ಜನರ ಕಷ್ಟಗಳಿಗೆ ಸ್ಪಂದಿಸಿದರೆ ಸೋಲೇ ಇಲ್ಲ
Team Udayavani, Jan 5, 2021, 3:57 PM IST
ಯಳಂದೂರು: ಗ್ರಾಮ ಪಂಚಾಯ್ತಿ ನೂತನ ಸದಸ್ಯರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸಮಾಜಮುಖೀ ಕೆಲಸಗಳನ್ನು ಮಾಡಬೇಕು ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ ಸಲಹೆ ನೀಡಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಯಳಂದೂರು, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದಕಾಂಗ್ರೆಸ್ ಬೆಂಬಲಿತ ವಿಜೇತ ಅಭ್ಯರ್ಥಿಗಳಿಗೆ ಹಮ್ಮಿ ಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದಅವರು, ಸಾರ್ವಜನಿಕರ ಸೇವೆಯಿಂದ ದೀರ್ಘವಾಗಿ ರಾಜಕಾರಣದಲ್ಲಿ ಉಳಿದುಕೊಳ್ಳಬಹುದು. ಜನರಕಷ್ಟಗಳಿಗೆ ಸ್ಪಂದಿಸುವ ಜನಪ್ರತಿನಿಧಿಗೆ ಸೋಲೇ ಇರುವುದಿಲ್ಲ. ಸೋತರು ತಾತ್ಕಾಲಿಕ ಸೋಲಾಗಿರುತ್ತದೆ. ರಾಜಕಾರಣದಲ್ಲಿ ಇದು ಸ್ವಾಭಾವಿಕ ಪ್ರಕ್ರಿಯೆಯಾಗಿದ್ದು, ಸೋತವರು ಧೃತಿಗೆಡಬಾರದು ಎಂದರು.
76 ಗ್ರಾಪಂನಲ್ಲಿ ಅಧಿಕಾರ: ಜಿಲ್ಲೆಯ 129 ಪಂಚಾಯಿತಿಗಳಲ್ಲಿ 76 ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಾಗಿದ್ದು, ಇಲ್ಲಿ ನಮ್ಮ ಪಕ್ಷವೇ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯುವ ಸಮೂಹ: ಮಾಜಿ ಶಾಸಕ ಎಸ್.ಜಯಣ್ಣ ಮಾತನಾಡಿ, ನಮ್ಮ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿದ್ದಾರೆ. ಇವರನ್ನು ಸೆಳೆಯಲು ಅನೇಕ ತಂತ್ರಗಳು ನಡೆಯುತ್ತವೆ. ಹೊಸದಾಗಿ ಗೆದ್ದಿರುವ ಅಭ್ಯರ್ಥಿಗಳಲ್ಲಿ ಯುವ ಸಮೂ ಹವೇ ಹೆಚ್ಚಾಗಿದೆ. ಹಾಗಾಗಿ ಈ ಬಗ್ಗೆ ಹೆಚ್ಚುಗಮನ ನೀಡದೆ ಅಧಿಕಾರವನ್ನು ಅನುಭವಿಸಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಎಸ್. ಬಾಲರಾಜು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಮರಿಸ್ವಾಮಿ, ಉಸ್ತುವಾರಿ ಬಸವರಾಜು,ಗಂಗಾಧರ್ ಜಿಪಂ ಸದಸ್ಯ ಜೆ. ಯೋಗೇಶ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಕೊಳ್ಳೇಗಾಲ ಹಾಗೂ ಯಳಂದೂರು ಬ್ಲಾಕ್‌ಗಳಿಂದ ಗೆದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಸನ್ಮಾನಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ತೋಂಟೇಶ್, ಜಿಪಂ ಸದಸ್ಯೆ ಉಮಾವತಿ, ತಾಪಂಅಧ್ಯಕ್ಷ ಸಿದ್ದರಾಜು, ಸದಸ್ಯರಾದ ವೈ.ಕೆ.ಮೋಳೆ ನಾಗರಾಜು, ನಿರಂಜನ್, ವೆಂಕಟೇಶ್, ಶಿವಮ್ಮ, ಪಪಂಅಧ್ಯಕ್ಷೆ ಶಾಂತಮ್ಮ ನಿಂಗರಾಜು, ಉಪಾಧ್ಯಕ್ಷೆ ಲಕ್ಷ್ಮೀಮಲ್ಲು, ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಬಿ. ರವಿ, ವಡಗೆರೆದಾಸ್, ಚೇತನ್ ದೊರೆರಾಜ್, ಲಿಂಗರಾಜಮೂರ್ತಿ, ಕಿನಕಹಳ್ಳಿ ಸಿದ್ದರಾಜು ಇತರರಿದ್ದರು.
ಅಧ್ಯಕ್ಷ, ಉಪಾಧ್ಯಕ್ಷ ಆಮಿಷಕ್ಕೆ ಬಲಿಯಾಗಬೇಡಿ : ಕೊಳ್ಳೇಗಾಲ ಕ್ಷೇತ್ರದಲ್ಲಿ ಶಾಸಕ ಎನ್. ಮಹೇಶ್ ಅವರು ನನ್ನ ಬೆಂಬಗರು 100 ರಿಂದ 120 ಸ್ಥಾನ ಗೆದ್ದಿದ್ದಾರೆ. ನಾವು ಹಲವು ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲಿದ್ದೇವೆ ಎಂಬ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಆದರೆ, ಇದಕ್ಕೆ ಸೂಕ್ತ ದಾಖಲೆಗಳೇ ಇಲ್ಲ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಆಮಿಷವೊಡ್ಡಿ ತಮ್ಮ ಬೇಳೆಬೇಯಿಸಿಕೊಳ್ಳಲು ಕೆಲವರು ಗಾಳ ಹಾಕುತ್ತಿದ್ದಾರೆ. ಇದರಿಂದ ಬಿಜೆಪಿ ಕೂಡ ಹೊರತಾಗಿಲ್ಲ. ಹೀಗಾಗಿ ಇಂತಹ ಆಮಿಷಗಳಿಗೆ ಯಾವ ಸದಸ್ಯರೂ ಬಲಿಯಾಗಬಾರದು ಎಂದು ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮನವಿ ಮಾಡಿದರು. ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯಲ್ಲಿ 24 ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಸಂಖ್ಯೆ ಅಧಿಕವಾಗಿದ್ದು ಅಧಿಕಾರ ಹಿಡಿಯುವ ಪೂರ್ಣ ವಿಶ್ವಾಸವಿದೆ ಎಂದರು.
ಕ್ಷೇತ್ರಕ್ಕೆ ಶಾಸಕ ಮಹೇಶ್ ಕೊಡುಗೆ ಶೂನ್ಯ : ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಪರವಾದ ನಿಲುವು ಸಾರ್ವಜನಿಕರಲ್ಲಿ ಹೆಚ್ಚಾಗಿದೆ ಎಂಬುದು ಈ ಚುನಾವಣೆ ತೋರಿಸಿಕೊಟ್ಟಿದೆ. ಹಾಲಿ ಇರುವ ಶಾಸಕರು ಸಚಿವರಾಗಿಯೂ ಕೆಲ ಕಾಲ ಕಾರ್ಯನಿರ್ವಹಿಸಿದ್ದರು. ಆದರೆ, ಇವರು ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಶೂನ್ಯವಾಗಿದೆ. ಒಂದೇ ಒಂದು ಹೊಸ ಯೋಜನೆಯನ್ನು ಇವರ ಕೈಯಲ್ಲಿ ತರಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ಕತೆಯೂ ಇದೆ ಆಗಿದೆ ಎಂದು ಧ್ರುವನಾರಾಯಣ್ ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.