ಅತ್ತಾವರ ಬಬ್ಬುಸ್ವಾಮಿ ಕ್ಷೇತ್ರದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹ ಪತ್ತೆ!
Team Udayavani, Jan 2, 2021, 1:28 PM IST
ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಬಬ್ಬುಸ್ವಾಮಿ ಕ್ಷೇತ್ರ ಮತ್ತು ಸಮೀಪದ ಇನ್ನೊಂದು ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹದ ನೋಟುಗಳು ಪತ್ತೆಯಾಗಿದೆ.
ಕಳೆದ ಗುರುವಾರ ದೈವಸ್ಥಾನದ ಕಾಣಿಕೆ ಡಬ್ಬಿ ತೆರೆಯುವ ವೇಳೆ ಈ ಬರಹವುಳ್ಳ ನೋಟು ಮತ್ತು ಚೀಟಿ ಪತ್ತೆಯಾಗಿದೆ. ಇದರಲ್ಲಿ ಪ್ರಚೋದನಕಾರಿ ಬರಹಗಳನ್ನು ನೋಟಿನಲ್ಲಿ ಬರೆಯಲಾಗಿದೆ. ನೋಟಿನ ಗಾಂಧೀಜಿ ಚಿತ್ರವನ್ನೂ ವಿರೂಪ ಮಾಡಲಾಗಿದೆ.
ಇಲ್ಲಿಗೆ ಸಮೀಪದ ಇನ್ನೊಂದು ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಇದೇ ರೀತಿಯ ಅವಹೇಳನಕಾರಿ ಬರಹಗಳನ್ನು ಹಾಕಲಾಗಿದೆ. ದೇವಸ್ಥಾನ ಮಂಡಳಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾರ್ಥನೆ: ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ಊರ ಭಕ್ತಾದಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ನಗರ ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ, ಭರತ್ ಕುಮಾರ್ ಎಸ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರತೀಂದ್ರನಾಥ್ ಎಚ್, ಅಖಿಲ ಭಾರತ ಮುಂಡಾಲ ಯುವ ವೇದಿಕೆ, ವಿಶ್ವಹಿಂದು ಪರಿಷತ್, ಬಜರಂಗದಳ ಅತ್ತಾವರ ಚಕ್ರಪಾಣಿ ಶಾಖೆ ಮತ್ತು ಛತ್ರಪತಿ ಶಾಖೆ ಬಾಬುಗುಡ್ಡ ಶಾಖೆ ಸದಸ್ಯರುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.