![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 1, 2021, 4:40 PM IST
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಚಾಲನೆ ನೀಡಿರುವ ಸ್ಮಾರ್ಟ್ ಸಿಟಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹೊಸ ವರ್ಷದ ಮೊದಲನೆಯ ದಿನವಾದ ಇಂದು ನಗರದ ಹೊರವಲಯದಲ್ಲಿ ಆಯೋಜಿಸಲಾಗಿದ್ದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತಾನಾಡುತ್ತಿದ್ದ ಅವರು ವಿದ್ಯುತ್ ಸರಬರಾಜು ಕಂಪನಿಗಳು, ನಗರ ಸಭೆ ಹಾಗೂ ಪಾಲಿಕೆಗಳು, ಸಂಚಾರಿ ಪೊಲೀಸರು ಸಮನ್ವಯ ಸಾಧಿಸಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಸಾಕಾರಗೊಳಿಸಲು ತುರ್ತು ಕ್ರಮವಹಿಸಬೇಕು ಎಂದು ಹೇಳಿದರು.
ಮುಂದಿನ ಆಯವ್ಯಯದಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಒತ್ತು ನೀಡಲು ಯೋಜಿಸಿರುವ ಹಿನ್ನಲೆಯಲ್ಲಿ ಇಲಾಖಾವಾರು ರೂಪಿಸಬಹುದಾದ ಜನಪರ ಯೋಜನೆಗಳ ನೀಲನಕ್ಷೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದ ಅವರು 2022ರ ಒಳಗೆ ರಾಜ್ಯದ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯ ನಕ್ಷೆಯಲ್ಲಿ ಹಾಗೂ ಸಮೃದ್ಧಿಯ ಕಕ್ಷೆಯಲ್ಲಿ ಕೊಂಡೊಯ್ಯೊಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಲಿದೆ ಮಾರುತಿ ಸುಜುಕಿ 800 ಸಿಸಿ ಕಾರು
ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರಕ್ಕೆ ಬೆನ್ನೆಲುಬಾಗಿ ಹಾಗೂ ಬೆಂಬಲವಾಗಿ ಟೊಂಕ ಕಟ್ಟಿ ನಿಲ್ಲುವುದಾಗಿ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮುಖ್ಯಮಂತ್ರಿಯವರಿಗೆ ಈ ಸಂದರ್ಭದಲ್ಲಿ ಭರವಸೆ ನೀಡಿದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಿದ್ದರು.
ಇದನ್ನೂ ಓದಿ: 2021ರ ಜನವರಿ 1ರಂದು ಜಗತ್ತಿನಾದ್ಯಂತ 3.7 ಲಕ್ಷ ನವಜಾತ ಶಿಶುಗಳ ಜನನ: ಯೂನಿಸೆಫ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.