ಶಿವಮೊಗ್ಗದ ನಾಲ್ವರಿಗೆ ರೂಪಾಂತರಿತ ಸೋಂಕು
ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ
Team Udayavani, Dec 31, 2020, 5:58 AM IST
ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಾಲ್ವರಲ್ಲಿ ರೂಪಾಂತರಿತ ವೈರಸ್ ಸೋಂಕು ಪತ್ತೆಯಾಗಿದೆ. ಹೊಸದಾಗಿ ಈ ಸೋಂಕು ಪತ್ತೆಯಾದವರು ಶಿವಮೊಗ್ಗದವರಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಶಿವಮೊಗ್ಗದ ನಾಲ್ವರ ಸಹಿತ ರಾಜ್ಯದಲ್ಲಿ ಇದುವರೆಗೆ ಒಟ್ಟು ಏಳು ಮಂದಿಯಲ್ಲಿ ರೂಪಾಂತರಿತ ವೈರಸ್ ಪತ್ತೆಯಾಗಿದೆ. ದೇಶ ಮಟ್ಟದಲ್ಲಿ ಹೊಸ ಸೋಂಕುಪೀಡಿತರ ಸಂಖ್ಯೆ 20ಕ್ಕೆ ಏರಿದೆ. ಇದರ ಮಧ್ಯೆ ರಾಜ್ಯದಲ್ಲಿ ರೂಪಾಂತರಿತ ಕೊರೊನಾ ವೈರಸ್ ಪತ್ತೆ ಪರೀಕ್ಷೆಯ ಪಾಸಿಟಿವಿಟಿ ದರ ಹೆಚ್ಚು ಕಡಿಮೆ ಅರ್ಧ ದಷ್ಟಿರುವುದು ಆತಂಕ ಮೂಡಿಸಿದೆ. ಈವರೆಗೆ ಈ ವೈರಾಣುವಿನ ವಂಶವಾಹಿ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಿದ ತಲಾ ಇಬ್ಬರಲ್ಲಿ ಒಬ್ಬರಲ್ಲಿ ಅದು ದೃಢಪಟ್ಟಿದೆ. ದಿಲ್ಲಿ ಬಿಟ್ಟರೆ ಹೆಚ್ಚು ರೂಪಾಂತರಿತ ಪ್ರಕರಣಗಳು ಮತ್ತು ಪಾಸಿಟಿವಿಟಿ ದರ ಕರ್ನಾಟಕದಲ್ಲಿವೆ.
ಶೇ. 2ರಷ್ಟು ಮಂದಿಗೆ ಸೋಂಕು!
ಡಿಸೆಂಬರ್‌ನಿಂದೀಚೆಗೆ ಬ್ರಿಟನ್‌ನಿಂದ ಬಂದ ಪ್ರಯಾಣಿಕರಲ್ಲಿ ಶೇ. 2 ಮಂದಿಯಲ್ಲಿ ಹೊಸ ಸೋಂಕು ದೃಢಪಟ್ಟಿದೆ. ಇಲಾಖೆಯ ಮಾಹಿತಿ ಪ್ರಕಾರ ಡಿ. 1ರಿಂದ ಡಿ. 23ರ ವರೆಗೆ 2,127 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಪೈಕಿ 1,717 ಮಂದಿಯ ಪರೀಕ್ಷೆ ಮುಕ್ತಾಯಗೊಂಡಿದ್ದು, 31 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಪರೀಕ್ಷೆಗೆ ಒಂದೇ ಪ್ರಯೋಗಾಲಯ
ರೂಪಾಂತರಿತ ಕೊರೊನಾ ಸೋಂಕು ಪತ್ತೆಗೆ ದೇಶದಲ್ಲಿ 10 ಎರಡು ಪ್ರಯೋಗಾಲಯಗಳನ್ನು ನಿಗದಿಪಡಿಸಲಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿ ನಿಮ್ಹಾನ್ಸ್ ಮತ್ತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯ ಜೀವಶಾಸ್ತ್ರ ವಿಭಾಗ (ಬಿಡಿಟಿ) ಸೇರಿ ಎರಡು ಪ್ರಯೋಗಾಲಯ ಗಳಿವೆ. ಆದರೆ ಈವರೆಗೆ ನಿಮ್ಹಾನ್ಸ್‌ನಲ್ಲಿ ಮಾತ್ರ ಪರೀಕ್ಷೆ ನಡೆಯುತ್ತಿದ್ದು, ಐಐಎಸ್‌ಸಿ ಪ್ರಯೋಗಾಲಯವನ್ನು ಬಳಸಿಕೊಂಡಿಲ್ಲ. ಒಮ್ಮೆಗೆ ಎರಡು ಪ್ರಯೋಗಾಲಯ ಬಳಸಿದರೆ ಶೀಘ್ರ ರೂಪಾಂತರಿತ ಸೋಂಕು ಪತ್ತೆ ಮಾಡಿ ಹರಡುವಿಕೆ ತಡೆಗಟ್ಟಬಹುದಾಗಿದೆ.
ಪತ್ತೆಯಾಗಲೇ ಇಲ್ಲ 162 ಮಂದಿ
ಇಂಗ್ಲೆಂಡ್‌ನಿಂದ ಬಂದ 2,127 ಪ್ರಯಾಣಿಕರಲ್ಲಿ ಈವರೆಗೆ 1,965 ಮಂದಿ ಮಾತ್ರ ಪತ್ತೆಯಾಗಿದ್ದಾರೆ. ಇನ್ನುಳಿದ 162 ಮಂದಿ ಪತ್ತೆಯಾಗಿಲ್ಲ. 1,717 ಮಂದಿಯ ಪರೀಕ್ಷೆ ಮುಕ್ತಾಯವಾಗಿದ್ದು, 248 ಮಂದಿಯ ವರದಿ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.