ರಾಮಮಂದಿರ ನಿರ್ಮಾಣಕ್ಕೆ ದೇಶದಾದ್ಯಂತ ಜ.15 ರಿಂದ ಫೆ. 27ರವರೆಗೆ ದೇಣಿಗೆ ಸಂಗ್ರಹ ಅಭಿಯಾನ
Team Udayavani, Jan 3, 2021, 4:19 PM IST
ಹುಬ್ಬಳ್ಳಿ: ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಜ.15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ ನಡೆಯಲಿದೆ ಎಂದು ವಿಎಚ್ ಪಿ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ತಿಳಿಸಿದ್ದಾರೆ.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಡಿಯಲ್ಲಿ, ಜ.15 ರಿಂದ ಫೆಬ್ರವರಿ 5ರವರೆಗೆ, ಸುಮಾರು 27,500 ಗ್ರಾಮಗಳು ಸೇರಿದಂತೆ 90 ಲಕ್ಷ ರಾಮ ಭಕ್ತರನ್ನು ಸಂಪರ್ಕಿಸಿ ದೇಣಿಗೆ ಸಂಗ್ರಹಿಸಲು ವಿಶ್ವ ಹಿಂದೂ ಪರಿಷದ್ ನಿರ್ಧರಿಸಿದೆ ಎಂದರು.
ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯಲ್ಲಿ ದೇಣಿಗೆ ಸಂಗ್ರಹಕ್ಕಾಗಿ ಪ್ರಾಂತೀಯ ಕಚೇರಿಗಳನ್ನು ಮತ್ತು ಜಿಲ್ಲಾ ಮಟ್ಟದಲ್ಲಿ ಕಚೇರಿಗಳನ್ನು ಆರಂಭಿಸಲಾಗಿದೆ. ಗ್ರಾಮಗಳಲ್ಲಿ ದೇಣಿಗೆ ಸಂಗ್ರಹಕ್ಕೆ ಐದು ಜನಕ್ಕೆ ಒಂದರಂತೆ ತಂಡ ರಚಿಸಲಾಗಿದೆ ಎಂದರು.
ಎಲ್ಲರೂ ದೇಣಿಗೆ ನೀಡಲು ಅನುಕೂಲವಾಗುವಂತೆ 10, 100, 1000 ರೂ.ಗಳ ಕೂಪನ್ ಮಾಡಲಾಗಿದೆ. 2000 ರೂ.ಗಳಿಗಿಂತ ಹೆಚ್ಚಿನ ಹಣ ನೀಡುವವರಿಗೆ ರಶೀದಿ ನೀಡಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:ಕೋವಿಡ್ ತಡೆ ಆಂದೋಲನಕ್ಕೆ ಸಿದ್ಧತೆ
ಸಂಗ್ರವಾಗುವ ದೇಣಿಗೆಯನ್ನು ನಿಗದಿತ ಮೂರು ಬ್ಯಾಂಕ್ ಗಳಿಗೆ ಜಮಾ ಮಾಡಲಾಗುವುದು ಎಂದ ಅವರು ಆನ್ ಲೈನ್ ಮೂಲಕವೂ ದೇಣಿಗೆ ನೀಡಬಹುದಾಗಿದೆ ಎಂದು ಹೇಳಿದರು.
2.7 ಎಕರೆ ಜಾಗದಲ್ಲಿ 54 ಸಾವಿರ ಚದರ ಅಡಿಯಲ್ಲಿ ಮಂದಿರ ನಿರ್ಮಾಣ ಆಗುತ್ತಿದೆ. 67 ಎಕರೆ ಜಾಗದಲ್ಲಿ ಸಭಾಭವನ, ಗ್ರಂಥಾಲಯ, ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ ,ಗುರುಕುಲ ಸೇರಿದಂತೆ ವಿವಿಧ ಸೌಲಭ್ಯಗಳು ಇರಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.