ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ತಯಾರಿಸುತ್ತಿದ್ದ ತಂಡ ಸಿಸಿಬಿ ಬಲೆಗೆ: 10 ಮಂದಿ ಬಂಧನ
Team Udayavani, Jan 4, 2021, 3:29 PM IST
ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೊನೊಗ್ರಾಮ್ ಬಳಸಿ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಹನದ ಆರ್.ಸಿ. ಕಾರ್ಡ್ ಗಳನ್ನು ತಯಾರಿಸುತ್ತಿದ್ದ ಖದೀಮರ ಗುಂಪೊಂದು ಇಂದು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದೆ.
ನಗರ ಸಿಸಿಬಿ ಪೊಲೀಸರು ಇಂದು ಕಾರ್ಯಾಚರಣೆ ನಡೆಸಿ ಹತ್ತು ಮಂದಿ ವಂಚಕರನ್ನು ಸೆರೆ ಹಿಡಿದಿದ್ದಾರೆ.
ಕಮಲೇಶ್ ಕುಮಾರ್, ಎಸ್.ಲೋಕೇಶ್, ಸುದರ್ಶನ್, ನಿರ್ಮಲ್ ಕುಮಾರ್, ದರ್ಶನ್, ಶ್ರೀಧರ, ಚಂದ್ರಪ್ಪ, ಅಭಿಲಾಶ್, ತೇಜಸ್ ಸೇರಿದಂತೆ ಹತ್ತು ಮಂದಿ ವಂಚಕರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಅರ್ಧ ಪ್ಯಾಂಟ್ ಧರಿಸಿ ಮಾತನಾಡುವುದು ರಾಷ್ಟ್ರೀಯತೆಯಲ್ಲ:RSS ವಿರುದ್ಧ ಪೈಲಟ್ ಪರೋಕ್ಷ ವಾಗ್ಧಳಿ
ಕನಕಪುರ ರಸ್ತೆ ಗುಲ್ಲಾಳ ಗ್ರಾಮದ ಫ್ಲಾಟೊಂದರಲ್ಲಿ ಕಮಲೇಶ್ ಎಂಬಾತ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಹನದ ಆರ್.ಸಿ. ಕಾರ್ಡ್ ಗಳನ್ನು ತಯಾರಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಈತನೊಂದಿಗೆ ಶಾಮೀಲಾಗಿರುವ ಇತರರನ್ನು ಬಂಧಿಸಲಾಗಿದೆ.
ಸ್ಥಳದಲ್ಲಿ ಸಾವಿರಾರು ನಕಲಿ ಕಾರ್ಡುಗಳು, ಲ್ಯಾಪ್ ಟಾಪ್ ಮತ್ತು ಪ್ರಿಂಟರ್ ನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.