ಡಾ| ಶಾಲಿನಿ ವಿ. ಶೆಟ್ಟಿ ಅವರ ಸಾಧನೆ ಯುವಪೀಳಿಗೆಗೆ ಮಾದರಿ: ರಂಜನಿ ಹೆಗ್ಡೆ
ಬಂಟರ ಸಂಘ ಮಹಿಳಾ ವಿಭಾಗದ ವಾರ್ಷಿಕ "ಪ್ರೇಮಾ ನಾರಾಯಣ ರೈ ಪ್ರಶಸ್ತಿ' ಪ್ರದಾನ
Team Udayavani, Dec 31, 2020, 6:28 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ 28ನೇ ಕಾರ್ಯಕಾರಿ ಸಮಿತಿ ಸಭೆಯು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಡಿ. 28ರಂದು ಅಪರಾಹ್ನ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ಕಾಶಿ ಸಿದ್ಧು ಶೆಟ್ಟಿ ಕಿರು ಸಭಾಗೃಹದಲ್ಲಿ ಜರಗಿತು.
ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗದ ಸದಸ್ಯೆ ಜ್ಯೋತಿ ಆರ್. ಎನ್. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಸಂಘದ ಮಹಿಳಾ ವಿಭಾಗವು ವರ್ಷದ ಅತ್ಯುತ್ತಮ ಮಹಿಳಾ ಸಾಧಕಿಯೋರ್ವರಿಗೆ ಪ್ರತೀ ವರ್ಷ ನೀಡುತ್ತಾ ಬರುತ್ತಿರುವ ಪ್ರೇಮಾ ನಾರಾಯಣ ರೈ ಪ್ರಶಸ್ತಿಯನ್ನು ಈ ಬಾರಿ ವೈದ್ಯಕೀಯ ಕ್ಷೇತ್ರದಲ್ಲಿ ಸುಮಾರು 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನವಿಮುಂಬಯಿಯ ಹೆಸರಾಂತ ವೈದ್ಯೆ ಡಾ| ಶಾಲಿನಿ ವಾಸುದೇವ ಶೆಟ್ಟಿ ಎಂ. ಡಿ. ಇವರಿಗೆ ಪ್ರದಾನ ಮಾಡಲಾಯಿತು.
ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಉಪ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಕೋಶಾಧಿಕಾರಿ ಆಶಾ ವಿ. ರೈ, ಜತೆ ಕಾರ್ಯದರ್ಶಿ ಮನೋರಮಾ ಎನ್. ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ರತ್ನಾ ವಿ. ಶೆಟ್ಟಿ, ಪ್ರಶಸ್ತಿಯ ಪ್ರಾಯೋಜಕಿ ಜ್ಯೋತಿ ಆರ್. ಎನ್. ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತರಾದ ಡಾ| ಶಾಲಿನಿ ವಾಸುದೇವ ಶೆಟ್ಟಿ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸಮ್ಮಾನ ಪತ್ರ ಹಾಗೂ ನಗದು ಪುರಸ್ಕಾರ ನೀಡಿ ಸಮ್ಮಾನಿಸಿದರು. ಕೋಶಾಧಿಕಾರಿ ಆಶಾ ವಿ. ರೈ ಸಮ್ಮಾನ ಪತ್ರ ವಾಚಿಸಿದರು. ಪ್ರಶಸ್ತಿ ಪುರಸ್ಕೃತರ ಜತೆಗೆ ಅವರ ಮಾತಾಪಿತರಾದ ಯಕ್ಷಗಾನ ಕಲಾವಿದ, ಸಂಘದ ಸದಸ್ಯ, ಹಿರಿಯರಾದ ಕೆ. ಕೆ. ಶೆಟ್ಟಿ ಮತ್ತು ನೇತ್ರಾವತಿ ಕೆ. ಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರಾದ ಡಾ| ಶಾಲಿನಿ ವಾಸುದೇವ ಶೆಟ್ಟಿ ಅವರು ಪ್ರಶಸ್ತಿಯೊಂದಿಗೆ ಸಂಘವು ನೀಡಿದ ಗೌರವಧನವನ್ನು ಮಹಿಳಾ ವಿಭಾಗಕ್ಕೆ ಹಿಂದಿರುಗಿಸಿ, ತನ್ನ ವತಿಯಿಂದ ಮಹಿಳಾ ವಿಭಾಗಕ್ಕೆ ಚೆಕ್ ಮೂಲಕ ದೇಣಿಗೆ ನೀಡಿ ಆರ್ಥಿಕವಾಗಿ ತೊಂದರೆಯಲ್ಲಿರುವವರಿಗೆ ಇದರಿಂದ ಸಹಾಯಕವಾಗಲಿ ಎಂದು ಮಹಿಳಾ ವಿಭಾಗಕ್ಕೆ ಶುಭ ಹಾರೈಸಿದರು.
ಇದನ್ನೂ ಓದಿ:ಆಯವ್ಯಯ ಶಾಸ್ತ್ರದ ಕಾರ್ಯಸಾಧನೆ ಕಷ್ಟಕರ: ಡಾ| ಹೆಗ್ಗಡೆ
ಪ್ರಸಿದ್ಧ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ಅವರ ಹೆಸರಿನಲ್ಲಿ ಅವರ ಪುತ್ರಿ ಭೂಮಿಕಾ ಎಂ. ಶೆಟ್ಟಿ ಅವರು ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ಪ್ರತೀ ವರ್ಷ ಆಯೋಜಿಸುತ್ತಿರುವ ಬಂಟರವಾಣಿ ಲೇಖನ ಸ್ಪರ್ಧೆಯಲ್ಲಿ ಈ ಬಾರಿ ಬಹುಮಾನ ಪಡೆದ ಸ್ಪರ್ಧಿಗಳ ಹೆಸರನ್ನು ಬಂಟರ ವಾಣಿಯ ಸಂಪಾದಕ ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಘೋಷಿಸಿದರು. ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ ಮಾತನಾಡಿ, ಡಾ| ಶಾಲಿನಿ ವಿ. ಶೆಟ್ಟಿ ಅವರು ತನ್ನ ಆತ್ಮವಿಶ್ವಾಸ, ಅಪರಿಮಿತ ಪರಿಶ್ರಮ ಮತ್ತು ಛಲದಿಂದ ಮುಂದೆ ಬಂದವರು. ಕನ್ನಡ ಮಾಧ್ಯಮದಲ್ಲಿ ಕಲಿತರೂ ಬದುಕಿನಲ್ಲಿ ಸಾಧನೆಯ ಮೂಲಕ ಏನನ್ನೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟವರು. ಅವರ ಸಾಧನೆ
ಇತರರಿಗೂ ಮಾದರಿಯಾಗಿದೆ ಎಂದು ತಿಳಿಸಿ, ಡಾ| ಶಾಲಿನಿ ವಿ. ಶೆಟ್ಟಿ ಅವರ ತಂದೆ ಕೆ. ಕೆ. ಶೆಟ್ಟಿ ಅವರ ಬಗ್ಗೆ ಇರುವ ಅಪಾರ ಗೌರವ, ಕುಟುಂಬದೊಂದಿಗಿನ ಅನ್ಯೋನ್ಯ ಸಂಬಂಧದ ಬಗ್ಗೆ ತಿಳಿಸಿ ಕೆ. ಕೆ. ಶೆಟ್ಟಿ ದಂಪತಿಯನ್ನು ಅಭಿನಂದಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಮೂರು ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಮಹಿಳಾ ಪದಾಧಿಕಾರಿಗಳು, ಸದಸ್ಯೆಯರು ನೀಡಿದ ಸಹಕಾರವನ್ನು ಎಂದಿಗೂ ಮರೆಯುವಂತಿಲ್ಲ. ಮುಖ್ಯವಾಗಿ ನಮ್ಮ ದಾನಿಗಳ ಪ್ರೋತ್ಸಾಹಕ್ಕೆ ಚಿರಋಣಿಯಾಗಿದ್ದೇನೆ ಎಂದು ಶುಭ ಹಾರೈಸಿದರು.
ಸಭೆಯಲ್ಲಿ ಬಂಟರ ಸಂಘದ ಮಹಿಳಾ ವಿಭಾಗಕ್ಕೆ ದೇಣಿಗೆ ನೀಡಿ ಸಹಕರಿಸಿದ ಪ್ರೇಮಾ ಸುಧಾಕರ ಶೆಟ್ಟಿ ಅವರನ್ನು ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ ಅವರು ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಆರಂಭದಲ್ಲಿ ಮಹಿಳಾ ವಿಭಾಗದಿಂದ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇದನ್ನೂ ಓದಿ:ಚಿಣ್ಣರ ಬಿಂಬದ ಬೆಳವಣಿಗೆಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ತರ: ಪ್ರಕಾಶ್ ಭಂಡಾರಿ
ಬಂಟರ ಸಂಘದ ಮಹಿಳಾ ವಿಭಾಗವು ತನ್ನನ್ನು ಗೌರವಿಸಿದ್ದಕ್ಕೆ ಕೃತಜ್ಞಳಾಗಿದ್ದೇನೆ. ನಾನು ಕನ್ನಡ ಮಾಧ್ಯಮದಲ್ಲಿ ಕಲಿತವಳು. ಮುಂದೆ ಇಂಗ್ಲಿಷ್ ಕಲಿತು ವೈದ್ಯಕೀಯ ಕ್ಷೇತ್ರಕ್ಕೆ ಬರಬೇಕು ಎಂಬ ಹಂಬಲ ನನ್ನಲ್ಲಿತ್ತು. ಅದಕ್ಕಾಗಿ ಅಪಾರ ಪರಿಶ್ರಮಪಟ್ಟು ಇಂಗ್ಲಿಷ್ ಮಾಧ್ಯಮದಲ್ಲಿ ಓದು ಮುಂದುವರಿಸಿ ಮುಂದೆ ಎಂಬಿಬಿಎಸ್, ಆ ಬಳಿಕ ಎಂಡಿ ಮುಗಿಸಿದೆ. ನಾನಿಂದು ವೈದ್ಯಳಾಗಿ ಯಶಸ್ಸು ಹೊಂದಲು ನನ್ನ ಮಾತಾಪಿತರು ನೀಡಿದ ಪ್ರೋತ್ಸಾಹ, ಪ್ರೇರಣೆ ಕಾರಣವಾಗಿದೆ. ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಆಶ್ರಮದಲ್ಲಿರುವ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿಯಿಂದ ಸೇವೆಗೈಯುತ್ತಿರುವ ನನಗೆ ನನ್ನ ವೃತ್ತಿಯಲ್ಲಿ ಸಂತೃಪ್ತಿ ದೊರಕಿದೆ. ಸಂಘದ ಮಹಿಳಾ ವಿಭಾಗದ ಮಹಿಳೆಯರ ಆರೋಗ್ಯದ ಬಗ್ಗೆ ವೈದ್ಯಕೀಯ ಶಿಬಿರ ಮಾಡುವುದಿದ್ದಲ್ಲಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ.
–ಡಾ| ಶಾಲಿನಿ ವಾಸುದೇವ ಶೆಟ್ಟಿ, ಪ್ರಶಸ್ತಿ ಪುರಸ್ಕೃತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.