ಹೃದ್ರೋಗ : 20 ವರ್ಷಗಳಲ್ಲಿ ಸಾವಿನ ಪ್ರಮಾಣ ಹೆಚ್ಚಳ


Team Udayavani, Jan 4, 2021, 6:00 AM IST

ಹೃದ್ರೋಗ : 20 ವರ್ಷಗಳಲ್ಲಿ ಸಾವಿನ ಪ್ರಮಾಣ ಹೆಚ್ಚಳ

2000ದಿಂದ 2019ರ ವರೆಗಿನ 20 ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ಅತೀ ಹೆಚ್ಚು ಸಾವುಗಳು ಹೃದ್ರೋಗದಿಂದ ಸಂಭವಿಸಿವೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಪ್ರಕಾರ ಕಳೆದ 20 ವರ್ಷಗಳಲ್ಲಿ ಹೃದ್ರೋಗದಿಂದ 20 ಲಕ್ಷಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಭಾರತೀಯ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನ (ಪಿಎಚ್‌ಎಫ್ಐ)ದ ವರದಿಯು ದೇಶದಲ್ಲಿ ಹೆಚ್ಚುತ್ತಿರುವ ಹೃದ್ರೋಗ ಪ್ರಕರಣಗಳಿಗೆ ಅಧಿಕ ರಕ್ತದೊತ್ತಡ ಮತ್ತು ಕಳಪೆ ಗುಣಮಟ್ಟದ ಆಹಾರ ಸೇವನೆಗಳೇ ಮುಖ್ಯ ಕಾರಣ ಎಂದು ಹೇಳಿದೆ.
ಧೂಮಪಾನ ಮಾಡುವವರಲ್ಲಿ ಶೇ. 83ರಷ್ಟು ಜನರು ಹೃದ್ರೋಗದ ಅಪಾಯವನ್ನು ಹೊಂದಿರುತ್ತಾರೆ. ಆದರೆ ಇತ್ತೀಚಿನ ಸಂಶೋಧನೆಗಳು ಭಾರತೀಯರಲ್ಲಿ ಧೂಮಪಾನದ ಅಭ್ಯಾಸ ಕಡಿಮೆಯಾಗುತ್ತಿದೆ ಎಂಬುದನ್ನು ದೃಢಪಡಿಸಿವೆ.

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು
ಲ್ಯಾನ್ಸೆಟ್‌ ವರದಿಯ ಪ್ರಕಾರ ಈಗ ಗ್ರಾಮೀಣ ಪ್ರದೇಶಗಳಲ್ಲಿ ಹೃದ್ರೋಗಗಳ ಪ್ರಕರಣಗಳು ಹೆಚ್ಚುತ್ತಿವೆ. ಪುರುಷರಲ್ಲಿ ಶೇ. 40 ಮತ್ತು ಮಹಿಳೆಯರಲ್ಲಿ ಶೇ. 56ರಷ್ಟು ಹೃದ್ರೋಗ ಪ್ರಕರಣಗಳು ಹೆಚ್ಚಾಗಿವೆ. ತಮಿಳುನಾಡು, ಕರ್ನಾಟಕ, ಪಂಜಾಬ್‌ ಮತ್ತು ಹರಿಯಾಣಗಳಲ್ಲಿ ಹೃದ್ರೋಗಗಳಿಂದ ಹೆಚ್ಚಿನ ಸಾವು ಸಂಭವಿಸಿದೆ. ಇದೇ ವೇಳೆ ಈಶಾನ್ಯ ಭಾರತ, ಪಶ್ಚಿಮ ಬಂಗಾಲ, ಛತ್ತೀಸ್‌ಗಢದಲ್ಲಿ ಪಾರ್ಶ್ವವಾಯುವಿನಿಂದ ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ.

ಸಾವಿನ ಸಂಖ್ಯೆಯೂ ಕಡಿಮೆಯಾಗುತ್ತಿಲ್ಲ
2016ರ ಡಬ್ಲ್ಯುಎಚ್‌ಒ ವರದಿ ಹೇಳುವಂತೆ, ನಗರ ಪ್ರದೇಶಗಳಲ್ಲಿ ಶೇ. 58ರಷ್ಟು ವೈದ್ಯರು ವೈದ್ಯಕೀಯ ಪದವಿಗಳನ್ನು ಹೊಂದಿದ್ದರೆ, ಗ್ರಾಮೀಣ ಪ್ರದೇಶಗಳಲ್ಲಿ ಈ ಸಂಖ್ಯೆ ಕೇವಲ ಶೇ. 19ರಷ್ಟಿದೆ. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್‌ ಅಂಕಿ ಅಂಶಗಳ ಪ್ರಕಾರ ಗ್ರಾಮದ ಶೇ. 8ರಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರೇ ಇಲ್ಲ. ಶೇ. 61ರಷ್ಟು ಕೇಂದ್ರಗಳಲ್ಲಿ ಒಬ್ಬ ವೈದ್ಯರು ಮಾತ್ರ ಇ¨ªಾರೆ. ಹೃದ್ರೋಗ ಪ್ರಕರಣಗಳು ಮತ್ತು ಸಾವು ಹೆಚ್ಚಾಗಲು ಹಲವಾರು ಕಾರಣಗಳಿದ್ದು ಇವುಗಳಲ್ಲಿ ಬಡತನ, ಧೂಮಪಾನ ಹಾಗೂ ಆರೋಗ್ಯ ಸೌಲಭ್ಯಗಳು ಮತ್ತು ಸಲಹೆಯ ಕೊರತೆ ಸೇರಿವೆ.

ಕೋವಿಡ್‌ ಅವಧಿಯಲ್ಲಿ ಹೆಚ್ಚಳ
ಕೋವಿಡ್‌ ಅವಧಿಯಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನ ಪ್ರಕರಣಗಳು ಶೇ. 20ರಷ್ಟು ಹೆಚ್ಚಾಗಿವೆ. ಹೃದ್ರೋಗಕ್ಕೆ ಸಂಬಂಧಿಸಿದ ರೋಗಲಕ್ಷಣಗಳು ಕಂಡು ಬಂದ ಬಳಿಕ ಅನೇಕ ಜನರು ಕೋವಿಡ್‌ ಭಯದಿಂದ ಆಸ್ಪತ್ರೆಗೆ ಬರುವುದನ್ನು ನಿಲ್ಲಿಸಿದ್ದಾರೆ. ಇದು ಅವರ ಆರೋಗ್ಯದ ಸ್ಥಿತಿ ಮತ್ತಷ್ಟು ಹದಗೆಡುವಂತೆ ಮಾಡಿದೆ ಎಂದು ತಜ್ಞರು ಹೇಳುತ್ತಾರೆ.

ಆಹಾರ ಶಿಸ್ತು

- ಚಳಿಗಾಲದಲ್ಲಿ ಗೋಧಿ ಬ್ರೆಡ್‌ ಬದಲಿಗೆ ರಾಗಿ ಅಥವಾ ಅವುಗಳ ಹಿಟ್ಟಿನಿಂದ ಮಾಡಿದ ಬ್ರೆಡ್‌ ಸೇವಿಸಬೇಕು. ಮಾವು, ಬಾಳೆ ಹಣ್ಣು, ಚಿಕ್ಕು, ಪಪ್ಪಾಯಿ, ಕಿವಿ, ಕಿತ್ತಳೆ ಮುಂತಾದ ಕಡಿಮೆ ಸಿಹಿಯುಳ್ಳ ಹಣ್ಣುಗಳು, ಕಡಿಮೆ ಹುರಿದ ಮತ್ತು ಸಿಹಿ ವಸ್ತುಗಳು, ಉತ್ತಮ. ನಿಮ್ಮ ಹಸಿವುಗಿಂತ ಶೇ. 20ರಷ್ಟು ಕಡಿಮೆ ತಿನ್ನಿ.

-  ಸ್ಥೂಲಕಾಯವು ಹೃದ್ರೋಗಗಳಿಗೆ ಪ್ರಮುಖ ಕಾರಣ. ಪ್ರತೀದಿನ 45 ನಿಮಿಷ ವ್ಯಾಯಾಮ ಮಾಡಿ. ಫಿಟೆ°ಸ್‌ ಅನ್ನು ಮಟ್ಟಕ್ಕೆ ತರಲು ಪ್ರಯತ್ನಿಸಿ. ಒಂದರಿಂದ ಒಂದೂವರೆ ಕಿ.ಮೀ. ದೂರ ಹೋಗಬೇಕಾದರೆ ಆದಷ್ಟು ಕಾಲ್ನಡಿಗೆಯಲ್ಲಿಯೇ ಹೋಗಿ.

-  ಪ್ರತೀದಿನ ಕನಿಷ್ಠ 7 ಗಂಟೆಗಳ ನಿದ್ರೆ ಅಗತ್ಯ. ಬೇಗನೆ ಮಲಗುವುದು ಮತ್ತು ಬೇಗನೆ ಎದ್ದೇಳುವುದನ್ನು ರೂಢಿಸಿಕೊಳ್ಳಬೇಕು. ರಾತ್ರಿ ಗಂಟೆ 10ರಿಂದ ಬೆಳಗ್ಗೆ 6ರ ವರೆಗೆ ನಿದ್ರೆ ಮಾಡಲು ಸೂಕ್ತ ಸಮಯ.

-  ಧೂಮಪಾನ ಮತ್ತು ಮದ್ಯಪಾನವನ್ನು ತ್ಯಜಿಸುವುದು ಉತ್ತಮ. ಧೂಮಪಾನದಿಂದ ಅದರ ಹೊಗೆ ಅಪಧಮನಿಗಳ ಒಳಪದರವನ್ನು ದುರ್ಬಲಗೊಳಿಸುತ್ತದೆ.

-ಒತ್ತಡವು ಹೃದಯ ಕಾಯಿಲೆಯ ಪ್ರಕರಣಗಳನ್ನು ಹೆಚ್ಚಿಸುತ್ತದೆ ಎಂದು ಸಂಶೋಧನೆಯು ಸಾಬೀತುಪಡಿಸಿದೆ. ಇದು ಮೆದುಳಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಸಾಧ್ಯವಾದಷ್ಟು ಮನಸ್ಸಿನ ಮೇಲೆ ಒತ್ತಡ ಬೀಳದಂತೆ ಜಾಗ್ರತೆ ವಹಿಸಿ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.