ಪಾಕಿಸ್ತಾನ: ಮುಂಬೈ ದಾಳಿ ಮಾಸ್ಟರ್ ಮೈಂಡ್, ಲಷ್ಕರ್ ಕಮಾಂಡರ್ ಲಖ್ವಿ ಬಂಧನ
2008ರಲ್ಲಿ ಲಖ್ವಿಯನ್ನು ಅಮೆರಿಕ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು.
Team Udayavani, Jan 2, 2021, 5:00 PM IST
ಇಸ್ಲಾಮಾಬಾದ್: ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್ ಎ ತೊಯ್ಬಾದ ಕಮಾಂಡರ್ ಝಕಿ ಉರ್ ರೆಹಮಾನ್ ನನ್ನು ಭಯೋತ್ಪಾದನೆ ಕೃತ್ಯಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಶನಿವಾರ(ಜನವರಿ 02) ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.
ಪಂಜಾಬ್ ಪ್ರಾಂತ್ಯದ ಭಯೋತ್ಪಾದನಾ ನಿಗ್ರಹ ದಳ(ಸಿಟಿಡಿ) ಲಖ್ವಿಯನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ. ಭಾರತದ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಲಖ್ವಿ ಕಾರ್ಯಾಚರಿಸುತ್ತಿದ್ದಾನೆಂದು ಶಂಕಿಸಲಾಗಿದ್ದು, ಈತ ಭಾರತದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ.
ಸಿಟಿಡಿ ವಕ್ತಾರರ ಪ್ರಕಾರ, ಝಕಿ ಉರ್ ರೆಹಮಾನ್ ನನ್ನು ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದನ್ನು ಮುಂದುರಿಸಿದ ಆರೋಪದಡಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. 2008ರಲ್ಲಿ ಲಖ್ವಿಯನ್ನು ಅಮೆರಿಕ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು.
2008ರಲ್ಲಿ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಹತ್ತು ಮಂದಿ ಶಸ್ತ್ರಸಜ್ಜಿತ ಉಗ್ರರು ಮುಂಬೈನಲ್ಲಿ ನಡೆಸಿದ್ದ ದಾಳಿಯಲ್ಲಿ 166 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.