ಪ್ರಧಾನಿ ಹುದ್ದೆಯನ್ನೇ ತಿರಸ್ಕರಿಸಿ ಬಂದವರು ನಾವು, ಮಂತ್ರಿ ಸ್ಥಾನದ ಆಸೆಯಿಲ್ಲ: ಕುಮಾರಸ್ವಾಮಿ
Team Udayavani, Jan 3, 2021, 4:17 PM IST
ಬೆಂಗಳೂರು: ಜೆಡಿಎಸ್ ಪಕ್ಷದೊಂದಿಗೆ ವಿಲೀನ ಅಥವಾ ಮೈತ್ರಿ ಸಾಧ್ಯತೆಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಖಡಾಖಂಡಿತವಾಗಿ ತಿರಸ್ಕರಿಸಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ದಾಳಿ ನಡೆಸಿದ್ದು, ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದ ನಮಗೆ ಯಕಶ್ಚಿತ್ ಮಂತ್ರಿ ಸ್ಥಾನಕ್ಕೆ ಆಸೆಯಿಲ್ಲ ಎಂದಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದಿದ್ದಾರೆ.
ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ ಎಂದು ಗುಡುಗಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಹೇಳುವವರು ಕೇಳುವವರು ಯಾರೂ ಇಲ್ಲ, ಭ್ರಷ್ಟಾಚಾರ ವಿಪರೀತವಾಗಿದೆ: ರಾಮಲಿಂಗ ರೆಡ್ಡಿ
ಜೆಡಿಎಸ್ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.
ಜೆಡಿಎಸ್ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ. 1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.
ಇದನ್ನೂ ಓದಿ: ಜೀರೋ ಟ್ರಾಫಿಕ್ ನಲ್ಲಿ ಕೇಂದ್ರ ಸಚಿವ ಸದಾನಂದ ಗೌಡರು ಬೆಂಗಳೂರಿಗೆ ಶಿಫ್ಟ್
ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಎಚ್ ಡಿಕೆ ವಿಲೀನ ವಿಚಾರವನ್ನು ತಳ್ಳಿಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.