್ತದೆ ಎಂದರು.

ಇದೇ ವೇಳೆ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ ಮುನಿಯಪ್ಪ, ಸಿದ್ದರಾಮಯ್ಯನವರೇ ನೀವು ಉಗ್ರ ಹೋರಾಟ ಮಾಡುತ್ತಿದ್ದೀರಿ. ನೀವು ಮುಖ್ಯಮಂತ್ರಿ ಆಗಿ ಸ್ವಾತಂತ್ರ್ಯ ಬಂದಾಗಿನಿಂದ ಯಾವ ಸರ್ಕಾರವೂ ನೀಡದಂತಹ ಒಳ್ಳೆಯ ಕಾರ್ಯಕ್ರಮಗಳನ್ನು ನಿಡೀದ್ದೀರಿ. ಈಗ ನಿಮ್ಮ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಎಐಸಿಸಿ ನಿಮ್ಮನ್ನೇ ನಂಬಿದೆ. ನೀವು ಮುಂದೆ ಸಾಗಬೇಕು, ಅಧ್ಯಕ್ಷರನ್ನು ಜೊತೆಗೆ ಕರೆದುಕೊಂಡು ಹೋಗಬೇಕು. ಮುಖ್ಯಮಂತ್ರಿ ವಿಚಾರದಲ್ಲಿ ಗೊಂದಲ ಬೇಡ ಎಲ್ಲರೂ ಒಗ್ಗಾಟ್ಟಾಗಿ ಹೋಗೋಣ ಎಂದರು.

ಇದನ್ನೂ ಓದಿ:ಕೇಂದ್ರದ ನೂತನ ಕೃಷಿ ನೀತಿ:ಡಿಸೆಂಬರ್ 30ರಂದು ಮತ್ತೆ ರೈತರ ಸಭೆ ಕರೆದ ಕೇಂದ್ರ

ದಲಿತರು, ಅಲ್ಪಸಂಖ್ಯಾತರಯ ಭಯಭೀತರಾಗಿದ್ದಾರೆ, ರೈತರು ಹೋರಾಟ ನಡೆಸುತ್ತಿದ್ದಾರೆ, ಕಾರ್ಮಿಕರು ಬೀದಿಪಾಲಾಗಿದ್ದಾರೆ, ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ ಇದನ್ನು ನೋಡಿ ಕಾಂಗ್ರೆಸ್‌ ಪಕ್ಷ ಸುಮ್ಮನೆ ಇರಬೇಕಾ? ಸಿಎಂ ಕುರ್ಚಿಗಾಗಿ ಹೋರಾಟ ಮಾಡಬೇಕಾ? ಇಲ್ಲ. ಸಿದ್ದರಾಮಯ್ಯನವರೇ ನೀವು ಡಿ.ಕೆ ಶಿವಕುಮಾರ್‌ಗಿಂತ ದೊಡ್ಡವರಿದ್ದೀರಿ, ನೀವು ಮುಂದೆ ಸಾಗಿ ಎಲ್ಲರೂ ನಿಮ್ಮ ಹಿಂದೆ ಬರುತ್ತೇವೆ, ನಿಮ್ಮಿಂದ ಕಾಂಗ್ರೆಸ್‌ ಉದ್ಧಾರ ಆಗುತ್ತದೆ ಮತ್ತು ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ಏಕೈಕ ಉದ್ದೇಶದಿಂದ ಶ್ರಮಿಸೋಣ. ಮುಖ್ಯಮಂತ್ರಿ ಯಾರಾಗಬೇಕು ಎಂದು ಪಕ್ಷದ ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದರು.

ಕಾಂಗ್ರೆಸ್‌ನಲ್ಲೇ ಕೊನೆ ಉಸಿರು:
ನಾನು ಕೆಪಿಸಿಸಿ ಅಧ್ಯಕ್ಷನಾಗಬೇಕೆಂದು ಬಯಸಿದ್ದೆ. ಮೇಡಂ (ಸೋನಿಯಾಗಾಂಧಿ) ಸಹ ಹೇಳಿದ್ದರು. ಆದರೆ, ಆವತ್ತು ಯಾರು ಅಡ್ಡಿಪಡಿಸಿದರು ಎಂದು ಈಗ ಉಲ್ಲೇಖ ಮಾಡಲ್ಲ, ಅದರ ಬಗ್ಗೆ ಪ್ರಚಾರವೂ ಮಾಡುವುದಿಲ್ಲ. ಪಕ್ಷ ಬಿಡುವುದಿಲ್ಲ. ಕಡೆವರೆಗೆ ಪಕ್ಷದಲ್ಲೇ ಇರುತ್ತೇನೆ. ನನ್ನ ಕೊನೆ ಉಸಿರು ಬಿಡುವುದು ಕಾಂಗ್ರೆಸ್‌ ಪಕ್ಷದಲ್ಲೇ. ಯಾವ ಅಧಿಕಾರಕ್ಕೂ ನಾನು ಆಸೆ ಪಡುವುದಿಲ್ಲ ಎಂದು ಇದೇ ವೇಳೆ ಮುನಿಯಪ್ಪ ಹೇಳಿದರು.

ಬಿಜೆಪಿ ವಿರುದ್ಧ ಸಿದ್ಧು ಒಬ್ಬರೇ ಹೋರಾಟ
ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಚ್‌. ಮುನಿಯಪ್ಪ, ರಾಜ್ಯದಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯನವರು ಒಬ್ಬರೇ ಹೋರಾಟ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ಟೀಕೆಗೂ ಒಳಗಾಗಿದ್ದಾರೆ. ಅದೇ ರೀತಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ಮಾತ್ರ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸದಸ್ಯರು, ಶಾಸಕಾಂಗ ಪಕ್ಷದ ನಾಯಕರು, ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರು ಮಾತನಾಡಬೇಕು. ಪ್ರಧಾನಿ ಭಾಷಣ ಮುಗಿದ ತಕ್ಷಣ ಪತ್ರಿಕಾಗೋಷ್ಠಿಗಳನ್ನು ನಡೆಸಿ ಬಿಜೆಪಿ ವಿರುದ್ಧ ಅಟ್ಯಾಕ್‌ ಮಾಡಬೇಕು, ಅವರ ಅನ್ಯಾಯ ಅಚಾತುರ್ಯಗಳನ್ನು ಜನರಿಗೆ ತಿಳಿಸಬೇಕು. ಆದರೆ, ಕಾಂಗ್ರೆಸ್‌ನಲ್ಲಿ ಅದು ಆಗುತ್ತಿಲ್ಲ ಎಂದು ಬೇಸರದಿಂದ ನುಡಿದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.