ಘಾಟಿ ದೇಗುಲ ಹುಂಡಿಯಲ್ಲಿ 60.5 ಲಕ್ಷ ರೂ. ಸಂಗ್ರಹ

Team Udayavani, Dec 30, 2020, 12:19 PM IST

ಘಾಟಿ ದೇಗುಲ ಹುಂಡಿಯಲ್ಲಿ 60.5 ಲಕ್ಷ ರೂ. ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಗಿದ್ದು 60,56,478 ರೂ ಸಂಗ್ರಹವಾಗಿದೆ. ಕೋವಿಡ್‌-19 ನಂತರ ಎಣಿಕೆ ಮಾಡಿದ ಹೆಚ್ಚಿನ ಮೊತ್ತ ಇದಾಗಿದೆ.

ಈ ಬಾರಿ ಹುಂಡಿಯಲ್ಲಿ ಒಟ್ಟು 60,56,478 ರೂ. ದಾಖಲೆ ಮೊತ್ತ ಸಂಗ್ರಹವಾಗಿದೆ. ಇದರೊಂದಿಗೆ 77,500 ರೂ ಮೌಲ್ಯದ 2 ಕೆ.ಜಿ. 350 ಗ್ರಾಂ ಬೆಳ್ಳಿ, 4200 ರೂ ಮೌಲ್ಯದ 2 ಗ್ರಾಂ 500 ಮಿಲಿ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ಮಂಗಳವಾರ ನಡೆದ ಎಣಿಕೆ ಕಾರ್ಯದಲ್ಲಿ ಕಳೆದ ಹಲವು ತಿಂಗಳಿಂದ ಕಂಡುಬರುತ್ತಿದ್ದ ನಿಷೇಧಿತ ನೋಟು ಹಾಗೂ ವಿದೇಶಿ ನೋಟು ಪತ್ತೆಯಾಗಿಲ್ಲ..

ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು. ಮುಜರಾಯಿ ತಹಶೀಲ್ದಾರ್‌ ಜಿ.ಜೆ.ಹೇಮಾವತಿ, ಅಧೀಕ್ಷಕ ರಘುಉಚ್ಚಪ್ಪ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಕೃಷ್ಣಪ್ಪ, ಪ್ರಧಾನ ಅರ್ಚಕ ಗುರುರಾಜಶರ್ಮ,ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಸಿಬ್ಬಂದಿ, ಪೊಲೀಸ್‌ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.

ಚಿನ್ನ ಕಳ್ಳತನ: ಆರೋಪಿಗಳ ಬಂಧನ :

ದೊಡ್ಡಬಳ್ಳಾಪುರ: ಕಪ್ಪು ಬಣ್ಣದ ಪಲ್ಸರ್‌ನಲ್ಲಿ ಬಂದು ಗ್ರಾಮೀಣ ಪ್ರದೇಶದ ಮಹಿಳೆಯರ ಗುರುಮಾಡಿ, ಅವರ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಿತ್ತು ಪರಾರಿಯಾಗುತ್ತಿದ್ದ ಸಹೋದರರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ನೆಲಮಂಗಲ ಮಾರುತಿ ನಗರದ ನಿವಾಸಿಗಳಾದ ಅಶೋಕ್‌ ಸಿ. ಮತ್ತು ವಿನೋದ್‌ ಅಣ್ಣ- ತಮ್ಮಂದಿರಾಗಿದ್ದು, ಸರಗಳ್ಳತನದ ಕಾರ್ಯಕ್ಕೆ ಇಳಿದಿದ್ದರು. ಈ ಕುರಿತು ನಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ವಲಯದ ಐಜಿಪಿ ಸೀಮಂತ್‌ ಕುಮಾರ್‌ ಸಿಂಗ್‌, ಆರೋಪಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು, ರಾಮನಗರ, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಿವಿಧ ಪೊಲೀಸ್‌ ಠಾಣಸರಹದ್ದುಗಳಲ್ಲಿ ಒಂಟಿಯಾಗಿ ಓಡಾಡುವ, ದನ ಮೇಯಿಸುವ, ಹೊಲದಲ್ಲಿ ಕೆಲಸಮಾಡುವ ಮಹಿಳೆಯರು ವೃದ್ಧೆಯರ ಕತ್ತಿನಲ್ಲಿರುವ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಹೋಗುತ್ತಿದ್ದರು. ಒಟ್ಟು 26 ಪ್ರಕರಣಗಳನ್ನು ಪತ್ತೆ ಹಚ್ಚಿ 25 ಲಕ್ಷ ರೂ.ಮೌಲ್ಯದ 510 ಗ್ರಾಮ ತೂಕದ 23 ಚಿನ್ನದ ಸರ ಹಾಗೂ ಅರೋಪಿಗಳು ಕೃತ್ಯಕ್ಕೆ ಬಳಸಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಪೊಲೀಸ್‌ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್‌, ಅಪರ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್‌ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಟಿ.ರಂಗಪ್ಪ ನೇತೃತ್ವದಲ್ಲಿ ನವೀನ್‌ ಕುಮಾರ್‌, ಗಜೇಂದ್ರ, ಬೇಬಿ ವಾಲೇಕರ್‌, ಶಂಕರಪ್ಪ, ಸೋಮಶೇಖರ್‌, ಮಂಜುನಾಥ್‌ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಲಾಕಾಡೌನ್‌ ವೇಳೆ ಮದ್ಯ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್‌ ಅಧೀಕ್ಷಕ ರವಿ ಡಿ ಚನ್ನಣ್ಣನವರ್‌ ಕಳ್ಳರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದರು. ದೊಡ್ಡಬಳ್ಳಾಪುರ ಪೊಲೀಸ್‌ ತಂಡ ನಾಗರಾಜ್, ಅಂಜಿ, ನವೀನ್‌ ಕುಮಾರ್‌, ಶಶಿಕುಮಾರ್‌ ಎಂಬುವರನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 13 ಬಾಕ್ಸ್‌ ಮದ್ಯದ ಬಾಟಲಿ ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.