ಧಾರ್ಮಿಕ ಭಾವನೆ ಕೆರಳಿಸುವ ಕೃತ್ಯ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಾಸಕ ಕಾಮತ್
Team Udayavani, Jan 3, 2021, 4:48 PM IST
ಮಂಗಳೂರು: ಅತ್ತಾವರ ಬಾಬುಗುಡ್ಡೆಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಭಗವಾನ್ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿಯೊಳಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನೋಟಿನ ಮೇಲೆ ದೇವತೆಗಳ ಕುರಿತು ಅವಹೇಳನಕಾರಿ ಬರೆದು ಹಾಕಿರುವಂತಹ ಕೃತ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಖಂಡಿಸಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಚ್ಯುತಿ ತರುವಂತಹ ಕೃತ್ಯಗಳನ್ನು ಸಹಿಸುವುದು ಸಾಧ್ಯವಿಲ್ಲ. ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆಯಾದರೆ ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಉದ್ಧೇಶ ಪೂರ್ವಕವಾಗಿ ಇಂತಹ ಕೆಲಸ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ನಕಲಿ ನೋಟಿನ ಮೇಲೆ ದೇವತೆಗಳ ಕುರಿತು ಅವಹೇಳನಕಾರಿ ಬರಹದಿಂದ ಸಮಾಜಕ್ಕೆ ಅತ್ಯಂತ ನೋವು ಉಂಟಾಗಿದೆ. ಈ ಕುರಿತು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಲು ಕಾನೂನಾತ್ಮಕ ಕ್ರಮ ಜರಗಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಹುದ್ದೆಯನ್ನೇ ತಿರಸ್ಕರಿಸಿ ಬಂದವರು ನಾವು, ಮಂತ್ರಿ ಸ್ಥಾನದ ಆಸೆಯಿಲ್ಲ: ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.