ಸ್ಮಾರ್ಟ್ ಸಿಟಿಯಷ್ಟೇ ಅಲ್ಲ; ಮಿಷನ್ 2022ಕ್ಕೆ ಮಂಗಳೂರು ಆಯ್ಕೆ ?
Team Udayavani, Jan 5, 2021, 6:25 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಂಗಳೂರಿಗೆ ಡಬಲ್ ಧಮಾಕ. ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆ ಜಾರಿ ಇರುವಾಗಲೇ ರಾಜ್ಯ ಸರಕಾರದ ಮಿಷನ್ 2022 ಯೋಜನೆಗೆ ಮಂಗಳೂರು ಆಯ್ಕೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ರೂಪಿಸಿರುವ “ಮಿಷನ್-2022′ ಮಾದರಿಯಲ್ಲೇ ಮಂಗಳೂರು ಸಹಿತ ಪ್ರಮುಖ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಈ ಯೋಜನೆ ಜಾರಿಗೆ ರಾಜ್ಯ ಸರಕಾರ ನಿರ್ಧರಿಸಿದೆ. ಮುಂದಿನ ಬಜೆಟ್‌ನಲ್ಲಿ ಯೋಜನೆ ಪ್ರಕಟಗೊಳ್ಳುವ ಸಂಭವವಿದೆ.
ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮೈಸೂರು, ಶಿವಮೊಗ್ಗ, ಬಳ್ಳಾರಿ, ತುಮಕೂರು ಕಲಬುರಗಿ ಮಹಾ ನಗರಪಾಲಿಕೆಗಳನ್ನೂ ಪರಿಗಣಿಸಲಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯೊಳಗೆ ಯೋಜನೆಯ ಅನುಷ್ಠಾನ ಸರಕಾರದ ಉದ್ದೇಶ.
ಪ್ರಮುಖವಾಗಿ ಸುಗಮ ಸಂಚಾರ, ತ್ಯಾಜ್ಯ ವಿಲೇವಾರಿ ಮತ್ತು ಸ್ವತ್ಛತೆ, ಹಸುರೀಕರಣಕ್ಕೆ ಒತ್ತು ನೀಡುವುದು. ದಿನದ 24 ತಾಸು ನೀರು ಪೂರೈಕೆ ವ್ಯವಸ್ಥೆ ಕೈಗೊಳ್ಳುವುದು. ಎಲ್‌ಇಡಿ ದೀಪಗಳ ಅಳವಡಿಕೆ, ಸ್ಥಳೀಯ ಪರಂಪರೆ, ಸಾಂಸ್ಕೃತಿಕ ಇತಿಹಾಸ ದಾಖಲಿಸಿ ಸಾಕ್ಷ್ಯಚಿತ್ರ ಸಿದ್ಧಪಡಿಸಿ ಐತಿಹಾಸಿಕ ಮತ್ತು ಪ್ರವಾಸಿ ತಾಣಗಳ ಅಭಿವೃದ್ಧಿಗೆ ನೀಲನಕ್ಷೆ ರೂಪಿಸುವುದರ ಸಹಿತ ಹಲವಾರು ಕಾರ್ಯಕ್ರಮಗಳು ಈ ಮಿಷನ್ 2022ನಡಿ ಸೇರಿವೆ ಎನ್ನುತ್ತವೆ ಮೂಲಗಳು.
ಬೆಂಗಳೂರು ಮಿಷನ್-2022 ಘೋಷಣೆಯ ಅನಂತರ ಇತರ ನಗರಪಾಲಿಕೆಗಳಲ್ಲೂ ಇದೇ ರೀತಿಯ ಯೋಜನೆ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಬೇಡಿಕೆ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಜೆಟ್ ವೇಳೆಗೆ ಪ್ರಸ್ತಾವನೆ ಸಿದ್ಧಪಡಿಸಿ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮಂಡಿಸಲು ನಗರಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ.
ಸ್ಮಾರ್ಟ್ ಸಿಟಿ, ಮುಖ್ಯಮಂತ್ರಿಯವರ ನಗರೋತ್ಥಾನ ಸೇರಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳಡಿ ಲಭ್ಯವಾಗುವ ಎಲ್ಲ ಅನುದಾನ ಸೇರಿಸಿ, ರಾಜ್ಯ ಸರಕಾರದಿಂದ ಹೆಚ್ಚುವರಿಯಾಗಿ ಹಣಕಾಸು ಒದಗಿಸಿ ಸುಮಾರು 50 ಸಾವಿರ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಲಾಗುವುದು.
ಇತರ ನಗರಗಳ ಅಭಿವೃದ್ಧಿಯಿಂದ ಕೈಗಾರಿಕೆಗಳನ್ನು ಆಕರ್ಷಿಸ ಬಹುದು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗ ಬಹುದು ಎಂದು ಸಿಎಂ ಇತ್ತೀಚಿನ ಸಭೆಯಲ್ಲಿ ಪ್ರಸ್ತಾವಿಸಿದ್ದರು. ಈ ನಡುವೆ, ಸ್ಮಾರ್ಟ್ ಸಿಟಿ ಸಹಿತ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 10 ವರ್ಷಗಳಲ್ಲಿ ಜಾರಿಗೊಂಡ ಯೋಜನೆಗಳ ವಿವರ ಕೇಳಲಾಗಿದೆ.
10 ಸಾವಿರ ಕೋ.ರೂ. ಮೀಸಲು
“ಬೆಂಗಳೂರು ಮಿಷನ್-2022′ ಅನುಷ್ಠಾನಕ್ಕೆ ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಮೀಸಲಿಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಖುದ್ದು ಆಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ.
ಎಲ್ಲ ನಗರ ಪಾಲಿಕೆಗಳ ಸಮಗ್ರ ಅಭಿವೃದ್ಧಿ ಬಗ್ಗೆ ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸುವ ಭರವಸೆಯಿದೆ. ಮುಂದಿನ ಎರಡು ವರ್ಷಗಳಲ್ಲಿ ನಗರ ಪಾಲಿಕೆಗಳ ಚಿತ್ರಣ ಬದಲಾಗಲಿದೆ.
-ಬೈರತಿ ಬಸವರಾಜ್, ನಗರಾಭಿವೃದ್ಧಿ ಸಚಿವರು
ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.