ಹೊಸ ವರ್ಷಕ್ಕೆ ಲಸಿಕೆ ಸಿಹಿ: ನಾಳೆ ದೇಶಾದ್ಯಂತ ಡ್ರೈ ರನ್ ಪ್ರಯೋಗ ಪ್ರಾತ್ಯಕ್ಷಿಕೆ
Team Udayavani, Jan 1, 2021, 6:33 AM IST
ಬೆಂಗಳೂರು/ಹೊಸದಿಲ್ಲಿ: ಹೊಸ ವರ್ಷದ ಮೊದಲ ದಿನವೇ ದೇಶವಾಸಿಗಳಿಗೆ ಕೋವಿಡ್ ಲಸಿಕೆಯ ಸಿಹಿ ಸುದ್ದಿ ನೀಡುವ ಬಗ್ಗೆ ಭಾರತ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ) ಸುಳಿವು ನೀಡಿದೆ.
ಅಭಿವೃದ್ಧಿಪಡಿಸಲಾಗಿರುವ ಲಸಿಕೆಗಳು ಸರಕಾರದ ಒಪ್ಪಿಗೆಗೆ ಕಾಯುತ್ತಿವೆ. ಇದರ ನಡುವೆ ಕೇಂದ್ರ ಸರಕಾರ ಶನಿವಾರದಿಂದ ಎಲ್ಲ ರಾಜ್ಯಗಳಲ್ಲೂ ಲಸಿಕೆಯ ಡ್ರೈ ರನ್ (ವಿತರಣೆ ಪ್ರಾತ್ಯಕ್ಷಿಕೆ) ನಡೆಸುವಂತೆ ಸೂಚಿಸಿರುವುದು ಕೊರೊನಾ ವಿರುದ್ಧದ ಹೋರಾಟದಲ್ಲಿ ಹೊಸ ಆಶಾಭಾವ ಹುಟ್ಟಿಸಿದೆ. ಕರ್ನಾಟಕದಲ್ಲೂ ಡ್ರೈ ರನ್ಗೆ ಸಿದ್ಧತೆ ಮಾಡಲಾಗಿದೆ. ಶನಿವಾರ ನಡೆಯಲಿರುವ ವಿತರಣೆ ಪ್ರಾತ್ಯಕ್ಷಿಕೆ (ಡ್ರೈರನ್)ಗಾಗಿ ಆರೋಗ್ಯ ಇಲಾಖೆ ಸಜ್ಜಾಗಿದೆ.
ಬಿಬಿಎಂಪಿ (ಬೆಂಗಳೂರು ನಗರ ಸಹಿತ), ಮೈಸೂರು, ಶಿವಮೊಗ್ಗ, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಯಲಿದೆ. ಜಿಲ್ಲಾಸ್ಪತ್ರೆ, ತಲಾ ಒಂದು ತಾಲೂಕು ಮತ್ತು ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುವಾರ ಆಯ್ಕೆ ಮಾಡಲಾಗಿದೆ. ಈ ಕೇಂದ್ರಗಳಲ್ಲಿ ತಲಾ ಐದು ಸಿಬಂದಿ, ಲಸಿಕೆ ವಿತರಣೆಗೆ ಬೇಕಾದ ಅಗತ್ಯ ಸಲಕರಣೆಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ನಿಯೋಜಿತ ಆರೋಗ್ಯ ಸಿಬಂದಿಗೆ ಶುಕ್ರವಾರ (ಜ. 1) ಅಪರಾಹ್ನ 2 ಗಂಟೆಗೆ ಆನ್ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ.
ಹೊಸ ವರ್ಷಕ್ಕೆ ಸಿಹಿ ಸುದ್ದಿ
ಭಾರತ ಔಷಧ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ) ಹೊಸ ವರ್ಷದ ಮೊದಲ ದಿನವೇ ಸಿಹಿ ಸುದ್ದಿ ನೀಡುವುದಾಗಿ ಹೇಳಿದೆ. ಪುಣೆಯ ಸೀರಮ್ ಸಂಸ್ಥೆ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳು ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿವೆ. ಬುಧವಾರ ಮೊದಲ ಹಂತದ ಸಭೆ ನಡೆದು, ಶುಕ್ರವಾರ ಎರಡನೇ ಹಂತದ ಪರಿಶೀಲನ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಲಸಿಕೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಿಬಂದಿಗೆ ಅನುಭವ
ಶನಿವಾರ ಬೆಳಗ್ಗೆ ಲಸಿಕೆ ವಿತರಣೆ ಪ್ರಾತ್ಯಕ್ಷಿಕೆ ನಡೆಯಲಿದೆ. ಭವಿಷ್ಯದಲ್ಲಿ ಲಸಿಕೆ ವಿತರಣೆಯನ್ನು ವ್ಯವಸ್ಥಿತವಾಗಿ ನಡೆಸಲು ತರಬೇತಿ- ಪ್ರಾತ್ಯಕ್ಷಿಕೆಗಾಗಿ ಈ ಡ್ರೈ ರನ್ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಎದುರಾಗುವ ಹೊಸ ಸಮಸ್ಯೆ, ಗೊಂದಲಗಳನ್ನು ಪಟ್ಟಿ ಮಾಡಿ ಕೇಂದ್ರ ಸರಕಾರಕ್ಕೆ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆಯ ಲಸಿಕೆ ವಿಭಾಗದ ಉಪ ನಿರ್ದೇಶಕಿ ಡಾ| ಬಿ.ಎನ್. ರಜನಿ ತಿಳಿಸಿದ್ದಾರೆ.
ಹೇಗಿರಲಿದೆ ಡ್ರೈ ರನ್?
ಡ್ರೈ ರನ್ ವೇಳೆ ಈ ವೇಳೆ ಚುಚ್ಚುಮದ್ದು ನೀಡುವುದೊಂದನ್ನು ಬಿಟ್ಟು ಲಸಿಕೆ ನೀಡಿಕೆಗೆ ಸಂಬಂಧಿಸಿದ ಉಳಿದೆಲ್ಲ ಚಟುವಟಿಕೆಗಳು ನಡೆಯಲಿವೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಲಸಿಕೆ ವಿತರಣೆಗೆ ಎಲ್ಲ ಸಿದ್ಧತೆಗಳು ಆಗುತ್ತಿವೆ. ಕಟ್ಟ ಕಡೆಯ ಫಲಾನುಭವಿಗೂ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿರುವ ಲಸಿಕೆ ಸಿಗುವ ಹಾಗೆ ಮಾಡಲಾಗುತ್ತದೆ. ಜಗತ್ತಿನ ಅತೀ ದೊಡ್ಡ ಲಸಿಕೆ ವಿತರಣೆಗೆ ನಾವು ಸಿದ್ಧರಾಗುತ್ತಿದ್ದೇವೆ. – ನರೇಂದ್ರ ಮೋದಿ, ಪ್ರಧಾನಿ
ಡ್ರೈ ರನ್ ಪಕ್ಷಿನೋಟ
05 ಆಯ್ಕೆಯಾದ ಜಿಲ್ಲೆಗಳು
15 ಒಟ್ಟು ಆರೋಗ್ಯ ಕೇಂದ್ರ
100 ನಿಯೋಜಿತ ಆರೋಗ್ಯ ಸಿಬಂದಿ
375 ಪ್ರಾತ್ಯಕ್ಷಿಕೆ ಫಲಾನುಭವಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.