“ಸರ್ವಶ್ರೇಷ್ಠ ಸಂಸದ’ ಗೌರವಕ್ಕೆ ಪಾತ್ರರಾದ ಸಂಸದ ಗೋಪಾಲ್‌ ಶೆಟ್ಟಿ ಅವರಿಗೆ ಅಭಿನಂದನೆ

Team Udayavani, Jan 1, 2021, 7:58 PM IST

“ಸರ್ವಶ್ರೇಷ್ಠ ಸಂಸದ’ ಗೌರವಕ್ಕೆ ಪಾತ್ರರಾದ ಸಂಸದ ಗೋಪಾಲ್‌ ಶೆಟ್ಟಿ ಅವರಿಗೆ ಅಭಿನಂದನೆ

ಮುಂಬಯಿ, ಡಿ. 31: ಮಹಾರಾಷ್ಟ್ರ ಉತ್ತರ ಮುಂಬಯಿ ಕ್ಷೇತ್ರದ ಸಂಸದ ಗೋಪಾಲ್‌ ಶೆಟ್ಟಿ ಅವರು “ಸರ್ವಶ್ರೇಷ್ಠ ಸಂಸದ’ರೆಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ದೇಶದ ಒಟ್ಟು 539 ಸಂಸದರ ಸಾಧನೆಗಳ ಪರಾಮರ್ಶೆಯಲ್ಲಿ ಅಗ್ರಸ್ಥಾನ ಗಳಿಸುವ ಮೂಲಕ ಮತ್ತೂಮ್ಮೆ ಗೋಪಾಲ್‌ ಶೆಟ್ಟಿ ಅವರು ಈ ಸಾಧನೆ ಮಾಡಿದ್ದಾರೆ.

ಅವರನ್ನು ಉತ್ತರ ಮುಂಬಯಿ ಬಿಜೆಪಿ ಘಟಕ, ಬಂಟರ ಸಂಘ ಮುಂಬಯಿ ಹಾಗೂ ಹೊಟೇಲಿಗರ ಸಂಘಟನೆ ಆಹಾರ್‌ ವತಿಯಿಂದ ಅವರ ಕಚೇರಿಯಲ್ಲಿ ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಅಭಿನಂದಿಸಲಾಯಿತು. ಉತ್ತರ ಮುಂಬಯಿ ಕ್ಷೇತ್ರದಿಂದ ಬಿಜೆಪಿಯಲ್ಲಿ ದಾಖಲೆ ಮತಗಳಿಂದ ಸತತ ಎರಡನೇ ಬಾರಿ ಸಂಸದರಾಗಿ ಆಯ್ಕೆಯಾದ ಅವರು ಎರಡನೇ ಬಾರಿ ಸಂಸದರ ನಿಧಿಯಿಂದ ಅಧಿಕ ಮೊತ್ತದ ಅನುದಾನವನ್ನು ತಮ್ಮ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿಪರ ಯೋಜನೆಗಳಿಗಾಗಿ ಬಳಸಿಕೊಂಡಿದ್ದಾರೆ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲೂ ಅವರು ತಮ್ಮ ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ.

ಸಂಸತ್ತಿನಲ್ಲಿ ಹಾಜರಾತಿ, ಕ್ಷೇತ್ರದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಶ್ನಾವಳಿ, ವಿವಿಧ ವಿಷಯಗಳ ಚರ್ಚೆಯಲ್ಲಿ ಭಾಗವಹಿಸುವಿಕೆ ಇನ್ನಿತರ ವಿಷಯಗಳಲ್ಲಿ ಖಾಸಗಿ ಮಸೂದೆ ಮಂಡನೆ ಮೂಲಕ ಅವರ ಸಾಧನೆಗಳನ್ನು ಕ್ರೋಡೀಕರಿಸಿದಾಗ ಇತರ ಸಂಸದರಿಗಿಂತ ಹೆಚ್ಚಿನ ಅಂಕಗಳನ್ನು ಪಡೆದು ಅವರು ಸರ್ವಶ್ರೇಷ್ಠ ಸಂಸದರಾಗಿ ಆಯ್ಕೆಯಾಗಿದ್ದಾರೆ. ಸಂಸದೀಯ ವ್ಯವಹಾರ ಪೋರ್ಟಲ್‌ ಸಮೀಕ್ಷೆಯ ಪ್ರಕಾರ ಸಂಸದ ಗೋಪಾಲ್‌ ಶೆಟ್ಟಿ ಅವರ ಸಂಸತ್ತಿನಲ್ಲಿ ವೈಯಕ್ತಿಕ ಸಾಧನೆ ಅಗ್ರಸ್ಥಾನದಲ್ಲಿದೆ.

ಲೋಕಸಭಾ ಕ್ಷೇತ್ರದಲ್ಲಿ ಉಪಸ್ಥಿತರಿದ್ದು ಜನಸಾಮಾನ್ಯರ ಸಂಪರ್ಕಕಕ್ಕೆ ಸುಲಭವಾಗಿ ಲಭ್ಯವಾಗುವುದು, ಕ್ಷೇತ್ರದ ಸಮಸ್ಯೆಗಳ ಬಗೆಗಿನ ಗಂಭೀರತೆ, ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದನೆ, ಸಮಸ್ಯೆಗಳ ಶೀಘ್ರ ಪರಿಹಾರ ಜತೆಗೆ ಜನತೆಯಲ್ಲಿರುವ ತಮ್ಮ ಬಗೆಗಿನ ಉತ್ತಮ ಅಭಿಪ್ರಾಯಗಳನ್ನು ಉಳಿಸಿಕೊಂಡಿರುವ ಎಲ್ಲ ಪ್ರಕಾರಗಳ ಸಮೀಕ್ಷೆಗಳಲ್ಲೂ ಗೋಪಾಲ್‌ ಶೆಟ್ಟಿ ಅವರು ದೇಶಾದ್ಯಂತದ ಇತರ ಸಂಸದರಿಗಿಂತ ಮೊದಲ ಸ್ಥಾನದಲಿದ್ದಾರೆ.

ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲೂ ಸಂಸದ ಗೋಪಾಲ್‌ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಮಾಜ ಸೇವಕ ಎರ್ಮಾಳ್‌ ಹರೀಶ್‌ ಶೆಟ್ಟಿ ಅವರು ದಿನಂಪ್ರತಿ ಸಾವಿರಾರು ಮಂದಿಗೆ ಊಟದ ವ್ಯವಸ್ಥೆಯನ್ನು ಮಾಡಿರುವುದು ಉಲ್ಲೇಖನೀಯ ಅಂಶವಾಗಿದೆ. ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರು ಗೋಪಾಲ್‌ ಶೆಟ್ಟಿ ಅವರ ಕಾರ್ಯವೈಖರಿಯನ್ನು ಮೆಚ್ಚಿ ಅಭಿನಂದಿಸಿದ್ದರು.

ಮರಾಠಿ ಮಣ್ಣಿನಲ್ಲಿ ಕನ್ನಡಿಗ ಸಂಸದರೊಬ್ಬರ ಸಾಧನೆಯನ್ನು ಉತ್ತರ ಮುಂಬಯಿ ಬಿಜೆಪಿ ಘಟಕದ ಮುಂದಾಳು, ಸಂಘಟಕ, ಸಮಾಜ ಸೇವಕ ಎರ್ಮಾಳ್‌ ಹರೀಶ್‌ ಶೆಟ್ಟಿ, ಬಂಟರ ಸಂಘ ನೂತನ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಮುಂಡಪ್ಪ ಎಸ್‌. ಪಯ್ಯಡೆ, ಹೊಟೇಲಿಗರ ಸಂಘಟನೆ ಆಹಾರ್‌ನ ಡಾ| ಸತೀಶ್‌ ಶೆಟ್ಟಿ ಸಹಿತ ತುಳು, ಕನ್ನಡಿಗರು ಶ್ಲಾಘಿಸಿ ಗೋಪಾಲ್‌ ಶೆಟ್ಟಿ ಅವರನ್ನು ಅಭಿನಂದಿಸಿದ್ದಾರೆ.

ಇದು ನನ್ನ ಕ್ಷೇತ್ರದ ಜನತೆ ನನಗೆ ನೀಡುತ್ತಿರುವ ಸಹಕಾರ, ಪ್ರೋತ್ಸಾಹದಿಂದ ಸಾಧ್ಯವಾಗಿದೆ. ನಿಮ್ಮೆಲ್ಲರ ಪ್ರೀತ್ಯಾದರಗಳಿಗೆ ಅಭಾರಿಯಾಗಿದ್ದೇನೆ. ನನ್ನನ್ನು ಜನರೇ ಅವರ ಸೇವೆಗಾಗಿ ಆಯ್ಕೆ ಮಾಡಿದ್ದಾರೆ. ಅವರ ಸೇವೆ ಮಾಡುವುದು ನನ್ನ ಧರ್ಮ. ತುಳು-ಕನ್ನಡಿಗರ ಪ್ರೋತ್ಸಾಹ, ಸಹಕಾರವನ್ನು ನಾನೆಂದೂ ಮರೆಯಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲೂ ನನ್ನ ಜನಸೇವೆ ಮುಂದುವರಿಯಲಿದೆ. ಸಮಸ್ಯೆಗಳನ್ನು ಜನತೆ ಮುಕ್ತವಾಗಿ ನನ್ನೊಂದಿಗೆ ಹಂಚಿಕೊಂಡಾಗ ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ. ನಿಮ್ಮೆಲ್ಲರ ಅಭಿಮಾನ, ಪ್ರೀತಿ ಇದೇ ರೀತಿಯಲ್ಲಿ ಮುಂದುವರಿಯಲಿ.ಗೋಪಾಲ್‌ ಶೆಟ್ಟಿ, ಸಂಸದರು, ಉತ್ತರ ಮುಂಬಯಿ

ಸಂಸದ ಗೋಪಾಲ್‌ ಶೆಟ್ಟಿ ಅವರು ತುಳು, ಕನ್ನಡಿಗರ ಹೆಮ್ಮೆ. ಎರಡನೇ ಬಾರಿ ಅವರು ಸರ್ವಶ್ರೇಷ್ಠ ಸಂಸದರಾಗಿ ಆಯ್ಕೆಯಾಗಿರುವುದು ಸಂತೋಷದ ಸಂಗತಿಯಾಗಿದೆ. ಅವರ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ ಸದಾ ಇರಲಿ. ಉತ್ತರ ಮುಂಬಯಿಯ ಎಲ್ಲರ ಕಷ್ಟ, ಸುಖಗಳಿಗೆ ತತ್‌ಕ್ಷಣ ಸ್ಪಂದಿಸುತ್ತಿರುವ ಸಂಸದರು ಜಾತಿಯನ್ನು ಮೀರಿ ಬೆಳೆದವರು. ಅವರನ್ನು ಎಲ್ಲ ಜಾತಿ, ಧರ್ಮದವರು ಪ್ರೀತಿ, ಗೌರವಗಳಿಂದ ಕಾಣುತ್ತಿದ್ದಾರೆ. ಅವರಿಗೆ ಜನರ ಸೇವೆ ಮಾಡಲು ಇನ್ನಷ್ಟು ಶಕ್ತಿಯನ್ನು ದೇವರು ಕರುಣಿಸಲಿ. ಎರ್ಮಾಳ್‌ ಹರೀಶ್‌ ಶೆಟ್ಟಿ  ಪದಾಧಿಕಾರಿ, ಉತ್ತರ ಮುಂಬಯಿ ಬಿಜೆಪಿ ಘಟಕ

ಟಾಪ್ ನ್ಯೂಸ್

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.