ಅಲಿಬಾಬಾ ಸಂಸ್ಥಾಪಕ ಕಣ್ಮರೆ ? ಸರ್ಕಾರದ ವಿರುದ್ಧ ಸಂಘರ್ಷವೇ ಜಾಕ್ ಮಾ ಗೆ ಮುಳುವಾಯ್ತಾ ?


Team Udayavani, Jan 4, 2021, 3:50 PM IST

jack-ma

ಬೀಜಿಂಗ್: ಜನಪ್ರಿಯ ಆಲಿಬಾಬಾ ಗ್ರೂಪ್ ನ ಸಂಸ್ಥಾಪಕರಾದ ಜಾಕ್ ಮಾ ಕಳೆದೆರೆಡು ತಿಂಗಳಿನಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.  ಶಾಂಘೈ ಮತ್ತು ಹಾಂಗ್ ಕಾಂಗ್ ನಲ್ಲಿ Ant ಗ್ರೂಪ್ ನ ಐಪಿಒ(initial public offering)  ಹಠಾತ್ ಅಮಾನತುಗೊಳಿಸಿದ ನಂತರ ಚೀನಾ ಸರ್ಕಾರ ಜಾಕ್ ಮಾ ಮೇಲೂ ಕಣ್ಣಿಟ್ಟಿತ್ತು.

ಇದೀಗ ಜಾಕ್ ಮಾ ಕಳೆದೆರೆಡು ತಿಂಗಳಿನಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ್ದರಿಂದ ಚೀನಾ ಮಾಧ್ಯಮಗಳು ಅವರು ಕಣ್ಮರೆಯಾಗಿದ್ದಾರೆ ಎಂದೇ ವರದಿ ಮಾಡಿದೆ. ಏತನ್ಮಧ್ಯೆ ಜಾಕ್ ಮಾ, ಸ್ವತಃ ತೀರ್ಪುಗಾರರಾಗಿರುವ  ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್ ‘ ಟ್ಯಾಲೆಂಟ್ ಶೋ ಒಂದರ ಅಂತಿಮ ಎಪಿಸೋಡ್ ನಲ್ಲೂ ಕಾಣಿಸಿಕೊಳ್ಳದೆ ಇರುವುದು ಈ ಅನುಮಾನಗಳಿಗೆ ಇನ್ನಷ್ಟು ಪುಷ್ಠಿ ದೊರೆತಿದೆ. ಈ ಶೋ ನಲ್ಲಿ ಜಾಕ್ ಮಾ ಬದಲಿಗೆ ಆಲಿಬಾಬಾ ಸಂಸ್ಥೆಯ ಕಾರ್ಯನಿರ್ವಹಣಾ ಅಧಿಕಾರಿಯೊಬ್ಬರು ಭಾಗಿಯಾಗಿದ್ದರು.

ಅಲಿಬಾಬಾ ಮತ್ತು ಟೆನ್ಸೆಂಟ್ ಹೋಲ್ಡಿಂಗ್ಸ್‌ನಂತಹ ಕಂಪೆನಿಗಳು ನೂರಾರು ಮಿಲಿಯನ್ ಬಳಕೆದಾರರನ್ನು ಗಳಿಸಿದ ನಂತರ ನಿಯಂತ್ರಕರಿಂದ ಹೆಚ್ಚಿನ ಒತ್ತಡವನ್ನು ಎದುರಿಸುತ್ತಿದ್ದು, ಇದು ಚೀನಾದ ದೈನಂದಿನ ಜೀವನದ ಪ್ರತಿಯೊಂದು ಅಂಶಗಳ ಮೇಲೆ ಪ್ರಭಾವ ಬೀರಿದೆ ಎಂದೇ ವರದಿಯಾಗಿದೆ. ಕಳೆದ ತಿಂಗಳು, ಚೀನಾದ ಆ್ಯಂಟಿ ಟ್ರಸ್ಟ್ ಅಧಿಕಾರಿಗಳು ಜಾಕ್ ಮಾ ಅವರ ಇ-ಕಾಮರ್ಸ್ ಸಂಘಟಿತ ಅಲಿಬಾಬಾ ಗ್ರೂಪ್ ಹೋಲ್ಡಿಂಗ್ ಬಗ್ಗೆ ತನಿಖೆ ಆರಂಭಿಸಿದ್ದರು.

ಇದನ್ನೂ ಓದಿ: ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಕೇಸ್: ಮಂಜೇಶ್ವರ ಶಾಸಕ ಎಂ.ಸಿ.ಖಮರುದ್ದೀನ್ ಗೆ ಜಾಮೀನು

ಆಕ್ಟೋಬರ್ 24ರಂದು ಚೀನಾ ಸರ್ಕಾರದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಜಾಕ್ ಮಾ, ಚೀನಾದ ಕಮ್ಯುನಿಷ್ಟ್ ಸರ್ಕಾರದ ಹಣಕಾಸು ನಿರ್ವಹಣೆ ಮತ್ತು ಬ್ಯಾಂಕ್ ಗಳನ್ನು ಕಟುವಾಗಿ ಟೀಕಿಸಿದ್ದರು. ಮಾತ್ರವಲ್ಲದೆ ಶಾಂಘೈನಲ್ಲಿ ಜಾಕ್ ಮಾ ಮಾಡಿದ್ದ ಭಾಷಣವೊಂದು ಚೀನಾ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.  ಜಾಕ್ ಮಾ ಅವರ Ant ಸಂಸ್ಥೆಯ  ಐಪಿಓ( ಸುಮಾರು 37 ಮಿಲಿಯನ್ ಡಾಲರ್ ಮೌಲ್ಯ)ವನ್ನು ಅಮಾನತು ಮಾಡಿ ಶಾಂಘೈ ಷೇರು ವಿನಿಮಯ ಕೇಂದ್ರವು ಹೊಡೆತ ನೀಡಿತ್ತು.

ಇದೀಗ ಜಾಕ್ ಮಾ ಕಣ್ಮರೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಅಲಿಬಾಬಾ ವಕ್ತಾರ, ಜಾಕ್ ಮಾ ಕಾರ್ಯಕ್ರಮ ವೇಳಾಪಟ್ಟಿಯಲ್ಲಿ ಸಮಸ್ಯೆಯಾದ ಕಾರಣ ಆಫ್ರಿಕಾ ಬ್ಯುಸಿನೆಸ್ ಹೀರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಯಾವದೇ ಪಕ್ಷದೊಂದಿಗೆ ವಿಲೀನವಿಲ್ಲ, 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ: ಎಚ್ ಡಿಕೆ

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.