ಇಂದು ಶಿವಮೊಗ್ಗದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ: ಜಿ.ಪಂ., ತಾ.ಪಂ. ಚುನಾವಣೆ ಗುರಿ
Team Udayavani, Jan 2, 2021, 8:25 AM IST
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಶನಿವಾರ ಮತ್ತು ರವಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಮತ್ತು ಕಾರ್ಯಕಾರಿಣಿ ನಡೆಯಲಿದ್ದು, ರಾಜ್ಯ ಬಿಜೆಪಿ ಪ್ರಭಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದಾರೆ. ಸಭೆಯಲ್ಲಿ ತಾಲೂಕು ಮತ್ತು ಜಿ.ಪಂ. ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.
ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ಜ. 3ರಂದು ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ನಡೆಯಲಿದೆ. ಜ. 2ರಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಗಾಗಿ ರಾಜ್ಯ ಬಿಜೆಪಿ ಪ್ರಭಾರಿ ಅರುಣ್ ಸಿಂಗ್ ಶುಕ್ರವಾರ ಸಂಜೆಯೇ ಬೆಂಗಳೂರಿಗೆ ಆಗಮಿಸಿದ್ದಾರೆ.
ರಾಜ್ಯದಲ್ಲಿ ಸದ್ಯ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ವತಃ ರಾಜ್ಯ ಪ್ರಭಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮುಂದಿನ ಎರಡು ವರ್ಷ ತಾವೇ ಸಿಎಂ ಎಂದು ಯಡಿಯೂರಪ್ಪ ಹೇಳುತ್ತಿದ್ದರೂ ಬಸನಗೌಡ ಪಾಟೀಲ್ ಯತ್ನಾಳ್ ನಾಯಕತ್ವ ಬದಲಾವಣೆಯ ಪ್ರಸ್ತಾವ ಎತ್ತುತ್ತಲೇ ಇರುವುದರಿಂದ ಇದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಯತ್ನಾಳ್ ಅನಗತ್ಯ ಹೇಳಿಕೆ ನಿಯಂತ್ರಿಸುವಂತೆ ಅರುಣ್ ಸಿಂಗ್ ಅವರಿಗೆ ಮನವಿ ಮಾಡುವ ಸಾಧ್ಯತೆ ಇದೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ಸಿಎಂ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಜ್ಯ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲಾಧ್ಯಕ್ಷರು, ವಿಭಾಗ ಪ್ರಭಾರಿಗಳು ಸೇರಿ ಒಟ್ಟು 180 ಜನರು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.