ನೂರಕ್ಕೂ ಅಧಿಕ ಶಿಕ್ಷಕರಲ್ಲಿ ಕೋವಿಡ್
Team Udayavani, Jan 7, 2021, 6:15 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ನೂರಕ್ಕೂ ಅಧಿಕ ಶಿಕ್ಷಕರಿಗೆ ಕೊರೊನಾ ದೃಢಪಟ್ಟಿದ್ದು, ಬಹುತೇಕರು ಹೋಂ ಕ್ವಾರಂಟೈನ್, ಐಸೋ ಲೇಶನ್‌ಗೆ ಒಳಗಾಗಿದ್ದಾರೆ.
ಶಾಲೆಗೆ ಬರುವ ಪ್ರತೀ ಶಿಕ್ಷಕರು ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ, ಅದರ ನೆಗೆಟಿವ್ ವರದಿ ಆಧಾರದಲ್ಲೇ ಶಾಲೆಗೆ ಬರಬೇಕು ಎಂದು ಈ ಹಿಂದೆಯೇ ಸರಕಾರ ಸ್ಪಷ್ಟಪಡಿಸಿತ್ತು. ಅದರಂತೆ ಬಹುತೇಕರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೆಲವರ ವರದಿ ಈಗಾಗಲೇ ಬಂದಿದೆ. ಇನ್ನು ಕೆಲವರ ವರದಿ ಬರಬೇಕಿದೆ. ಸುಮಾರು ನೂರಕ್ಕೂ ಅಧಿಕ ಶಿಕ್ಷಕರಿಗೆ ಕೊರೊನಾ ದೃಢಪಟ್ಟಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುರಕ್ಷೆಗೆ ಸಂಬಂಧಿಸಿದ ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಈಗಾಗಲೇ ಜಿಲ್ಲಾ ಉಪನಿರ್ದೇಶಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಕೊರೊನಾ ದೃಢಪಟ್ಟ ಶಿಕ್ಷಕರು ಹೋಂ ಐಸೋಲೇಷನ್, ಕ್ವಾರಂಟೈನ್ ಆಗುತ್ತಿದ್ದಾರೆ. ಹೀಗಾಗಿ ಪಾಲಕರು ಅಥವಾ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಶಾಲಾ ತರಗತಿ, ವಿದ್ಯಾಗಮ ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಶಿಕ್ಷಕರಲ್ಲಿ ಕೋವಿಡ್
ಜ. 1- 2 ಪಾಸಿಟಿವ್
ಜ. 2- 5 ಪಾಸಿಟಿವ್
ಜ. 4- 25 + ಪಾಸಿಟಿವ್
ಜ. 5- 50+
ಜ. 6-100+
ಹಾಸನ – 10 ಶಿಕ್ಷಕರಿಗೆ ಕೋವಿಡ್ ಈ ಶಿಕ್ಷಕರಿದ್ದ ಶಾಲೆಗಳಿಗೆ 3 ದಿನ ರಜೆ
ಚಿಕ್ಕಮಗಳೂರು – 11
ವಿದ್ಯಾರ್ಥಿಗಳು,
7 ಶಿಕ್ಷಕರಿಗೆ ಸೋಂಕು
ನಾಳೆ ಎರಡನೇ ಡ್ರೈ ರನ್
ಈಗಾಗಲೇ ದೇಶಾದ್ಯಂತ ಮೊದಲ ಹಂತದ ಡ್ರೈ ರನ್ ಅನ್ನು ಯಶಸ್ವಿಯಾಗಿ ಮುಗಿಸಿರುವ ಕೇಂದ್ರ ಸರಕಾರ, ಈಗ ಎರಡನೇ ಹಂತದ ಡ್ರೈ ರನ್‌ಗೂ ತಯಾರಾಗಿದೆ. ಶುಕ್ರವಾರ ದೇಶದ ಆಯ್ದ ಜಿಲ್ಲೆಗಳಲ್ಲೂ ಡ್ರೈ ರನ್ ನಡೆಯಲಿದೆ. ಜ.13 ರಿಂದ ದೇಶಾದ್ಯಂತ ಲಸಿಕೆ ವಿತರಣೆ ಆರಂಭವಾಗುವ ಮಾತುಗಳ ಬೆನ್ನಲ್ಲೇ ಎರಡನೇ ಹಂತದ ಪ್ರಾತ್ಯಕ್ಷಿಕೆ ಆರಂಭಿಸಲು ಮುಂದಾಗಿದೆ.
ಎರಡನೇ ಹಂತದ ಡ್ರೈ ರನ್ ಜ. 8 ರಂದು ಉಡುಪಿ ಯಲ್ಲೂ ನಡೆ ಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.