ಕುವೆಂಪು ಎಲ್ಲ ಕಾಲಕ್ಕೂ ಪ್ರಸ್ತುತ
Team Udayavani, Dec 30, 2020, 3:15 PM IST
ತುಮಕೂರು: ಮನುಜ ಮತ ವಿಶ್ವಪಥ ತತ್ವವನ್ನು ಸಾರಿದ ಮೊದಲ ವ್ಯಕ್ತಿ ಕುವೆಂಪು. ಅಂಬೇಡ್ಕರ್, ಗಾಂಧೀಜಿ, ಗೋಖಲೆ, ಬುದ್ಧ, ಬಸವಣ್ಣನವರ ಸಾಲಿಗೆ ಸೇರುವ ವ್ಯಕ್ತಿ. ಅವರು ಎಲ್ಲೆಡೆಯೂ ಎಲ್ಲಾ ಕಾಲದಲ್ಲೂ ಪ್ರಸ್ತುತ ಎನಿಸುತ್ತಾರೆ ಎಂದು ತುಮಕೂರು ವಿವಿ ಕುಲಪತಿ ಕರ್ನಲ್ ಪ್ರೊ ವೈ.ಎಸ್ ಸಿದ್ದೇಗೌಡ ತಿಳಿಸಿದರು.
ತುಮಕೂರು ವಿವಿ ಕುವೆಂಪು ಅಧ್ಯಯನ ಪೀಠ ಮಂಗಳವಾರ ಆಯೋಜಿಸಿದ್ದ ಕುವೆಂಪು ಜನ್ಮ ದಿನಾಚರಣೆಯ ಅಂತರ್ಜಾಲಉಪನ್ಯಾಸ ಮಾಲಿಕೆ ಯನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಅಸ್ಮಿತೆಯನ್ನು ಕಾಪಾಡುವುದಕ್ಕಾಗಿ ಯಾವುದೆಲ್ಲಆಚಾರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಕುವೆಂಪುಸ್ಪಷ್ಟವಾಗಿ ಹೇಳಿದ್ದಾರೆ. ಅವರ ನಿರ್ದೇಶನಗಳನ್ನು ಅನುಸರಿಸಿದರೆಸುಖೀಸಮಾಜದ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ ಎಂದರು.
ಕುವೆಂಪು ಅವರ ಲೇಖನಮಾರ್ಗ ಕುರಿತು ಉಪನ್ಯಾಸ ನೀಡಿದ ಹಿರಿಯ ವಿಮರ್ಶಕ ಎಚ್. ಎಸ್ ರಾಘವೇಂದ್ರ ರಾವ್, ಅಧ್ಯಾತ್ಮ,ಧರ್ಮ, ತತ್ವಶಾಸ್ತ್ರ ಯಾವುದನ್ನೂ ನಿರಾಕರಿಸದೇ ನೂರು ದೇವರನೆಲ್ಲಾ ನೂಕಾಚೆ ದೂರ, ತಾಯಿ ಭಾರತಾಂಬೆಯೇ ನಮ್ಮ ದೇವರು ಎಂದವರು ಕುವೆಂಪು ಎಂದು ವಿಶ್ಲೇಷಿಸಿದರು.
ತುಮಕೂರು ವಿವಿ ಕುಲಸಚಿವ ನರಸಿಂಹಪ್ಪ, ಕುವೆಂಪು ಅಧ್ಯಯನ ಪೀಠದ ಸಂಯೋಕಜಕಿ ಡಾ. ಗೀತಾ ವಸಂತ ಉಪಸ್ಥಿತರಿದ್ದರು.
ಕುವೆಂಪು ತತ್ವಾದರ್ಶ ಪಾಲಿಸಿ: ಡೀಸಿ :
ತುಮಕೂರು: ವಿಶ್ವ ಮಾನವ ಕುವೆಂಪು ಅವರ ತತ್ವಾದರ್ಶ ವನ್ನು ಪ್ರತಿಯೊಬ್ಬರು ಪಾಲಿಸಬೇಕೆಂದುಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶ್ವಮಾನವ ದಿನಾಚರಣೆ ಯ ಅಂಗವಾಗಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕುವೆಂಪು ಅವರು ನಾಡು ಕಂಡ ಶ್ರೇಷ್ಠಕವಿ, ಜ್ಞಾನಪೀಠಪಡೆದವರಲ್ಲಿ ಮೊದಲಿಗರು ಅವರಸಾಹಿತ್ಯವನ್ನು ಪ್ರತಿಯೊಬ್ಬರೂ ಓದಲೇಬೇಕು ಎಂದರು.
ಪಾಲಿಕೆ ಆಯುಕ್ತೆ ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್, ಪಿಡಬ್ಲ್ಯೂಡಿ ಇಂಜಿನಿಯರ್ ಸಂಜೀವ್‌ರಾಜ್, ಸೇರಿದಂತೆಮತ್ತಿತರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.